Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Team Udayavani, Nov 5, 2024, 11:02 AM IST
ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ.
ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ.ಇದರ ಜೊತೆಗೆ ಗೊದ್ರೇಜ್ , ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ.
ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು ನಡೆಯುವುದನ್ನು ಸ್ವತಃ ಅಲ್ಲಿನ ಅರ್ಚಕರು ಸಿ.ಸಿ.ಕ್ಯಾಮರಾದ ಮೂಲಕ ನೋಡಿದ್ದಾರೆ ಆದರೂ ಕಳ್ಳರ ಬಳಿ ಮಾರಕಾಸ್ತ್ರಗಳು ಇರುವುದು ಕಂಡು ಬಂದದ್ದರಿಂದ ತಡೆಯಲು ಅಸಾಧ್ಯವಾಗಿತ್ತು. ಮತ್ತು ಈ ಕಳ್ಳತನದ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಸುದ್ದಿಯಾಗಿತ್ತು. ಅಂತಹ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕಳ್ಳರು ಯೋಚಿಸಿಯಾಗಿರಬೇಕು,ಇಲ್ಲಿನ ಸಿ.ಸಿ.ಕ್ಯಾಮರಾ ದ ಪೂಟೇಜ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಿಗ್ಗೆ (ನ.4ರಂದು) ದೇವಸ್ಥಾನದ ಸಿಬ್ಬಂದಿಯೊರ್ವರು 6.ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.
ಇತ್ತೀಚೆಗೆ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.