ಬೆಳ್ತಂಗಡಿ: ಹಾಡುಹಗಲೇ ಮನೆಯಲ್ಲಿದ್ದ ವೃದ್ಧೆಯನ್ನು ಕೊಲೆಗೈದು,ಚಿನ್ನಾಭರಣ ಸಹಿತ ನಗದು ದರೋಡೆ
Team Udayavani, Jul 23, 2022, 6:36 PM IST
ಬೆಳ್ತಂಗಡಿ: ಹಾಡುಹಗಲೇ ಮನೆಯಲ್ಲಿದ್ದ ವೃದ್ಧರೋರ್ವರ ಮೇಲೆ ಹಲ್ಲೆ ನಡೆಸಿ ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಶನಿವಾರ ಮಧ್ಯಾಹ್ನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಹಲ್ಲೆ ನಡೆಸಿದ ಪರಿಣಾಮ ಸ್ಥಳದಲ್ಲೇ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿ: ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 10ಕ್ಕೂ ಹೆಚ್ಚು ಮಂದಿ ಗಂಭೀರ
ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದು, ಮಗ ಮತ್ತು ಸೊಸೆ ಕೆಲಸಕ್ಕೆ ಹೋಗಿದ್ದರು. ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕೆರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ನಂತರ ಹೊರಗಡೆ ಬಂದು ನೋಡಿದಾಗ ಅಜ್ಜಿ ಅಕ್ಕು ಅವರು ತಮ್ಮ ಮನೆಯ ಸಮೀಪದ ಹಟ್ಟಿಯ ಹಿಂದೆ ಬಿದ್ದಿರುವುದು ಕಂಡು ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಅವರು ಬಂದು ನೋಡಿದಾಗ ಅಕ್ಕು ಅವರು ಮೃತಪಟ್ಟಿದ್ದು, ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಮನೆಯಲ್ಲಿದ್ದ ನಗದನ್ನು ಯಾರೋ ದರೋಡೆಗೈದಿರುವುದು ಬೆಳಕಿಗೆ ಬಂದಿದೆ.
ಯಾರೋ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿ ಕೊಲೆಗೈದು ಅವರು ಚಿನ್ನಾಭರಣ ದರೋಡೆಗೈದಿರಬೇಕೆಂದು ಸಂಶಯಿಸಲಾಗಿದೆ. ಈ ಬಗ್ಗ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.