Election Commissionಕ್ಕೆ ಪತ್ರ :ಪ್ರಸ್ತಾವನೆ ಪುರಸ್ಕರಿಸಿದ ಆಯೋಗ; ಕ್ರಮಕ್ಕೆ ಸೂಚನೆ
ಬಾಳ್ತಿಲದ ಬಾಲಕಿಯಿಂದ ಚುನಾವಣ ಆಯೋಗಕ್ಕೆ ಪತ್ರ
Team Udayavani, Mar 6, 2024, 9:44 AM IST
ಬಂಟ್ವಾಳ: ಮತದಾನ ಜಾಗೃತಿಯ ಹಿನ್ನೆಲೆಯಲ್ಲಿ ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ಸನ್ನಿಧಿ ಎಲ್.ಎಸ್. ಅವರು ರಾಜ್ಯ ಚುನಾವಣ ಆಯೋಗದ ಮುಖ್ಯಚುನಾವಣಾಧಿಕಾರಿಗಳಿಗೆ ಬರೆದಿರುವ ಪತ್ರವನ್ನು ಪುರಸ್ಕರಿಸಿರುವ ಆಯೋಗ ಆಕೆಯ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಒಗೆ ಆದೇಶಿಸಿದೆ.
ಬಾಲಕಿಯು ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ತನ್ನ ಸ್ನೇಹಿತರ ಜತೆಗೂಡಿ ಬಾಳ್ತಿಲ ಭಾಗದಲ್ಲಿ ಮತದಾನದ ಕುರಿತು ಜಾಗೃತಿಯ ಕಾರ್ಯ ಮಾಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯ ಸಂದರ್ಭ ಶೇ. 100 ಮತದಾನವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಲು ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ತಾವು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ವಿವರಿಸಿದ್ದರು.
ಸನ್ನಿಧಿ ಅವರ ಪ್ರಸ್ತಾವನೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಚುನಾವಣೆಗೆ)ಯ ಸರಕಾರದ ಅಧೀನ ಕಾರ್ಯದರ್ಶಿ ಮಧು ಎ.ಸಿ. ಅವರು ಪತ್ರ ಬರೆದು ಆದೇಶಿಸಿದ್ದಾರೆ.
ಡಿಸಿಯಿಂದ ಸಮ್ಮಾನ ರಾಜ್ಯ ಚುನಾವಣಾ ಆಯೋಗದಿಂದ ಶಹಬ್ಟಾಸ್ ಗಿರಿ ಪಡೆದಿರುವ ಸನ್ನಿಧಿ ಕಶೆಕೋಡಿ ಅವರನ್ನು ಮಂಗಳವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಮ್ಮಾನಿಸಿದರು. ಸನ್ನಿಧಿ ಜತೆ ಕೆಲಕಾಲ ಮಾತುಕತೆ ನಡೆಸಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.