ಆಯುಷ್ಮಾನ್‌ ಸೌಲಭ್ಯ ವಂಚಿತ ಕಡಬ ಸಮುದಾಯ ಆಸ್ಪತ್ರೆ

ತಜ್ಞ ವೈದ್ಯರಿಲ್ಲ; ತಾಲೂಕು ಕೇಂದ್ರ ಕಡಬದ ಜನತೆಯ ಗೋಳು ಕೇಳುವವರಿಲ್ಲ

Team Udayavani, Sep 23, 2020, 5:34 AM IST

ಆಯುಷ್ಮಾನ್‌ ಸೌಲಭ್ಯ ವಂಚಿತ ಕಡಬ ಸಮುದಾಯ ಆಸ್ಪತ್ರೆ

ಕಡಬ ಸಮುದಾಯ ಆರೋಗ್ಯ ಕೇಂದ್ರ.

ಕಡಬ: ನೂತನ ತಾಲೂಕು ಕೇಂದ್ರ ಕಡಬದಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದರೂ ಸೂಕ್ತ ಸವಲತ್ತುಗಳು ಹಾಗೂ ತಜ್ಞ ವೈದ್ಯರು ಇಲ್ಲದಿರುವ ಕಾರಣದಿಂದಾಗಿ ಆರೋಗ್ಯ ಸೇವೆಯ ವಿಚಾರದಲ್ಲಿ ತೀರಾ ಹಿಂದುಳಿದಿದೆ. ಇದೀಗ ಕೇಂದ್ರ ಸರಕಾರದ ಆಯುಷ್ಮಾನ್‌ ಕಾರ್ಡ್‌ ನ ಮೂಲಕ ಉಚಿತ ಚಿಕಿತ್ಸೆ ಸೌಲಭ್ಯವನ್ನು ದ.ಕ. ಜಿಲ್ಲೆಯ ಸುಮಾರು 40 ಆಸ್ಪತ್ರೆಗಳಿಗೆ ನೀಡಿದ್ದರೂ ಕಡಬ ತಾಲೂಕಿನ ಯಾವುದೇ ಆಸ್ಪತ್ರೆಗಳಿಗೆ ಅವಕಾಶ ನೀಡದಿರುವುದು ಕಡಬ ಭಾಗದ ಜನರಲ್ಲಿ ನಿರಾಸೆ ಮೂಡಿಸಿದೆ.

ಸೂಕ್ತ ವೈದ್ಯಕೀಯ ಸವಲತ್ತುಗಳು ಇಲ್ಲದೆ ಕಡಬ ಭಾಗದ ಜನತೆ ದೂರದ ಪುತ್ತೂರು, ಮಂಗಳೂರಿಗೆ ಚಿಕಿತ್ಸೆಗಾಗಿ ತೆರಳಬೇಕಾದ ಅನಿವಾರ್ಯ ಇದೆ. ಕೇಂದ್ರ ಸರಕಾರದ ಆಯುಷ್ಮಾನ್‌ ಭಾರತ ಯೋಜನೆಯ ಮೂಲಕ ಆರೋಗ್ಯ ಇಲಾಖೆಯಿಂದ ಬಿಪಿಎಲ್‌ ಪಡಿತರದಾರರಿಗೆ ವಾರ್ಷಿಕ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್‌ ಪಡಿತರದಾರಿಗೆ ಶೇ. 30ರಷ್ಟು ಉಚಿತ ಚಿಕಿತ್ಸೆಗಳ ಸೌಲಭ್ಯ ಇದೆ. ಕಡಬ ತಾ|ನ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಭಾಗದಲ್ಲಿ ಆಸ್ಪತ್ರೆಗಳಿದ್ದರೂ ಉಚಿತ ಚಿಕಿತ್ಸೆಗೆ ಈ ಭಾಗದ ಜನತೆ ಮಾತ್ರ ಪುತ್ತೂರು, ಮಂಗಳೂರಿಗೆ ಹೋಗಬೇಕಿದೆ. ಕಡಬ ತಾ| ವ್ಯಾಪ್ತಿಯ ಸುಬ್ರಹ್ಮಣ್ಯದಲ್ಲಿ ದಿನಂಪ್ರತಿ ಸಾವಿರಾರು ಯಾತ್ರಿಕರು ಬರುತ್ತಿದ್ದರೂ ಅಲ್ಲಿಯೂ ಸಮರ್ಪಕ ವೈದ್ಯಕೀಯ ಸವಲತ್ತುಗಳಿಲ್ಲದೆ ಜನರು ಪರದಾಡುವಂತಾಗಿದೆ.

ಸವಲತ್ತುಗಳಿಲ್ಲ
ಕಡಬದಲ್ಲಿ ಸುಮಾರು 5 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ವ್ಯಯಿಸಿ ಸಮುದಾಯ ಆಸ್ಪತ್ರೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ ಇಲ್ಲಿಗೆ ಅಗತ್ಯ ತಜ್ಞ ವೈದ್ಯರ ನೇಮಕವಾಗಿಲ್ಲ. ಸಿಬಂದಿ ಕೊರತೆ, ವೈದ್ಯಕೀಯ ಸಲಕರಣೆಗಳ ಕೊರತೆಯಿಂದ ಈ ಆಸ್ಪತ್ರೆ ತಲೆನೋವು, ಜ್ವರ ಹಾಗೂ ಅಪಘಾತ ನಡೆದಾಗ ಪ್ರಥಮ ಚಿಕಿತ್ಸೆ ಮೊದಲಾದ ಸೀಮಿತ ಚಿಕಿತ್ಸೆಗಳಿಗೆ ಮೀಸಲಾಗಿದೆ. ಈ ಮಧ್ಯೆ ಸ್ಥಳೀಯ ಜನರು ಕಡಬದಲ್ಲಿ ಹೊಸದಾಗಿ ಆರಂಭಗೊಂಡಿರುವ ಖಾಸಗಿ ಚಿಕಿತ್ಸಾಲಯಕ್ಕೆ ತೆರಳುವ ಅನಿವಾರ್ಯ ಎದುರಾಗಿದೆ. ಆದರೆ ಅಲ್ಲಿ ದುಬಾರಿ ಶುಲ್ಕ ಪಡೆಯಲಾಗುತ್ತಿದೆ ಎಂಬ ದೂರುಗಳೂ ಕೇಳಿಬರುತ್ತಿವೆ. ಕಡಬ ಸಮುದಾಯ ಆಸ್ಪತ್ರೆಗೆ ತಜ್ಞ ವೈದ್ಯರು, ವೈದ್ಯಕೀಯ ಸಲಕರಣೆ ನೀಡಿ ಸೌಲಭ್ಯಗಳನ್ನು ಒದಗಿಸುವಲ್ಲಿ ಜನಪ್ರತಿನಿಧಿಗಳು ಸೂಕ್ತ ರೀತಿಯಲ್ಲಿ ಪ್ರಯತ್ನಿಸುತ್ತಿಲ್ಲ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ತಜ್ಞ ವೈದ್ಯರ ನೇಮಕ ಬಳಿಕ ಸೌಲಭ್ಯ
ಆಯುಷ್ಮಾನ್‌ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸೆ ಸೌಲಭ್ಯವನ್ನು ಆಸ್ಪತ್ರೆಗೆ ನೀಡಬೇಕಾದರೆ ತಜ್ಞ ವೈದ್ಯರು ಇರಬೇಕು. ಆದರೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಇಲ್ಲದಿರುವುದರಿಂದ ಅಲ್ಲಿಗೆ ನೀಡಲಾಗಿಲ್ಲ, ತಜ್ಞ ವೈದ್ಯರ ನೇಮಕವಾದ ಬಳಿಕವಷ್ಟೇ ಆಯುಷ್ಮಾನ್‌ ಸೌಲಭ್ಯವನ್ನು ನೀಡಲಾಗುತ್ತದೆ.
-ಡಾ| ರಾಮಚಂದ್ರ ಬಾಯರಿ, ಡಿಎಚ್‌ಒ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.