ಮಗುಚಿ ಬಿದ್ದ ಸಿಮೆಂಟ್ ಹುಡಿ ತುಂಬಿದ ಟ್ಯಾಂಕರ್: ಮಣ್ಣಿನಡಿ ಹೂತು ಹೋದ ಚಾಲಕ
Team Udayavani, Aug 3, 2020, 3:28 PM IST
ಉಪ್ಪಿನಂಗಡಿ: ಸಿಮೆಂಟ್ ಹುಡಿ ಹೇರಿಕೊಂಡು ಬರುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಚರಂಡಿಗೆ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು- ಮಂಗಳೂರು ರಸ್ತೆಯ ನೀರಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಸಿಮೆಂಟ್ ಹುಡಿ ಹೇರಿಕೊಂಡು ಬರುತ್ತಿದ್ದ ಟ್ಯಾಂಕರ್ ಮಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬರುತ್ತಿದ್ದಾಗ ಮಗುಚಿ ಬಿದ್ದಿದೆ. ಬಿದ್ದ ರಭಸಕ್ಕೆ ಚಾಲಕ ಗಣೇಶ್ ಚರಂಡಿಯಲ್ಲಿದ್ದ ಮಣ್ಣಿನೊಳಗೆ ಹೂತು ಹೋಗಿದ್ದ.
ಆದರೆ ವಾಹನ ಮಾತ್ರ ಚಾಲನೆಯಲ್ಲಿದ್ದು, ಚಾಲಕ ಮಣ್ಣಿನಲ್ಲಿ ಸಿಲುಕಿದ್ದ. ಇದನ್ನು ಕಂಡ ಸ್ಥಳೀಯರಾದ ಮನ್ಸೂರ್ ಹಾಗೂ ಮುಫ್ತಾಬ್ ಸೇರಿದಂತೆ ಆಸುಪಾಸಿನ ಮನೆಗಳ ಮಂದಿ ಆತನನ್ನು ಮಣ್ಣಿನಡಿಯಲ್ಲಿ ಹುಡುಕಿ ಹೊರತೆಗೆದರು.
ನಂತರ ಗಾಯಾಳು ಚಾಲಕನನ್ನು ನೆಲ್ಯಾಡಿ ಆಸ್ಪತ್ರೆಗೆ ಕರೆದೊಯ್ದು ನಂತರ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.