Sullia: ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್ ಮೂಲಕ ತ್ರಿವಳಿ ತಲಾಕ್
Team Udayavani, Sep 17, 2023, 11:00 PM IST
ಸುಳ್ಯ: ಸುಳ್ಯ ಜಯನಗರದ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ ನಡೆದಿದೆ.
ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್ ಠಾಣೆಗೆ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು.
ವಿವಾಹದ ಬಳಿಕ ಆಕೆಯನ್ನು ಉತ್ತಮವಾಗಿ ನೋಡಿಕೊಂಡಿದ್ದು, ಅವರಿಗೆ ಇದೀಗ ಎರಡು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು ಪತಿ ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದರು. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ಪತ್ನಿ ಮನೆಯಲ್ಲಿ ಬಿಟ್ಟು ವಿದೇಶಕ್ಕೆ ಉದ್ಯೋಗಕ್ಕೆ ತರೆಳಿದ್ದರು.
ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎನ್ನಲಾಗಿದ್ದು ಆದರೆ ಸಂಬಂಧಿಕರು, ಹಿರಿಯರು ಇದರ ಬಗ್ಗೆ ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದ್ದರು. ಆದರೆ ಇದು ಯಾವುದನ್ನು ಕೇಳದೆ ಏಕಾಏಕಿ ಪತಿ ರಾಶಿದ್, ಪತ್ನಿಯ ಮೊಬೈಲ್‌ಗೆ ಮೂರು ತಲಾಖ್‌ನ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ಮನನೊಂದ ಮಹಿಳೆ ಸುಳ್ಯ ಪೊಲೀಸರಿಗೆ ತನಗೆ ನ್ಯಾಯ ಕೊಡಿಸುವಂತೆ ದೂರು ನೀಡಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.