ಧರ್ಮಸ್ಥಳ: ಜೈನ ಮುನಿ ಸಮಾಧಿ ಮರಣ
Team Udayavani, Feb 20, 2019, 1:00 AM IST
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಬಳಿ ಮುನಿಗಳು ವಾಸ್ತವ್ಯ ಇದ್ದ ಕುಟೀರದಲ್ಲಿ ನಿಸ್ಪೃಹ ಸಾಗರ್ ಮುನಿ ಮಹಾರಾಜ್ (75) ಅವರು ಮಂಗಳವಾರ ಬೆಳಗ್ಗೆ ಏಳು ಗಂಟೆಗೆ ಸಮಾಧಿ ಮರಣ ಹೊಂದಿದರು.
ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂಪನ್ನ ದಿನವಾದ ಫೆ. 18ರಂದು ಅವರು ಸಲ್ಲೇಖನ ವೃತ ಕೈಗೊಂಡಿದ್ದರು. ಮರುದಿನ ಅವರು ಸಮಾಧಿ ಮರಣ ಹೊಂದಿದ್ದಾರೆ.
ಅಭಿಷೇಕದಲ್ಲಿ ಭಾಗಿ
ಮಹಾಮಸ್ತಕಾಭಿಷೇಕದಲ್ಲಿ ಪಾವನ ಸಾನ್ನಿಧ್ಯ ನೀಡಲು ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರ ಸಂಘದಲ್ಲಿ ಪೂಜ್ಯ ನಿಸ್ಪೃಹ ಸಾಗರ ಮುನಿ ಮಹಾರಾಜರು ಫೆ. 3ರಂದು ಧರ್ಮಸ್ಥಳ ಪುರಪ್ರವೇಶ ಮಾಡಿದ್ದರು. ಫೆ. 16, 17 ಮತ್ತು 18ರಂದು ನಡೆದ ಬಾಹುಬಲಿ ಮಸ್ತಕಾಭಿಷೇಕವನ್ನೂ ವೀಕ್ಷಿಸಿದ್ದರು. ಧರ್ಮಸ್ಥಳದಲ್ಲಿ ಬಸದಿ
ಬಳಿ ಇರುವ ಕುಟೀರದಲ್ಲಿ ಮುನಿ ಸಂಘದೊಂದಿಗೆ ಅವರು ಜಪ, ತಪ, ಧ್ಯಾನ, ಸ್ವಾಧ್ಯಾಯದಲ್ಲಿ ನಿರತರಾಗಿ ದ್ದರು. ಸೋಮವಾರ ಸಂಜೆ ಸಲ್ಲೇಖನ ವ್ರತಧಾರಣೆ ಮಾಡಿ, ಮಂಗಳವಾರ ಬೆಳಗ್ಗೆ ಏಳು ಗಂಟೆಗೆ ಸಮಾಧಿ ಮರಣ ಹೊಂದಿದರು.
ಸಮಾಧಿ ಮರಣದ ಹಿನ್ನೆಲೆಯಲ್ಲಿ ಮುನಿ ಸಂಘದವರೆಲ್ಲರೂ ಹಾಗೂ ಮಾತಾಜಿಯವರು ಮಂಗಳ
ವಾರ ಉಪವಾಸ ವ್ರತ ಆಚರಿಸಿದರು. ಜಪ, ತಪ, ಹಾಗೂ ಧ್ಯಾನಗಳಲ್ಲಿ ನಿರತರಾದರು.
ಕ್ಷೇತ್ರದ ವತಿಯಿಂದ ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್,
ಡಿ. ಹಷೇìಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್, ಡಾ| ಬಿ. ಯಶೋವರ್ಮ ಅವರು ಅಂತಿಮ ಗೌರವ ಸಲ್ಲಿಸಿದರು.
ಹೀಗೆ ನಡೆಯಿತು ಅಂತ್ಯವಿಧಿ…
ಸಕಲ ವೈಭವದ ಮೆರವಣಿಗೆಯೊಂದಿಗೆ ಪಂಚನಮಸ್ಕಾರ ಮಂತ್ರ ಪಠಣ ಮಾಡುತ್ತಾ, ಕುಟೀರದಿಂದ ಅಲಂಕೃತ ಆಸನದಲ್ಲಿ ಕೊಂಡು ಹೋಗಿ ಬಸದಿ ಬಳಿ ಇರುವ ಜಾಗದಲ್ಲಿ ತ್ರಿಕೋನಾಕಾರದಲ್ಲಿ ಚಿತೆಯನ್ನು ರೂಪಿಸಿ, ಮೃತ ದೇಹವನ್ನು ಪದ್ಮಾಸನದಲ್ಲಿ ಕುಳ್ಳಿರಿಸಿ, ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು.
ಮುನಿಗಳು ಮೃತದೇಹಕ್ಕೆ ನೀರು, ಹಾಲು, ತುಪ್ಪ ಮತ್ತು ಸಕ್ಕರೆಯ ಸೇಚನ ದೊಂದಿಗೆ ಅಭಿಷೇಕ ಮಾಡಿದರು. ಎಲ್ಲ ಮುನಿಗಳು ಮತ್ತು ಮಾತಾಜಿಯವರು ಪಂಚ ನಮಸ್ಕಾರ ಮಂತ್ರ ಪಠಣದೊಂದಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಿದರು. ನಿಸ್ಪೃಹ ಸಾಗರ ಮುನಿ ಮಹಾರಾಜರ ಪೂರ್ವಾಶ್ರಮದ ಮಕ್ಕಳಾದ ಸಂಜಯ ಕುಮಾರ್ ಮತ್ತು ಪುನೀತ್‌ಕುಮಾರ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಚಿತೆಗೆ ಗಂಧ ಮತ್ತು ಚಂದನದ ಕೊರಡುಗಳನ್ನು ಬಳಸಿ ಮೇಲೆ ತುಪ್ಪ ಸುರಿಯಲಾಯಿತು. ಚಿತೆಯ ಸನಿಹದಲ್ಲಿ ಮುನಿ ಸಂಘದವರು ಮತ್ತು ಮಾತಾಜಿಯವರು ಸಾಮೂಹಿಕ ಪ್ರತಿಕ್ರಮಣ ಮಾಡಿದರು. ಪ್ರಾಯಶ್ಚಿತ್ತ ಮಾಡಿಕೊಳ್ಳುವುದಕ್ಕೆ ಪ್ರತಿಕ್ರಮಣ ಎನ್ನಲಾಗುತ್ತಿದ್ದು, ಮುನಿಗಳು ಪ್ರತಿ ದಿನ ಮೂರು ಬಾರಿ ಪ್ರತಿಕ್ರಮಣ ಮಾಡುತ್ತಾರೆ.
ಆಚಾರ್ಯ ಶ್ರೀ 108 ವರ್ಧಮಾನ ಸಾಗರ್ ಮುನಿ ಮಹಾರಾಜರು ಹಾಗೂ ಆಚಾರ್ಯ ಶ್ರೀ 108 ಪುಷ್ಪದಂತ ಸಾಗರ ಮುನಿ ಮಹಾರಾಜ್ ಅಂತ್ಯ ಸಂಸ್ಕಾರದ ನೇತೃತ ವಹಿಸಿದ್ದರು.
ಏನಿದು ಸಲ್ಲೇಖನ?
ಬದುಕಿನ ಕೊನೆ ಸಮೀಪಿಸುತ್ತಿದೆ ಎಂದು ಅರಿವಾದಾಗ ಜೈನ ಮುನಿಗಳು ಉಪವಾಸ ಕೈಗೊಂಡು ದೇಹತ್ಯಾಗ ಮಾಡುವುದೇ ಸಲ್ಲೇಖನ ವ್ರತ. ಮರಣವನ್ನು ದುಃಖಕರ ಸಂಗತಿ ಎಂದು ಭಾವಿಸದೆ ಸಾವನ್ನೇ ಮಹಾನವಮಿ ಎಂದು ಭಾವಿಸಿ, ಮಹೋತ್ಸವವಾಗಿ ಆಚರಿಸುವುದು ಜೈನರ ಸಂಪ್ರದಾಯ. ಅಂದರೆ ಸಾವು ದೇಹಕ್ಕೆ ಮಾತ್ರ; ಆತ್ಮನಿಗೆ ಸಾವಿಲ್ಲ. ದೇಹ ನಶ್ವರ; ಆತ್ಮ ಶಾಶ್ವತ ಎಂಬ ನಂಬಿಕೆ ಅವರದು.
ಮುನಿಗಳ ಪರಿಚಯ
ನಿಸ್ಪೃಹ ಸಾಗರ ಮುನಿ ಮಹಾರಾಜ್ ಮೂಲತಃ ರಾಜಸ್ಥಾನದ ಕಿಶನ್‌ಗಢದವರು. ಪೂರ್ವಾಶ್ರಮದ ಹೆಸರು ಪ್ರೇಮಚಂದ್ ಪಹಾಡಿಯಾ.
ಎಸೆಸೆಲ್ಸಿ ಶಿಕ್ಷಣ ಪಡೆದ ಅವರಿಗೆ ಬಾಲ್ಯದಿಂದಲೇ ತಪಸ್ಸು, ಧ್ಯಾನ, ಧರ್ಮ, ಅಹಿಂಸೆ, ಸ್ವಾಧ್ಯಾಯದಲ್ಲಿ ವಿಶೇಷ ಆಸಕ್ತಿ ಇತ್ತು. 2009ರಲ್ಲಿ ಜೈನರ ಪವಿತ್ರ ತೀರ್ಥಕ್ಷೇತ್ರ ಚಂಪಾಪುರಿಯಲ್ಲಿ ಆಚಾರ್ಯ ಶ್ರೀ ವರ್ಧಮಾನ ಸಾಗರ ಮುನಿ ಮಹಾರಾಜರಿಂದ ಮುನಿ ದೀಕ್ಷೆ ಪಡೆದಿದ್ದು, ಬಳಿಕ ಮುನಿ ಸಂಘದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.