![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 17, 2023, 11:04 PM IST
ಸುಳ್ಯ:ಕಳ್ಳತನ ಆರೋಪಿಯೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಗ್ರಾಮದ ಗೊಂದಿ ನಿವಾಸಿ ಸುಬ್ರಮಣಿ (26) ಬಂಧಿಯ ಆರೋಪಿ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ದೂರು ದಾಖಲಾಗಿತ್ತು.
ಸೆ.16ರಂದು ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ವಾಹನಗಳನ್ನು ತಪಾಸಣೆ ಮಾಡುವ ವೇಳೆ ಸುಳ್ಯ ಎಸೈ ಈರಯ್ಯ ಮತ್ತು ಸಿಬ್ಬಂದಿಗಳು ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧನ ಆರೋಪಿ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಾಗೂ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕೆಲ ದಿನಗಳ ಹಿಂದೆ ಸುಳ್ಯ ಪೇಟೆಯಲ್ಲಿ ಸಿಕ್ಕ ವ್ಯಕ್ತಿಯೊಬ್ಬರ ಚಿನ್ನದ ಸರ ತೆಗೆದುಕೊಂಡು ಹೋಗಿರುತ್ತಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
You seem to have an Ad Blocker on.
To continue reading, please turn it off or whitelist Udayavani.