![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 18, 2023, 1:10 PM IST
ಬಂಟ್ವಾಳ: ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ರೂ. ಮೌಲ್ಯದ ಸ್ವತ್ತೊಂದನ್ನು ಕಳವು ಮಾಡಲಾಗಿದ್ದ ಇಬ್ಬರು ಆರೋಪಿಗಳ ಸಹಿತ ಸ್ವತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ ನಿವಾಸಿ ರೋಹಿತ್ ಎಂಬವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಳವಾಗಿದ್ದು ಯಾವಾಗ ಮತ್ತು ಸ್ವತ್ತುಗಳು ಯಾವುದು ?.
ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್ ಜಾಬ್ ಪ್ಲೇಟ್ ಒಂದು ವಾರಗಳ ಹಿಂದೆ ಕಳವಾಗಿತ್ತು. 450 ಕೆ.ಜಿ. ತೂಕದ ಸುಮಾರು 2,60,000 ಲಕ್ಷ ರೂ. ಮೌಲ್ಯದ ಸ್ವತ್ತುನ್ನು ಕಳವು ಮಾಡಲಾಗಿದೆ ಎಂದು ನಗರ ಪೋಲಿಸ್ ಠಾಣೆಗೆ ದೂರು ನೀಡಲಾಗಿತ್ತು.
ಈ ದೂರಿನ ಹಿನ್ನೆಲೆಯಲ್ಲಿ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಕಳವಾದ ಸ್ವತ್ತು ಹಾಗೂ ಕಳವಿಗೆ ಬಳಸಿದ ಕಾರನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರ ಠಾಣಾ ಎಸ್. ಐ.ರಾಮಕೃಷ್ಣ, ಅಪರಾಧ ವಿಭಾಗದ ಎಸ್.ಐ.ಕಲೈಮಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.