ವಿವಿ ಘಟಕವಿಲ್ಲ, ಸ.ಪ್ರ.ದ. ಕಾಲೇಜು ಮುಂದುವರಿಕೆ
ಬೆಟ್ಟಂಪಾಡಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಣಯ
Team Udayavani, Jun 27, 2019, 5:12 AM IST
ಈಶ್ವರಮಂಗಲ: ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿವಿ ಘಟಕ ಕಾಲೇಜು ಆಗುತ್ತಿದೆ ಎಂಬ ಹಲವು ಊಹಾಪೋಹಗಳಿದ್ದು, ಬುಧವಾರ ನಡೆದ ಸಭೆಯಲ್ಲಿ ಸ.ಪ್ರ.ದ. ಕಾಲೇಜು ಆಗಿಯೇ ಮುಂದುವರಿಸಲು ಸಭೆ ಸರ್ವಾನುಮತದ ತೀರ್ಮಾನ ಕೈಗೊಂಡಿದೆ.
ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ವಿವಿ ಘಟಕದ ವಿಷಯ ಪ್ರಸ್ತಾವಗೊಂಡಿತ್ತು.
ಹುದ್ದೆ ಭರ್ತಿಗೆ ಕ್ರಮ
ಶಾಸಕ ಸಂಜೀವ ಮಠಂದೂರು ಮಾತ ನಾಡಿ, ಸಭೆಯಲ್ಲಿ ಸಾಧಕ-ಬಾಧಕಗಳ ಕುರಿತು ಚರ್ಚೆಯಾಗಿದೆ. ಜನರ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಒಂದೇ ಆಗಿದೆ. ಪ್ರಥಮ ದರ್ಜೆ ಕಾಲೇಜು ಆಗಿ ಮುಂದುವರಿಯಲಿ. ಕಾಲೇಜಿಗೆ ಬೇಕಾಗುವ ಸ್ನಾತಕೋತ್ತರ ಕೋರ್ಸ್‌ಗಳು ಅಥವಾ ಸ್ಪೆಷಲ್ ಕೋರ್ಸ್‌ಗಳನ್ನು ತರಿಸುವ ಕೆಲಸ ಆಗಬೇಕಾಗಿದೆ. ಈ ಕಾಲೇಜಿಗೆ 1.30 ಕೋಟಿ ರೂ. ವೆಚ್ಚದಲ್ಲಿ ತರಗತಿ ಕೋಣೆಗಳ ಕಟ್ಟಡ ಮಂಜೂರಾಗಿದ್ದು, ಈ ವರ್ಷವೇ ಕಾಮಗಾರಿ ಪೂರ್ತಿಯಾದರೆ ಮುಂದಿನ ವರ್ಷ ಎಂ.ಕಾಂ. ಕೋರ್ಸ್ ಪ್ರಾರಂಭಿಸಲಾ ಗುವುದು. ಖಾಲಿಯಾಗಿರುವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಪ್ರಾಚಾರ್ಯ ಡಾ| ವರದರಾಜ ಚಂದ್ರಗಿರಿ ಪ್ರಸ್ತಾವನೆ ಮಂಡಿಸಿ, ಜಂಟಿ ನಿರ್ದೇಶಕರು ಹಾಗೂ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ, ಅಭಿಪ್ರಾಯವನ್ನು ವರದಿ ರೂಪದಲ್ಲಿ ಜಂಟಿ ನಿರ್ದೇಶಕರ ಮೂಲಕ ಸರಕಾರಕ್ಕೆ ಸಲ್ಲಿಸುವಂತೆ ನಿರ್ದೇಶನ ಇದೆ. ಆದ್ದರಿಂದ ಈ ಬಗ್ಗೆ ಚರ್ಚಿಸುವ ಅಗತ್ಯ ಇದೆ. ಸ್ಥಳೀಯ 3 ಗ್ರಾ.ಪಂ. ಅಧ್ಯಕ್ಷರಿಗೆ, ಹಾಲಿ, ಮಾಜಿ ಕಾಲೇಜು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳಿಗೆ ಲಿಖೀತವಾಗಿ ಸಭೆಯ ಪತ್ರವನ್ನು ಕಳಿಸಲಾಗಿದೆ ಎಂದರು.
ವಿವಿ ಘಟಕದ ಸಾಧಕ ಮತ್ತು ಬಾಧಕಗಳ ಬಗ್ಗೆ ವಿವಿ ವಿಶೇಷ ಅಧಿಕಾರಿ ಶ್ರೀನಿವಾಸಯ್ಯ ಸಭೆಯಲ್ಲಿ ಮಂಡಿಸಿದರು. ಸಮಿತಿ ಸದಸ್ಯರಾದ ರಂಗನಾಥ ಗುತ್ತು, ಪ್ರಕಾಶ್ ರೈ ಬೈಲಾಡಿ ಸಲಹೆಗಳನ್ನು ನೀಡಿದರು.
ಜಂಟಿ ನಿರ್ದೇಶಕ ಅಪ್ಪಾಜಿ ಗೌಡ ಮಾತನಾಡಿದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ತಾ.ಪಂ. ಮಾಜಿ ಅಧ್ಯಕ್ಷ ಶಂಭು ಭಟ್, ಉಪನ್ಯಾಸಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.