ಅಪಾಯ ಸಂಭವಿಸುವ ಮೊದಲು ತೆರವಾಗಬೇಕಿದೆ ಶಿಥಿಲ ಕಟ್ಟಡ

Team Udayavani, Jul 16, 2021, 6:00 AM IST

ಅಪಾಯ ಸಂಭವಿಸುವ ಮೊದಲು ತೆರವಾಗಬೇಕಿದೆ ಶಿಥಿಲ ಕಟ್ಟಡ

ಕಡಬ: ಸುಮಾರು 96 ವರ್ಷ ಗಳ ಇತಿಹಾಸವನ್ನು ಹೊಂದಿರುವ ಕಡ‌ಬ ಪೇಟೆಯ ಹೃದಯಭಾಗದಲ್ಲಿರುವ ಸರಕಾರಿ ಪ್ರವಾಸಿ ಬಂಗಲೆ (ನಿರೀಕ್ಷಣ ಮಂದಿರ) ಶಿಥಿಲಗೊಂಡು ಇತಿಹಾಸದ ಪುಟ ಸೇರುವ ಕಾಲ ಸನ್ನಿಹಿತವಾಗಿದೆ.

ಹಳೆಯ ಪ್ರವಾಸಿ ಬಂಗಲೆಯನ್ನು ದುರಸ್ತಿಗೊಳಿಸುವ ಸಲುವಾಗಿ 2 ವರ್ಷ ಗಳ ಹಿಂದೆ ಪರಿಶೀಲನೆಗೆ ಆಗಮಿಸಿದ್ದ ಜಿ.ಪಂ. ಅಧಿಕಾರಿಗಳು ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ದುರಸ್ತಿಗೆ ಯೋಗ್ಯ ವಾಗಿಲ್ಲ ಎಂದು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ತೆರವುಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಅದು ಇದುವರೆಗೆ ಕಾರ್ಯಗತವಾಗಿಲ್ಲ. ಕಟ್ಟಡದ ಹಿಂಭಾಗ ಭಾಗಶಃ ಕುಸಿದಿದ್ದು, ಯಾವುದೇ ಕ್ಷಣದಲ್ಲಿ ಕಟ್ಟಡ ಪೂರ್ತಿಯಾಗಿ ಧರಾಶಾಯಿಯಾಗುವ ಸಾಧ್ಯತೆಗಳಿವೆ. ಭಿಕ್ಷುಕರು ಹಾಗೂ ಅಲೆಮಾರಿಗಳು ಈ ಶಿಥಿಲ ಕಟ್ಟಡದಲ್ಲಿ ಆಶ್ರಯ ಪಡೆಯುವುದರಿಂದ ಕಟ್ಟಡ ಕುಸಿದರೆ ಜೀವಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಅಪಾಯ ಸಂಭವಿಸುವ ಮೊದಲು ಈ ಶಿಥಿಲ ಕಟ್ಟಡವನ್ನು ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ಕುಮಾರ್‌ ಭಂಡಾರಿ ಈ ಹಿಂದೆ ತಾ.ಪಂ.ನ ನಿರ್ವಹಣೆಯಲ್ಲಿದ್ದ ಈ ಕಟ್ಟಡದ ಸ್ಥಿತಿಗತಿಯ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಚಟುವಟಿಕೆಯ ತಾಣವಾಗಿತ್ತು :

ಒಂದು ಕಾಲದಲ್ಲಿ ಅತ್ಯಂತ ಚಟುವಟಿಕೆಯ ತಾಣವಾಗಿದ್ದ ಈ ಪ್ರವಾಸಿ ಬಂಗಲೆ ಇದೀಗ ಯಾವುದೇ ಚಟುವಟಿಕೆಗಳಿಲ್ಲದೆ ಅನಾಥವಾಗಿದೆ. ಕಡಬದ ಕೊಡುಗೈ ದಾನಿ ಎಂದೇ ಹೆಸರು ಪಡೆದಿರುವ ದಿ|ಮೇಲೂರು ಚಂದಯ್ಯ ಶೆಟ್ಟಿ ಅವರು 1925ನೇ ಇಸವಿಯಲ್ಲಿ ಈ ಕಟ್ಟಡವನ್ನು ನಿರ್ಮಿಸಿಕೊಟ್ಟಿrರುವ ಬಗ್ಗೆ ಲಭ್ಯ ದಾಖಲೆಗಳಲ್ಲಿ ಉಲ್ಲೇಖವಿದೆ. ಬಂಗಲೆ ಇರುವ ಜಾಗ ಸೇರಿದಂತೆ ಒಟ್ಟು 2.29 ಎಕರೆ ಜಮೀನನ್ನು ಅವರು ಅಂದಿನ ಕಾಲದಲ್ಲಿ ಸರಕಾರಿ ಆಸ್ಪತ್ರೆಗೆ ದಾನವಾಗಿ ಕೊಟ್ಟಿದ್ದರು. ಸಮುದಾಯ ಆಸ್ಪತ್ರೆಯ ಆವರಣದಲ್ಲಿರುವ ಈ ಕಟ್ಟಡ ಆರಂಭದಲ್ಲಿ ವೈದ್ಯಾಧಿಕಾರಿಗಳ ವಸತಿಗೃಹವಾಗಿತ್ತು. ಪುತ್ತೂರು ಬಿಡಿಒ ಕಚೇರಿ ಇದರ ನಿರ್ವಹಣೆಯನ್ನು ನೋಡಿಕೊಳ್ಳುತ್ತಿತ್ತು.

ಅನಂತರ 2 ಕೊಠಡಿಗಳನ್ನು ಸೇರಿಸಿ ಪುನಶ್ಚೇತನಗೊಳಿಸಿ ಈ ಕಟ್ಟಡವನ್ನು ಪ್ರವಾಸಿ ಬಂಗಲೆಯಾಗಿ ಪರಿವರ್ತಿಸಲಾಗಿತ್ತು. ಇತ್ತೀಚಿನ ಕೆಲವು ವರ್ಷಗಳಲ್ಲಿ ತಾ.ಪಂ. ಹಾಗೂ ಗ್ರಾ.ಪಂ. ಆಡಳಿತ ಇದರ ನಿರ್ವಹಣೆಯ ಹೊಣೆ ಹೊತ್ತುಕೊಂಡಿತ್ತಾದರೂ ಈಗ ಈ ಕಟ್ಟಡವನ್ನು ಯಾರೂ ಕೇಳು ವವರಿಲ್ಲದಂತಾಗಿದೆ. ಮೂಲತಃ ಸರಕಾರಿ ಸಮುದಾಯ ಆಸ್ಪತ್ರೆಗೆ ಸೇರಿದ ಈ ಜಮೀನನ್ನು ಮತ್ತೆ ಆಸ್ಪತ್ರೆಯ ಉಪಯೋಗಕ್ಕೆ ನೀಡಬೇಕೆಂದು ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿಯವರ ಮುಖಾಂತರ ಜಿ.ಪಂ.ಗೆ ಮನವಿ ಸಲ್ಲಿಸಲಾಗಿದೆ. ಮುಂದೆ ಸಮುದಾಯ ಆಸ್ಪತ್ರೆಯು ತಾಲೂಕು ಆಸ್ಪತ್ರೆಯಾಗಿ ಉನ್ನತೀಕರಣವಾಗಬೇಕಿರುವುದರಿಂದ ಹೆಚ್ಚಿನ ಜಾಗದ ಅಗತ್ಯವಿರುವುದರಿಂದ ಸಂಬಂಧಪಟ್ಟವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಕಡಬದ ಹಳೆಸ್ಟೇಶನ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಗುರುತಿಸಲಾದ ಜಮೀನಿನಲ್ಲಿ ಹೊಸದಾಗಿ ಸುಸಜ್ಜಿತ ನಿರೀಕ್ಷಣ ಮಂದಿರ ನಿರ್ಮಿಸಲಾಗುವುದು. ಕಟ್ಟಡದ ವಿನ್ಯಾಸ ನಕ್ಷೆ ಸಿದ್ಧಪಡಿಸಲಾಗಿದ್ದು, ಶೀಘ್ರ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಕಡಬ ಪೇಟೆಯಲ್ಲಿರುವ ಹಳೆಯ ಪ್ರವಾಸಿ ಬಂಗಲೆ‌ಯ ಶಿಥಿಲ ಕಟ್ಟಡವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು.ಎಸ್‌.ಅಂಗಾರ, ಮೀನುಗಾರಿಕೆ ಮತ್ತು ಬಂದರು ಸಚಿವರು

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.