ನಾಪತ್ತೆಯಾಗಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೃತದೇಹ ನದಿಯಲ್ಲಿ ಪತ್ತೆ
Team Udayavani, Apr 1, 2024, 12:04 AM IST
ಬೆಳ್ತಂಗಡಿ/ಪುಂಜಾಲಕಟ್ಟೆ: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಅಮಾrಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ ಅವರ ಮೃತದೇಹವು ಮಾ. 31ರಂದು ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯ ಪಟ್ರಮೆ ಹೊಳೆಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಕೊಲ್ಪೆದಬೈಲು ನಿವಾಸಿ, ಸುಮಾರು 6 ವರ್ಷಗಳಿಂದ ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮೀನಾರಾಯಣ ಕೆ. (52) ಅವರು, ಮಾ. 27 ರಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ಮನೆಯವರು ಅಮ್ಟಾಡಿ ಪಂಚಾಯತ್‌ನಲ್ಲಿ ವಿಚಾರಿಸಿದಾಗ ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿದ್ದರು. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಬರುತ್ತಿತ್ತು. ಲೋಕಸಭೆ ಚುನಾವಣೆಗೆ ಸಂಬಂಧಿಸಿ ಎಸ್‌ಎಸ್ ತಂಡದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ಅವರ ಮನೆಯವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಬೈಕ್ ಪತ್ತೆಯಾಗಿತ್ತು
ಮಾ. 31ರಂದು ನಾಪತ್ತೆಯಾಗಿ ನಾಲ್ಕು ದಿನಗಳ ಬಳಿಕ ಅವರ ಮೃತದೇಹ ಪಟ್ರಮೆ ಹೊಳೆಯಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ಮರುದಿನ ಪಟ್ರಮೆ ಸೇತುವೆ ಬಳಿ ಅವರ ಬೈಕ್ ದೊರಕಿತ್ತು. ಬೈಕ್ ದೊರೆತ ಬಳಿಕ ಇಲ್ಲಿ ಅವರಿಗಾಗಿ ಹುಡುಕಾಟ ನಡೆಯುತ್ತಿತ್ತು ರವಿವಾರ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಅವರ ಬೈಕ್ ಪತ್ತೆಯಾದ ಸ್ಥಳದ ಸಮೀಪವೇ ಮೃತದೇಹ ಪತ್ತೆಯಾಗಿದ್ದು ಇದರ ಆಧಾರದಲ್ಲಿ ಶವ ಲಕ್ಷ್ಮೀನಾರಾಯಣ ಅವರದೆಂದು ಗುರುತಿಸಲಾಗಿದೆ.
ಲಕ್ಷ್ಮೀನಾರಾಯಣ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅನುಮಾನಿಸಲಾಗಿದೆ. ಈ ಹಿಂದೆಯೂ ಅವರು ನಾಪತ್ತೆಯಾಗಿ ಪೊಲೀಸರ ಶೋಧದ ಬಳಿಕ ಪತ್ತೆಯಾಗಿದ್ದರು. ಮೃತರು ಪತ್ನಿಯನ್ನು ಅಗಲಿದ್ದಾರೆ.
ಶೌರ್ಯ ವಿಪತ್ತು ನಿರ್ವಹಣ ತಂಡದವರು ಶವವನ್ನು ಮೇಲೆತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.