Puttur: ಮನೆಯ ಕಿಟಕಿ ಮುರಿದು ನಗದು, ಚಿನ್ನಾಭರಣ ಕಳವು
Team Udayavani, Aug 24, 2024, 7:13 PM IST
ಸಾಂದರ್ಭಿಕ ಚಿತ್ರ
ಪುತ್ತೂರು: ಸರ್ವೆ ಗ್ರಾಮದ ಕಾಡಬಾಗಿಲಿನಲ್ಲಿ ಮನೆ ಮಂದಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡ ಕಳ್ಳರ ತಂಡವೊಂದು ಮನೆ ಕಿಟಕಿ ಮುರಿದು ನಗದು, ಚಿನ್ನಾಭರಣ ಕಳವುಗೈದ ಪ್ರಕರಣ ಆ. 24ರಂದು ಬೆಳಕಿಗೆ ಬಂದಿದೆ.
ಕಾಡಬಾಗಿಲು ನಿವಾಸಿ ಸಾರಮ್ಮ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಸಾರಮ್ಮ, ಅವರ ಸೊಸೆ ಆ. 23ರಂದು ಅನಾರೋಗ್ಯದಲ್ಲಿದ್ದ ಮೊಮ್ಮಗನನ್ನು ಔಷಧಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ರಾತ್ರಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಆ. 24ರಂದು ಬೆಳಗ್ಗೆ ಮನೆಗೆ ಬಂದಾಗ ಕಳ್ಳತನ ವಿಚಾರ ಬೆಳಕಿಗೆ ಬಂದಿದೆ.
ಮನೆಯ ಬಾಗಿಲನ್ನು ಮುರಿಯಲು ಯತ್ನಿಸಿದ ಕಳ್ಳರು ಅದು ಸಾಧ್ಯವಾಗದೆ ಇದ್ದಾಗ ಕಿಟಕಿಯ ಸರಳನ್ನು ಮುರಿದು ಒಳ ನುಗ್ಗಿದ್ದಾರೆ. ಮನೆಯೊಳಗೆ ಕಪಾಟಿನಲ್ಲಿದ್ದ 3 ಪವನ್ ಚಿನ್ನ, 35 ಸಾವಿರ ನಗದು ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ಸಾರಮ್ಮ ಅವರು ಮನೆಯಲ್ಲಿ ಸೊಸೆ, ಮೊಮ್ಮಗನ ಜತೆ ವಾಸವಾಗಿದ್ದರು. ಪುತ್ರ ಇಮ್ರಾನ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆದಿದ್ದು ಹೀಗಾಗಿ ಪರಿಚಿತರೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಸಂಶಯ ಮೂಡಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಕ್ರೈಂ ಎಸ್‌ಐ ಸುಶ್ಮಾ ಜಿ.ಬಿ. ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.