Vitla: ಮನೆಗೆ ನುಗ್ಗಿ ನಗ ನಗದು ದೋಚಿದ ಕಳ್ಳರು… ಮನೆ ಕಾಯುತ್ತಿದ್ದ ಸಾಕು ನಾಯಿ ಕಾಣೆ
Team Udayavani, Aug 6, 2024, 3:31 PM IST
ವಿಟ್ಲ : ಸಾಲೆತ್ತೂರು ನಿವಾಸಿ ಜಗನ್ನಾಥ್ ಅವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ.
ಜಗನ್ನಾಥ್‌ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್ ಹಾಗೂ ಇಬ್ಬರು ಮಕ್ಕಳು ಮಾತ್ರ ವಾಸಿಸುತ್ತಿದ್ದರು.
ಆ.3ರಂದು ವಿಜಯ ತನ್ನ ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದು ಆ.4ರಂದು ವಾಪಾಸು ಹಿಂದಿರುಗಿ ಮನೆಗೆ ಬರುವ ಈ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ಒಟ್ಟು 34 ಗ್ರಾಂ ನಷ್ಟು ಚಿನ್ನ ಹಾಗೂ 6000/-ರೂ ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ವಿದೇಶದ ನೋಟುಗಳು ಹಾಗೂ ನಾಣ್ಯಗಳಿದ್ದ ಡಬ್ಬವನ್ನು ಕದ್ದೊಯ್ದಿದ್ದಾರೆ. ವಿಜಯ ಅವರ ಪುತ್ರಿಯ ಶಾಲಾ ಬ್ಯಾಗ್‌ನಲ್ಲಿದ್ದ ಪುಸ್ತಕವನ್ನು ಎಸೆದು ಬ್ಯಾಗನ್ನು ಕೊಂಡೊಯ್ದಿದ್ದಾರೆ. ಕಳ್ಳತನವಾದ ಸೊತ್ತುಗಳ ಒಟ್ಟು ಮೌಲ್ಯ 1,42,000/- ರೂ ಆಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಲ್ಲದೇ ಮನೆಯನ್ನು ಕಾವಲು ಕಾಯುತ್ತಿದ್ದ ಎರಡು ಶ್ವಾನಗಳಲ್ಲಿ ಒಂದು ಶ್ವಾನ ಕಾಣೆಯಾಗಿದೆ. ಕಳ್ಳರು ನಾಯಿಯನ್ನೂ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.
ಇದನ್ನೂ ಓದಿ: Vijayapura: ಕರ್ತವ್ಯದಲ್ಲಿದ್ದ ವೇಳೆ ಮೂರ್ಛೆ ಬಂದು ಕುಸಿದು ಬಿದ್ದ ಪೇದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.