ಹೃದಯಾಘಾತಕ್ಕೊಳಗಾದ ವ್ಯಕ್ತಿಯ ರಕ್ಷಿಸಿದ ಉಪನ್ಯಾಸಕಿ

Team Udayavani, Oct 22, 2022, 7:15 AM IST

ಹೃದಯಾಘಾತಕ್ಕೊಳಗಾದ ವ್ಯಕ್ತಿಯ ರಕ್ಷಿಸಿದ ಉಪನ್ಯಾಸಕಿ

ಬಂಟ್ವಾಳ: ಬೆಂಗಳೂರಿಗೆ ಹೊರಟಿದ್ದ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅದೇ ರೈಲಿನಲ್ಲಿ ತೆರಳಲು ಬಂದು ಅಸ್ವಸ್ಥಗೊಂಡು ಬಿದ್ದ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿದ ಘಟನೆ ಬಂಟ್ವಾಳ ನಿಲ್ದಾಣದಲ್ಲಿ ನಡೆದಿದೆ. ಅವರಿಬ್ಬರು ಕಾಕತಾಳೀಯವಾಗಿ ಮತ್ತೆ ಆಸ್ಪತ್ರೆಯಲ್ಲಿ ಮುಖಾಮುಖೀಯಾಗಿ ವೈದ್ಯರಿಂದ ಪ್ರಶಂಸಾ ಪತ್ರ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನೆಲ್ಯಾಡಿಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಬಿ.ಸಿ.ರೋಡು ನಿವಾಸಿ ಹೇಮಾವತಿ ಅವರು ಸೆ. 28ರ ರಾತ್ರಿ ಬಂಟ್ವಾಳದಿಂದ ಬೆಂಗಳೂರಿನಲ್ಲಿರುವ ಮಗಳ ಮನೆಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದರು. ರೈಲು ಆಗಮಿಸುವಷ್ಟರಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಗೊಂಡು ಬಿದ್ದರು. ತತ್‌ಕ್ಷಣ ಉಪನ್ಯಾಸಕಿ ಅವರ ರಕ್ಷಣೆಗೆ ಮುಂದಾಗಿ ತಾವು ಹೋಗಬೇಕಿದ್ದ ರೈಲನ್ನು ಬಿಟ್ಟರು. ವ್ಯಕ್ತಿಯ ರಕ್ಷಣೆಗೆ ಬರುವಂತೆ ಇತರ ಪ್ರಯಾಣಿಕರಲ್ಲಿ ವಿನಂತಿಸಿದರೂ ಯಾರೂ ಬಂದಿರಲಿಲ್ಲ.

ರಿಕ್ಷಾ ಮೂಲಕ ಆ ವ್ಯಕ್ತಿಯನ್ನು ಬಿ.ಸಿ.ರೋಡಿನ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ಆ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಯಿತು.

ಮರುದಿನ ಬೆಳಗ್ಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆ ವ್ಯಕ್ತಿಯ ಆರೋಗ್ಯ ವಿಚಾರಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ತೆರಳಿದ್ದರು.

ಈ ವಿಚಾರ ಇಲ್ಲಿಗೆ ಮುಕ್ತಾಯಗೊಂಡು ಹೆಚ್ಚು ಸುದ್ದಿಯಾಗಿರಲಿಲ್ಲ. ಆದರೆ ಅ. 17ರಂದು ಹೇಮಾವತಿ ಅವರು ತಮ್ಮ ತಾಯಿಯನ್ನು ಕರೆದುಕೊಂಡು ಮಂಗಳೂರು ಕೆಎಂಸಿ ಆಸ್ಪತ್ರೆಯ ಡಾ| ಪದ್ಮನಾಭ ಕಾಮತ್‌ ಅವರ ಬಳಿಗೆ ಬಂದಿದ್ದರು. ಅದೇ ಸಮಯದಲ್ಲಿ ಅಂದು ತನ್ನಿಂದ ರಕ್ಷಿಸಲ್ಪಟ್ಟ ವ್ಯಕ್ತಿಯೂ ಚೇತರಿಸಿಕೊಂಡು ವೈದ್ಯರ ಬಳಿಗೆ ಬಂದಿದ್ದರು. ಆ ವ್ಯಕ್ತಿಯು ಡಾ| ಕಾಮತ್‌ ಅವರ ಬಳಿ ತನ್ನನ್ನು ಕಾಪಾಡಿದ ಮಹಾನ್‌ ತಾಯಿ ಇವರೇ ಎಂದು ವೈದ್ಯರಿಗೆ ಪರಿಚಯಿಸಿದರು. ತತ್‌ಕ್ಷಣ ಡಾ| ಕಾಮತ್‌ ಅವರು ಉಪನ್ಯಾಸಕಿಯ ಮಾನವೀಯ ಕಾರ್ಯವನ್ನು ಮೆಚ್ಚಿ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.