![9-ullala](https://www.udayavani.com/wp-content/uploads/2024/12/9-ullala-415x249.jpg)
ಸುಳ್ಯ-ಮಡಿಕೇರಿ ಪರ್ಯಾಯ ರಸ್ತೆ ಅಭಿವೃದ್ಧಿಗೆ ಇಲ್ಲ ಆಸಕ್ತಿ
Team Udayavani, Jul 15, 2019, 5:41 AM IST
![road](https://www.udayavani.com/wp-content/uploads/2019/07/road-4-620x403.jpg)
ಸುಳ್ಯ: ಸುಳ್ಯ ಮತ್ತು ಮಡಿಕೇರಿ ನಡುವಿನ ಪರ್ಯಾಯ ರಸ್ತೆ ಆಗಿರುವ ಸುಳ್ಯದಿಂದ ಆಲೆಟ್ಟಿ, ಬಡ್ಡಡ್ಕ, ಪಾಣತ್ತೂರು, ಕರಿಕೆ ಭಾಗಮಂಡಲ ರಸ್ತೆಯ ಆಯ್ದ ಭಾಗದ ದುರಸ್ತಿಗೆ ಅನುದಾನ ಲಭ್ಯವಿದ್ದರೂ ದುರಸ್ತಿಗೆ ಮನಸ್ಸು ಮಾಡಿಲ್ಲ.
ಸುಳ್ಯ-ಪಾಣತ್ತೂರು ರಸ್ತೆಯಲ್ಲಿ ಸುಳ್ಯ ತಾಲೂಕಿನ 10 ಕಿ.ಮೀ. ಸುಳ್ಯ ಆಲೆಟ್ಟಿ ಬಡ್ಡಡ್ಕದ ಮೂಲಕ ಬಾಟೋಳಿ ಗಡಿ ತನಕ ಡಾಮರು ಆಗಿದ್ದರೂ ಹೊಂಡ-ಗುಂಡಿ ಬಿದ್ದು ರಸ್ತೆ ಹದಗೆಟ್ಟು ಹೋಗಿದೆ. ಕಳೆದ ಮಳೆಗಾಲದ ಮಹಾ ಮಳೆಗೆ ರಸ್ತೆ ಹೊಂಡ-ಗುಂಡಿ ಬಿದ್ದು ಸಂಚಾರ ದುಸ್ತರವಾಗಿದೆ.
ನಿರಂತರ ಒತ್ತಾಯ, ಶಾಸಕ ಎಸ್. ಅಂಗಾರ ಅವರ ನಿರ್ದೇಶನದ ಮೇರೆಗೆ ಈ ರಸ್ತೆಯ ದುರಸ್ತಿಗೆ ಮಳೆಹಾನಿ ದುರಸ್ತಿ ಯೋಜನೆಯಡಿ 25 ಲಕ್ಷ ರೂ. ಅನುದಾನ ಮೀಸಲಿರಿಸಲಾಗಿತ್ತು. ಆದರೆ ಮತ್ತೂಂದು ಮಳೆಗಾಲ ಬಂದರೂ ರಸ್ತೆಯ ದುರಸ್ತಿ ಕಾರ್ಯ ಮಾತ್ರ ಆಗಿಲ್ಲ.
ಗಾಂಧಿನಗರದಿಂದ ಗುರುಂಪು ತನಕ ಕಾಂಕ್ರೀಟ್ ಮತ್ತು ನಾಗಪಟ್ಟಣದಿಂದ ಗುಂಡ್ಯ ತನಕ ತೇಪೆ ಮಾಡಿ ದುರಸ್ತಿ ಮಾಡಲಾಗಿತ್ತು.
ಸಂಪೂರ್ಣ ಹದಗೆಟ್ಟಿರುವ ಗುಂಡ್ಯದಿಂದ ಬಡ್ಡಡ್ಕ ತನಕ ದುರಸ್ತಿ ಬಾಕಿ ಉಳಿದಿದೆ. ಇದೀಗ ಮಳೆಗಾಲ ಆರಂಭಗೊಂಡರೂ ಹೊಂಡಗಳು ಬಾಯ್ದೆರೆದು ಕೆಸರು, ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ಯೋಗ್ಯವಾಗಿಲ್ಲ.
ಕಳೆದ ಜನವರಿಯಲ್ಲಿ ಅನುದಾನ ಮಂಜೂರಾಗಿದ್ದರೂ ಹಣ ಬಿಡುಗಡೆಗೆ ವಿಳಂಬ, ಚುನಾವಣ ನೀತಿ ಸಂಹಿತೆ ಮತ್ತಿ ತರ ಕಾರಣಗಳಿಂದ ಟೆಂಡರ್ ನಡೆಯಲು ವಿಳಂಬವಾಗಿ ಕಾಮಗಾರಿ ನಡೆಸಲಾಗಲಿಲ್ಲ ಎನ್ನುವುದು ಜಿ.ಪಂ. ಎಂಜಿನಿಯರರು ನೀಡುವ ಉತ್ತರ. ರಾ.ಹೆ.ಗೆ ಪರ್ಯಾಯ ರಸ್ತೆ ಸುಳ್ಯ-ಮಡಿಕೇರಿ ರಾ.ಹೆ.ಯ ಪರ್ಯಾಯ ರಸ್ತೆ ಸುಳ್ಯ ಕರಿಕೆ ರಸ್ತೆ. ಕಳೆದ ಮಳೆಗಾಲದಲ್ಲಿ ಭೂಕುಸಿತ, ರಸ್ತೆ ಕೊಚ್ಚಿ ಹೋಗಿ ಸಂಪಾಜೆ-ಮಡಿಕೇರಿ ಮಧ್ಯೆ ರಸ್ತೆ ಮುಚ್ಚಿದಾಗ ಪರ್ಯಾಯ ರಸ್ತೆಯಾಗಿ ಸುಳ್ಯ-ಪಾಣತ್ತೂರು-ಕರಿಕೆ ರಸ್ತೆಯನ್ನು ಬಳಸಿಕೊಳ್ಳಲಾಗಿತ್ತು. ಸುಳ್ಯದಿಂದ ಮಡಿಕೇರಿಗೆ ದಿನಾಲೂ ಸಾವಿರಾರು ವಾಹನಗಳು ಓಡಾಟ ನಡೆಸಿದವು. ಮಡಿಕೇರಿಯಿಂದ ಸುಳ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸರ್ವೀಸ್ ಕೂಡ ನಡೆಸಿತ್ತು. ಸುಳ್ಯದಿಂದ ಕರಿಕೆ ಮೂಲಕ ಮಡಿಕೇರಿಗೆ 90 ಕಿ.ಮೀ. ದೂರವಿದೆ. ಇದರಲ್ಲಿ ಅಂತಾರಾಜ್ಯ ಸಂಪರ್ಕ ಕಲ್ಪಿಸುವ ಸುಳ್ಯ-ಪಾಣತ್ತೂರು ರಸ್ತೆ ಎರಡೂ ರಾಜ್ಯಗಳಲ್ಲಿ ತಲಾ 10 ಕಿ.ಮೀ.ನಂತೆ 20 ಕಿ.ಮೀ. ದೂರವಿದೆ.
ಟಾಪ್ ನ್ಯೂಸ್
![9-ullala](https://www.udayavani.com/wp-content/uploads/2024/12/9-ullala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![7(1](https://www.udayavani.com/wp-content/uploads/2024/12/71-4-150x80.jpg)
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
![9-ullala](https://www.udayavani.com/wp-content/uploads/2024/12/9-ullala-150x90.jpg)
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
![BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ](https://www.udayavani.com/wp-content/uploads/2024/12/virat-150x87.jpg)
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
![6](https://www.udayavani.com/wp-content/uploads/2024/12/6-36-150x80.jpg)
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
![8-belthangady](https://www.udayavani.com/wp-content/uploads/2024/12/8-belthangady-150x90.jpg)
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.