ಸುಬ್ರಹ್ಮಣ್ಯ : ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸುನಿಲ್ ಭೇಟಿ
Team Udayavani, Aug 4, 2022, 9:16 AM IST
ಸುಬ್ರಹ್ಮಣ್ಯ : ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಆ ಬಳಿಕ ಸಚಿವರು ಪಂಜದಲ್ಲಿರುವ ಮೃತ ಮಕ್ಕಳ ಅಜ್ಜನ ಮನೆಗೆ ಭೇಟಿ ನೀಡಿ ತಂದೆ- ತಾಯಿ, ಮನೆಯವರಿಗೆ ಸಾಂತ್ವನ ಹೇಳಿದರು.
ಮಳೆಹಾನಿ ಪ್ರದೇಶಗಳಿಗೆ ಭೇಟಿ
ಮಳೆಹಾನಿಗೆ ಒಳಗಾದ ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಬಾಳುಗೋಡು, ಕಲ್ಮಕಾರು ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದರು. ಹಾನಿಗೆ ಒಳಗಾದವರಿಗೆ ಕಾನೂನು ಚೌಕಟ್ಟಿನೊಳಗೆ ಪರಿಹಾರ ನೀಡುವ ಕಾರ್ಯ ನಡೆಸಲಾಗಿದೆ. ಕೃಷಿಹಾನಿ ಬಗ್ಗೆಯೂ ಪರಿಹಾರ ನೀಡಲಾಗುತ್ತದೆ ಎಂದರು.
ಸಚಿವರು ಮಳೆಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು. ಸೇತುವೆ ಹಾನಿ, ರಸ್ತೆ ಹಾನಿ, ಕೃಷಿ ಹಾನಿ, ಮನೆ ಹಾನಿ, ಮನೆ ಕುಸಿತ, ಗುಡ್ಡ ಕುಸಿತ ಸೇರಿದಂತೆ ಮಳೆಹಾನಿ ಘಟನ ಸ್ಥಳಗಳಿಗೆ ತೆರಳಿ ವೀಕ್ಷಣೆ ನಡೆಸಿದರು.
ಹರಿಹರ ಪಲ್ಲತ್ತಡ್ಕ ಹಾಗೂ ಕೊಲ್ಲಮೊಗ್ರು ಗ್ರಾ. ಪಂ. ವ್ಯಾಪ್ತಿಯ ಮಳೆಹಾನಿ ಪ್ರದೇಶಕ್ಕೆ ತೆರಳಿದ ಸಚಿವರು ಮಳೆಯ ರುದ್ರನರ್ತನಕ್ಕೆ ನಲುಗಿದ ಹರಿಹರ ಪೇಟೆ ಹಾಗೂ ಕಲ್ಮಕಾರಿನ ಸ್ಥಿತಿ ಕಂಡು ದಿಗ್ಬ್ರಮೆ ವ್ಯಕ್ತಪಡಿಸಿ, ಇಲ್ಲಿನ ಜನರಿಗೆ ಆದಷ್ಟು ಬೇಗ ಸಂಪರ್ಕ ಕಲ್ಪಿಸುವ ತುರ್ತು ಕಾರ್ಯಕ್ಕೆ ಅಧಿಕಾರಿಗಳು ಗಮನಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಅಂಗಡಿ ಹಾನಿ: ಪರಿಹಾರಕ್ಕೆ ಪ್ರಯತ್ನ
ಮನೆ ಹಾನಿಗೆ 95 ಸಾವಿರ ರೂ. ನೀಡಲಾಗಿದೆ. ಮನೆ ನಿರ್ಮಿಸುವುದಿದ್ದಲ್ಲಿ 4 ಲಕ್ಷ ರೂ. ನೀಡಲಾಗುವುದು. ಅಂಗಡಿಗಳಿಗೆ ಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅವಕಾಶ ಇಲ್ಲ. ಆದರೂ ಸಿಎಂ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಿಸಲು ಮನವಿ ಮಾಡಲಿದ್ದೇನೆ. ಅಂಗಡಿ ಹಾನಿಗೂ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಸುನಿಲ್ ಕುಮಾರ್ ಪ್ರತಿಕ್ರಿಯಿಸಿದರು.
ಯೇನೆಕಲ್ಲು: ಮನೆಗಳಿಗೆ ಭೇಟಿ
ಭಾರೀ ಮಳೆಗೆ ಹಾನಿಗೊಳಗಾದ ಯೇನೆಕಲ್ಲಿನ ಕುಶಾಲಪ್ಪ, ರವಿ, ಮತ್ತಿತರರ ಮನೆಗೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆಯವರಿಂದ ಮಾಹಿತಿ ಪಡೆದು ಕೊಂಡರು. ಆ ಬಳಿಕ ಹಾನಿಗೊಳಗಾದ ಯೇನೆ ಕಲ್ಲಿನ ಹೆದ್ದಾರಿಯ ಸೇತುವೆಯನ್ನು ವೀಕ್ಷಿಸಿದರು.
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್, ಪುತ್ತೂರು ಎಸಿ ಗಿರೀಶ್ ನಂದನ್, ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ, ಕಡಬ ತಹಶೀಲ್ದಾರ್ ಅನಂತಶಂಕರ, ಕಡಬ ಇಒ ನವೀನ್ ಭಂಡಾರಿ, ಎಸಿಎಫ್ ಪ್ರವೀಣ್ ಶೆಟ್ಟಿ, ಆರ್‌ಎಫ್ಇ ಮಂಜುನಾಥ, ಆರ್‌ಐಗಳಾದ ಕೊರಗಪ್ಪ ಹೆಗ್ಡೆ, ಅವಿನ್ ರಂಗತ್ತಮಲೆ, ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ದೇರಾಜೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Sulya: ನಿಲ್ಲಿಸಿದ್ದ ಕಾರಿಗೆ ಬಸ್ ಢಿಕ್ಕಿ; ಜಖಂ
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.