ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ
Team Udayavani, Oct 25, 2020, 8:27 AM IST
ಬಂಟ್ವಾಳ: ಇಲ್ಲಿನ ಭಂಡಾರಿಬೆಟ್ಟು ವಸತಿ ಸಂಕೀರ್ಣದಲ್ಲಿ ಹತ್ಯೆಯಾದ ಸುರೇಂದ್ರ ಬಂಟ್ವಾಳ್ ಹತ್ಯೆಯ ಪ್ರಧಾನ ಆರೋಪಿಗಳಾಗಿ ಕಂಡುಬಂದಿದ್ದ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಮುಡಿಪು ಎಂಬಲ್ಲಿ ಪೊಲೀಸರು ಬಂಧಿಸಿದ್ದು, ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿ ನಿವಾಸಿ ಗಿರೀಶ್ ಬಂಧಿತ ಆರೋಪಿಗಳು. ಇವರು ಶನಿವಾರ ರಾತ್ರಿ ಕೇರಳ ಭಾಗದಿಂದ ಬಂಟ್ವಾಳ ಕಡೆಗೆ ಬರುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಡಿವೈಎಸ್ಪಿ ವೆಲೆಂಟೆನ್ ಡಿಸೋಜ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಾರಿಬೆಟ್ಟಿನ ವಸತಿ ಸಂಕೀರ್ಣವೊಂದರಲ್ಲಿ ವಾಸವಿದ್ದ ಉದ್ಯಮಿ, ನಟ ಸುರೇಂದ್ರ ಬಂಟ್ವಾಳ ಯಾನೆ ಸುರೇಂದ್ರ ಭಂಡಾರಿ (39) ಯನ್ನು ಹರಿತವಾದ ಆಯುಧಗಳಿಂದ ಕಡಿದು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿದ ಘಟನೆ ಕಳೆದ ಬುಧವಾರ ಮಧ್ಯಾಹ್ನದ ವೇಳೆಗೆ ಬೆಳಕಿಗೆ ಬಂದಿತ್ತು.
ಆಡಿಯೋ ವೈರಲ್: ಸುರೇಂದ್ರ ಬಂಟ್ವಾಳ್ ಹತ್ಯೆಯಾದ ಮರುದಿನ ಆತನ ಆಪ್ತ ಸತೀಶ್ ಎನ್ನುವಾತ ಮಾತನಾಡುತ್ತಿರುವ ರೀತಿಯಲ್ಲಿ ರೆಕಾರ್ಡ್ ಆಗಿರುವ ಆಡಿಯೋ ಒಂದು ವೈರಲ್ ಆಗಿತ್ತು. ಇದರಲ್ಲಿ ಸುರೇಂದ್ರನನ್ನು ತಾನೇ ಹತ್ಯೆ ಮಾಡಿರುವುದು, ಕಿಶನ್ ಹೆಗ್ಡೆ ಕೊಲೆಗೆ ಇದು ಪ್ರತೀಕಾರ ಎಂದು ಹೇಳಲಾಗಿತ್ತು.
ಇದನ್ನೂ ಓದಿ:ಹನಿಟ್ರ್ಯಾಪ್: 5.45 ಲಕ್ಷ ರೂ. ದರೋಡೆ; ಬಂಧನ
ಕಿಶನ್ ಹೆಗ್ಡೆ ಕೊಲೆಯಲ್ಲಿ ಇವನು ಹಣದ ಸಹಾಯ ಮಾಡಿರುವ ವಿಷಯ ನನಗೆ ತಿಳಿದಿತ್ತು. ನಾನು ಅವನ ಹತ್ತಿರ ಹೇಳಿದ್ದೆ, ನೀನು ತಪ್ಪು ಮಾಡುತ್ತಿದ್ದೀಯ ಸುರೇಂದ್ರ, ನಿನಗೆ ಬೇಡದ ವಿಷಯ. ಆಗ ಈ ವಿಷಯ ಹೊರಗಡೆ ಹೇಳಿದ್ರೆ ನಿನ್ನನ್ನು ಸಾಯಿಸುತ್ತೇನೆ ಅಂತ ನನಗೇ ಬೆದರಿಕೆ ಹಾಕಿದ್ದ. ಮೊನ್ನೆ ಅನಾಮಿಕ ಯುವಕನಿಗೆ ಕರೆ ಮಾಡಿ ಜೈಲಿನಲ್ಲಿರೋ ಮನೋಜನಿಗೆ ಹಣ, ಬಟ್ಟೆ ಕೊಡಲಿಕ್ಕಿದೆ. ಇದಕ್ಕೆ ನಿಮ್ಮ ಸಹಾಯ ಬೇಕು ಅಂತಾ ಹೇಳುತ್ತಿದ್ದ. ಮತ್ತೂಂದು ದಿನ ರಾತ್ರಿ ಕರೆ ಮಾಡಿ ಬಟ್ಟೆ, ಹಣ ತಲುಪಿಸಿದ್ದೇನೆ. ಸಹಾಯ ಮಾಡಿದ್ದಕ್ಕಾಗಿ ಥ್ಯಾಂಕ್ಸ್ ಅಂತಾ ಹೇಳಿದ್ದನ್ನು ನಾನು ಕೇಳಿದ್ದೇನೆ. ಮತ್ತೆ ಈ ವಿಚಾರದಲ್ಲಿ ನಾನು ಕಿಶನ್ ಜತೆ ಇದ್ದ ನನ್ನ ಗೆಳೆಯನಿಗೆ ಕರೆ ಮಾಡಿ ತಿಳಿಸಿದೆ. ಅವನಿಗೆ ಈ ವಿಚಾರದಲ್ಲಿ ಕೋಪ ಮತ್ತು ಬೇಸರ ಕೂಡ ಇತ್ತು. ಇವನು ಇದೇ ರೀತಿ ಇದ್ದರೆ ಸುರೇಂದ್ರ ಮತ್ತು ಕೋಡಿಕೆರೆ ಮನೋಜನಿಂದ ಹಲವು ಯುವಕರ ಕೊಲೆಯಾಗುವುದರಲ್ಲಿ ಸಂಶಯವಿಲ್ಲ. ಅದಕ್ಕಾಗಿ ನಾವು ಈ ಕೊಲೆ ಮಾಡಿದ್ದೇವೆ. ನಾವೀಗ ಕಾರವಾರದಲ್ಲಿದ್ದು, ಏನು ಮಾಡಬೇಕೆಂದು ತೋಚದೆ ಇಲ್ಲಿಗೆ ಬಂದಿದ್ದೇವೆ. 2-3 ದಿನದಲ್ಲಿ ಪೊಲೀಸರಿಗೆ ಶರಣಾಗುತ್ತೇವೆ ಎಂದು ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಹೇಳಿದ್ದು, ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.