ಕಟ್ಟಡ ನಿರ್ಮಾಣಕ್ಕೆ ಇನ್ನೂ ಅಂತಿಮಗೊಳ್ಳದ ನಿವೇಶನ

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆ

Team Udayavani, Nov 10, 2021, 5:20 AM IST

ಕಟ್ಟಡ ನಿರ್ಮಾಣಕ್ಕೆ ಇನ್ನೂ ಅಂತಿಮಗೊಳ್ಳದ ನಿವೇಶನ

ಬಂಟ್ವಾಳ: ಬಂಟ್ವಾಳಕ್ಕೆ ಸಂಚಾರ ಪೊಲೀಸ್‌ ಠಾಣೆ ಮಂಜೂರುಗೊಂಡು 7 ವರ್ಷ ಕಳೆದರೂ ಇನ್ನೂ ಸ್ವಂತ ಕಟ್ಟಡಕ್ಕೆ ನಿವೇ ಶನವೇ ಅಂತಿಮಗೊಂಡಿಲ್ಲ. ಈಗಾ ಗಲೇ ಸಾಕಷ್ಟು ಕಡೆಗಳಲ್ಲಿ ಜಾಗ ಗುರುತಿ ಸಿದರೂ, ಅದು ಠಾಣೆಯ ಕಾರ್ಯ ನಿರ್ವಹಣೆಗೆ ಸೂಕ್ತವಾಗದ ಹಿನ್ನೆಲೆಯಲ್ಲಿ ಇನ್ನೂ ಹುಡುಕಾಟದ ಹಂತದಲ್ಲೇ ಇದೆ.

ಬಂಟ್ವಾಳ ಗ್ರಾಮಾಂತರ ಹಾಗೂ ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ರಸ್ತೆ ಸಂಚಾರ ವ್ಯವಸ್ಥೆಯನ್ನು ಸಂಚಾರ ಠಾಣೆ ನೋಡಿಕೊಳ್ಳುತ್ತಿದ್ದು, ರಾ.ಹೆ.75ರ ಮೆಲ್ಕಾರ್‌ ಸಮೀಪದಲ್ಲಿನ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಬಾಡಿಗೆ ಕಟ್ಟಡವು ಸೋರುತ್ತಿದ್ದು, ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಟರ್ಪಾಲು ಬಳಸಬೇಕಾದ ಸ್ಥಿತಿ ಇದೆ.

ಸಾಮಾನ್ಯವಾಗಿ ಪೊಲೀಸ್‌ ಠಾಣೆಗಳು ಪ್ರಮುಖ ಹೆದ್ದಾರಿ, ರಸ್ತೆಯ ಪಕ್ಕದಲ್ಲೇ ಇರಬೇಕಾಗಿದೆ. ಆದರೆ ಬಂಟ್ವಾಳ ಸುತ್ತಮುತ್ತಲ ಪ್ರದೇಶದಲ್ಲಿ ಠಾಣೆಗೆ ಸೂಕ್ತವಾದ ಸರಕಾರಿ ಜಾಗ ಲಭ್ಯವಾಗದೇ ಇರುವುದರಿಂದ ಸಮಸ್ಯೆಯಾಗಿದೆ.

ವಾಹನ ನಿಲುಗಡೆಗೂ ಅವಕಾಶ
ಸಂಚಾರ ಪೊಲೀಸ್‌ ಠಾಣೆ ಎಂದರೆ ಅದಕ್ಕೆ ಕಟ್ಟಡಕ್ಕಿಂತಲೂ ಹೆಚ್ಚಿನ ಸ್ಥಳವಕಾಶ ವಾಹನ ನಿಲುಗಡೆಗೆ ಬೇಕಾಗುತ್ತದೆ. ಅಪಘಾತಗಳು ನಡೆದಾಗ ವಾಹನಗಳನ್ನು ಠಾಣೆಗೆ ತಂದು ನಿಲ್ಲಿಸಬೇಕಿದ್ದು, ದ್ವಿಚಕ್ರ ವಾಹನದಿಂದ ಹಿಡಿದು ಬಸ್‌-ಲಾರಿಯನ್ನೂ ಠಾಣೆಯಲ್ಲಿ ನಿಲ್ಲಿಸಬೇಕಾಗುತ್ತದೆ. ಹೀಗಾಗಿ ಅವುಗಳಿಗೆ ಹೆಚ್ಚಿನ ಜಾಗ ಬೇಕಾಗುತ್ತದೆ.

ಕೆಲವೊಂದು ವಾಹನಗಳು ಒಂದೆರಡು ದಿನಗಳಲ್ಲಿ ಬಿಡುಗಡೆಗೊಂಡರೆ, ಇನ್ನು ಕೆಲವು ಹಲವು ಸಮಯಗಳವರೆಗೆ ಅಲ್ಲೇ ಇರುತ್ತವೆ. ಹೀಗಾಗಿ ಕೊಂಚ ವಿಸ್ತಾರವಾದ ಹಾಗೂ ರಸ್ತೆ ಬದಿಯಲ್ಲೇ ಇರುವ ಜಾಗ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಹಿಂದೆ ಗುರುತಿಸಲಾದ ಯಾವುದೇ ನಿವೇಶನಗಳು ಠಾಣೆಗೆ ಸೂಕ್ತವಾಗದ ಕಾರಣದಿಂದ ಇನ್ನೂ ಕೂಡ ಹುಡುಕಾಟ ಮುಂದುವರಿದಿದೆ.

ಇದನ್ನೂ ಓದಿ:ಇನ್‌ಸ್ಟಾಗ್ರಾಂ ಡೌನ್‌ಲೋಡ್‌ಗೆ ಭಾರತವೇ ಫ‌ಸ್ಟ್‌

ಒಂದು ನಿವೇಶನ
ಮಂಜೂರಾಗಿದೆ
ಪಾಣೆಮಂಗಳೂರು ಗೂಡಿನಬಳಿಯಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿದ್ದ ಪಶು ಇಲಾಖೆಯ ಹಳೆಯ ಕಟ್ಟಡದ ನಿವೇಶನ ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಗೆ ಮಂಜೂರಾಗಿತ್ತು. ಆದರೆ ಅಲ್ಲಿ ಠಾಣೆಗೆ ಬೇಕಾದಷ್ಟು ಸ್ಥಳ ಇಲ್ಲದೇ ಇರುವುದರಿಂದ ಅದು ಹಾಗೇ ಉಳಿದುಕೊಂಡಿದೆ. ಈ ನಿವೇಶನದಲ್ಲಿ ಪಾಳುಬಿದ್ದ ಕಟ್ಟಡವಿದ್ದು, ಜಾಗವು ಒತ್ತುವರಿಯಾಗುವ ಆತಂಕವೂ ಎದುರಾಗಿತ್ತು. ಪೊಲೀಸ್‌ ಇಲಾಖೆಯು ಆ ಜಾಗವನ್ನು ಸದ್ಬಳಕೆ ಮಾಡಿಕೊಂಡು ಪ್ರಸ್ತುತ ಪಾಳು ಬಿದ್ದ ಕಟ್ಟಡವನ್ನು ದುರಸ್ತಿ ಮಾಡುವ ಕಾರ್ಯ ಮಾಡಿದೆ. ಜತೆಗೆ ಬಂಟ್ವಾಳದ ಬಂದೋಬಸ್ತಿಗೆ ಆಗಮಿಸುವ ಕೆಎಸ್‌ಆರ್‌ಪಿ ಸಿಬಂದಿ ಆ ನವೀಕೃತ ಕಟ್ಟಡದಲ್ಲಿ ವಾಸ್ತವ್ಯ ಪಡೆಯುತ್ತಿದ್ದಾರೆ. ಮೊದಲಾದರೆ ಅವರು ಬಂಟ್ವಾಳ ಸುತ್ತಮುತ್ತಲಿನ ಸಭಾಂಗಣಗಳಲ್ಲಿ ವಾಸ್ತವ್ಯ ಹೂಡಬೇಕಿದ್ದು, ಅಲ್ಲಿ ಸಮಾರಂಭವಿದ್ದರೆ ಮತ್ತೂಂದಕ್ಕೆ ಹೋಗಬೇಕಾದ ಸ್ಥಿತಿ ಇತ್ತು.

ಸಮಯ ತೆಗೆದುಕೊಳ್ಳಲಿದೆ
ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಗೆ ಸೂಕ್ತವಾದ ನಿವೇಶನ ಸಿಗಬೇಕಿದ್ದು, ಅದರ ಬಳಿಕವೇ ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ನಿವೇಶನ ಅಂತಿಮಗೊಳಿಸುವುದಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುವ ಸಾಧ್ಯತೆ ಇದೆ.
-ಹೃಷಿಕೇಶ್‌ ಭಗವಾನ್‌ ಸೋನಾವಣೆ,
ಪೊಲೀಸ್‌ ವರಿಷ್ಠಾಧಿಕಾರಿ, ದ.ಕ.

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

12-udupi

Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

7

Mulki: ಉಗುಳಿದರೆ ದಂಡ; ಹಾಕುವವರು ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.