ಥರ್ಮೋಮೀಟರ್ ಬಳಕೆ ವಿವಾದ: ಬಂಟ್ವಾಳ ಪುರಸಭೆ ಪರಿಸರ ಎಂಜಿನಿಯರ್ಗೆ ನೋಟಿಸ್
Team Udayavani, Apr 25, 2020, 7:01 AM IST
ಬಂಟ್ವಾಳ: ಕೋವಿಡ್ ಸೋಂಕು ವ್ಯಾಪಕವಾಗಿರುವ ಈ ಸಂದರ್ಭ ಬಂಟ್ವಾಳ ಪುರಸಭೆಯ ಪರಿಸರ ಎಂಜಿನಿಯರ್ ಅವರು ಪುರಸಭೆಯ ಪೌರ ಪ್ರತಿಯೊಬ್ಬ ಕಾರ್ಮಿಕರ ಬಾಯಿಗೆ ಥರ್ಮೋಮೀಟರ್ ಇಟ್ಟು ಆರೋಗ್ಯ ತಪಾಸಣೆ ನಡೆಸಿರುವ ವಿವಾದಕ್ಕೆಡೆಯಾಗಿದ್ದು, ಪುರಸಭೆಯ ಮುಖ್ಯಾಧಿಕಾರಿಯವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಪರಿಸರ ಎಂಜಿನಿಯರ್ ಯಾಸ್ಮಿನ್ ಸುಲ್ತನಾ ಅವರು ಎ. 22ರಂದು ಪುರಸಭಾ ಕಚೇರಿಯ ಹಿಂಭಾಗದಲ್ಲಿ ಥರ್ಮೋಮೀಟರ್ ಮೂಲಕ ಪ್ರತಿಯೊಬ್ಬ ಪೌರಕಾರ್ಮಿಕರ ದೇಹದ ಉಷ್ಣಾಂಶ ತಪಾಸಣೆ ನಡೆಸಿದ್ದರು. ಥರ್ಮೋಮೀಟರನ್ನು ಬಳಸಿದ ಬಳಿಕ ಕುದಿಯುವ ಸೋಂಕು ನಿವಾರಕ ದ್ರಾವಣದಲ್ಲಿ ಅದ್ದಿ ಶುದ್ಧೀಕರಿಸಿ ಇನ್ನೊಬ್ಬ ವ್ಯಕ್ತಿಗೆ ಬಳಸುವುದು ಕ್ರಮ. ಆದರೆ ಇಲ್ಲಿ ಹಾಗೆ ಮಾಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
ಈ ವಿಚಾರವಾಗಿ ಪರಿಸರ ಎಂಜಿನಿಯರ್ಗೆ ನೋಟಿಸ್ ಜಾರಿ ಮಾಡಿರುವ ಮುಖ್ಯಾಧಿಕಾರಿ ಲೀಲಾ ಬ್ರಿಟ್ಟೊ ಅವರು, ಪುರಸಭೆಗೆ ಹೊಂದಿಕೊಂಡಿರುವ ಬಂಟ್ವಾಳ ಪೇಟೆಯಲ್ಲಿ ಈಗಾಗಲೇ ಕೋವಿಡ್ ಸೋಂಕು ದೃಢ ಪ್ರಕರಣಗಳು ಕಂಡು ಬಂದಿದ್ದು, ಅದರ ನಿಯಂತ್ರಣದ ಕುರಿತು ತಾವು ಕೂಡ ಕಾರ್ಯ ಪ್ರವೃತ್ತರಾಗಿದ್ದೀರಿ. ಆದರೆ ಇದೀಗ ನೀವು ತನ್ನ ಗಮನಕ್ಕೆ ತಾರದೆ, ಅನುಮತಿ ಪಡೆಯದೆ ತಪ್ಪಾದ ಕ್ರಮದಲ್ಲಿ ಆರೋಗ್ಯ ತಪಾಸಣೆ ನಡೆಸಿರುವುದು ಗಂಭೀರ ವಿಚಾರವಾಗಿದೆ. ಹೀಗಾಗಿ ತಮ್ಮ ವಿರುದ್ಧ ಯಾಕೆ ಕಾನೂನು ಕ್ರಮ ಕೈಗೊಳ್ಳಬಾರದು ಎಂಬುದಾಗಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.