‘ಕಲೆ, ಸಾಹಿತ್ಯ ಉಳಿಸುವುದು ಹಿರಿಯರ ಜವಾಬ್ದಾರಿ’

Team Udayavani, Nov 4, 2018, 3:24 PM IST

4-november-17.gif

ಬೆಳ್ಳಾರೆ: ಸಾಹಿತ್ಯ ಹಾಗೂ ಸಂಸ್ಕೃತಿಗಳನ್ನು ತಿಳಿದುಕೊಳ್ಳಲು ವಿದ್ಯಾರ್ಥಿಗಳಿಗೆ ಸಾಹಿತ್ಯ ಸಮ್ಮೇಳನಗಳಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳ ಮೂಲಕ ಕಲೆ ಹಾಗೂ ಸಾಹಿತ್ಯ ಉಳಿಸುವುದು ಹಿರಿಯರ ಜವಾಬ್ದಾರಿ ಎಂದು ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್‌ ಹೇಳಿದರು.

ಇಲ್ಲಿನ ಸಪಪೂ ಕಾಲೇಜಿನ ನಾರಾಯಣ ಶೇಖ ಸಭಾಭವನದಲ್ಲಿ ಸುವಿಚಾರ ಸಾಹಿತ್ಯ ವೇದಿಕೆ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನಡೆದ ವಿದ್ಯಾರ್ಥಿಗಳ ಸಾಹಿತ್ಯ ಸಂಭ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣ ಹಾಗೂ ಮೊಬೈಲ್‌ನಲ್ಲೇ ಸಮಯ ಪೋಲು ಮಾಡುತ್ತಿರುವುದರಿಂದ ಕಲೆ, ಸಾಹಿತ್ಯದ ಕಡೆಗೆ ಆಸಕ್ತಿ ಕಡಿಮೆಯಾಗಿದೆ. ಹಿರಿಯರಿಂದ ಬಳುವಳಿಯಾಗಿ ಬಂದ ಸಾಹಿತ್ಯ ಸಂಪತ್ತನ್ನು ರಕ್ಷಿಸುವ, ಇನ್ನಷ್ಟು ಶ್ರೀಮಂತಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಮರೆಯಬಾರದು ಎಂದರು.

ಪ್ರಾಂಶುಪಾಲ ಸುಬ್ರಾಯ ಗೌಡ ಮಾತನಾಡಿ, ಮಕ್ಕಳು ಬಿಡುವಿನ ವೇಳೆಯಲ್ಲಿ ಸಾಹಿತ್ಯ ಹಾಗೂ ಕಲೆಯತ್ತ ಚಿತ್ತ ಹರಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸುಳ್ಯ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಚರಿಷ್ಮಾ ಕೆ.ವೈ. ಮಾತನಾಡಿ, ಸಾಹಿತ್ಯದ ರುಚಿಯನ್ನು ವಿದ್ಯಾರ್ಥಿಗಳು ಸವಿಯಬೇಕು. ಬರವಣಿಗೆ ಪಾಕ ಮಾಡುವುದನ್ನು ಕಲಿಯಬೇಕು. ಕಲೆಯ ಕುಂಚದಿಂದ ಭಾಷೆಯನ್ನು ಬಣ್ಣಗಳಿಂದ ರಾರಾಜಿಸುವಂತೆ ಮಾಡಬೇಕು. ಜಗತ್ತಿನ ಶ್ರೇಷ್ಠ ಸಾಹಿತ್ಯಗಳು ತರಗತಿಯೊಳಗೆ ಹರಿದು ಬರಬೇಕು. ಕನ್ನಡದಲ್ಲಿ ಮಾತನಾಡಿದರೆ ಘನತೆ ಕುಂದುತ್ತದೆ ಎಂದು ತಿಳಿದರೆ ಅದು ಕನ್ನಡ ಮಾತೆಗೆ ಮಾಡುವ ಅವಮಾನ. ಕನ್ನಡವು ವಿಶ್ವದಲ್ಲಿಯೇ ಸಿಂಹ ಘರ್ಜನೆ ಮಾಡುವಂತಾಗಬೇಕು ಎಂದರು. 

ಚರಿಷ್ಮಾ ಅವರನ್ನು ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ಬೆಳ್ಳಾರೆ ರೋಟರಿ ಕ್ಲಬ್‌ ಅಧ್ಯಕ್ಷ ಎ.ಕೆ. ಮಣಿಯಾಣಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಾಳಪ್ಪ ಮಣಿಮಜಲು, ಪ್ರೌಢಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ, ಬೆಳ್ಳಾರೆ ಜೆಸಿಐ ಅಧ್ಯಕ್ಷ, ಜಯರಾಮ ಉಮಿಕ್ಕಳ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಮ ಅಮಳ, ಉಪಪ್ರಾಚಾರ್ಯೆ ಉಮಾಕುಮಾರಿ ಉಪಸ್ಥಿತರಿದ್ದರು. ಸುವಿಚಾರ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಪೆರಾಲ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪನ್ಯಾಸಕಿ ಹಸೀನಾ ಬಾನು ವಂದಿಸಿದರು. ಲಿಂಗಪ್ಪ ಗೌಡ ಬೆಳ್ಳಾರೆ  ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.