ಇಂದೋ, ನಾಳೆಯೋ ಎನ್ನುತ್ತಿದೆ ಸಾರಕರೆ ಅಣೆಕಟ್ಟು

Team Udayavani, Jun 12, 2019, 5:50 AM IST

h-19

ಸವಣೂರು: ಕಿಂಡಿ ಅಣೆಕಟ್ಟುಗಳು ಜನತೆಯ ಜೀವನಾಡಿಗಳಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಇಲಾಖೆಗಳ ನಿರ್ವಹಣೆ ಕೊರತೆಯಿಂದ ಜನರಿಗೆ ಪೂರಕವಾಗಿರಬೇಕಾದ ಕಿಂಡಿ ಅಣೆಕಟ್ಟುಗಳು ಉಪಯೋಗ ಶೂನ್ಯವಾಗುತ್ತಿವೆ.

ಸವಣೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪುಣcಪ್ಪಾಡಿ ಗ್ರಾಮದ ಸಾರಕರೆಯಲ್ಲಿರುವ ಕಿಂಡಿ ಅಣೆಕಟ್ಟು ನಿರ್ವಹಣೆ ಕೊರತೆಯಿಂದ ಸಂಪೂರ್ಣವಾಗಿ ನೆಲಕಚ್ಚುವ ಸ್ಥಿತಿಯಲ್ಲಿದೆ. ಸಣ್ಣ ನೀರಾವರಿ ಇಲಾಖೆಯ ಮೂಲಕ ನಿರ್ಮಾಣಗೊಂಡ ಈ ಕಿಂಡಿ ಅಣೆಕಟ್ಟು ಸೂಕ್ತ ನಿರ್ವಹಣೆಯ ಕೊರತೆಯಿಂದ ಉಪಯೋಗ ಶೂನ್ಯವಾಗಿದೆ. ಮಾತ್ರವಲ್ಲದೆ ಸಂಪೂರ್ಣ ನಾದುರಸ್ತಿಯಲ್ಲಿದ್ದು ಕುಸಿದು ಬೀಳುವ ಹಂತದಲ್ಲಿದೆ.

ಗೌರಿ ಹೊಳೆಯಲ್ಲಿ ಈ ಕಿಂಡಿ ಅಣೆಕಟ್ಟಿನ ಮುಂದೆ ಅಜಿಲೋಡಿ ಸೊರಕೆಯ ಕಿಂಡಿ ಅಣೆಕಟ್ಟು ಕೂಡ ನಾದುರಸ್ತಿಯಲ್ಲಿತ್ತು. ಈಗ ಅದರ ದುರಸ್ತಿ ಕಾರ್ಯ ನಡೆದಿದೆ. ಸಾರಕರೆ ಕಿಂಡಿ ಅಣೆಕಟ್ಟಿನ ಅಭಿವೃದ್ಧಿಯ ಕುರಿತೂ ಇಲಾಖೆ ಗಮನಹರಿಸಬೇಕಿದೆ.

ಅನುದಾನ ಬಂದರೆ ಸಾಲದು
ಗ್ರಾಮೀಣ ಭಾಗದ ನೀರಿನ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ದೃಷ್ಟಿಯಿಂದ ನಿರ್ಮಾಣ ಮಾಡಲಾದ ಇಂತಹ ಅಣೆಕಟ್ಟುಗಳ ಸ್ಥಿತಿಯನ್ನು ಸುಧಾರಿಸಲು ಇಲಾಖೆ ಗಮನಹರಿಸಬೇಕಾಗಿದೆ. ಸರಕಾರದಿಂದ ಅನುದಾನ ಬರುತ್ತದೆ. ಅದನ್ನು ಬಳಸಿ ನಿರ್ಮಾಣ ಮಾಡಿದರೆ ಯೋಜನೆಯ ಉದ್ದೇಶ ಈಡೇರುವುದಿಲ್ಲ. ಕಿಂಡಿ ಅಣೆಕಟ್ಟಿನ ಗುಣಮಟ್ಟ ಮತ್ತು ಪ್ರಯೋಜನಗಳ ಕುರಿತು ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕಿದೆ.

ಕೃಷಿಕರಿಗೆ ವರದಾನ
ಈ ಭಾಗದ ಜಲಸಂರಕ್ಷಣೆಯ ಮೂಲವಾಗಿದ್ದ ಈ ಕಿಂಡಿ ಅಣೆಕಟ್ಟು ಕೃಷಿಕರಿಗೆ ವರದಾನವಾಗಿತ್ತು. ಈ ಭಾಗದ ಅನೇಕ ಕೃಷಿಕರಿಗೆ ನೀರೊದಗಿಸುತ್ತಿತ್ತು. ಸುತ್ತಮುತ್ತಲಿನ ಕೆರೆ, ಬಾವಿಗಳ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗಿದ್ದ ಈ ಅಣೆಕಟ್ಟಿನ ಈಗಿನ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ.

ಗಮನ ಹರಿಸಲಿ
ಅಂತರ್ಜಲ ಹೆಚ್ಚಳದ ಜತೆಗೆ ಈ ಭಾಗದ ಕೃಷಿಕರಿಗೆ ಬಲು ಉಪಯೋಗಕಾರಿಯಾಗಿದ್ದ ಕಿಂಡಿ ಅಣೆಕಟ್ಟು ದುರಸ್ತಿ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
– ಕರುಣಾಕರ ಸಾರಕರೆ ಸ್ಥಳೀಯರು

ಗಮನಕ್ಕೆ ತರಲಾಗಿದೆ
ಪುಣಪ್ಪಾಡಿ ಗ್ರಾಮದ ಸಾರಕರೆ ಕಿಂಡಿ ಅಣೆಕಟ್ಟು ಸಂಪೂರ್ಣವಾಗಿ ಕುಸಿದು ಬೀಳುವ ಹಂತದಲ್ಲಿದೆ. ಕಾಮಗಾರಿ ನಡೆಸುವಾಗ ಗುಣಮಟ್ಟದ ಕುರಿತು ಗಮನಹರಿಸದೇ ಇದ್ದುದೇ ಈ ರೀತಿಯ ಅವ್ಯವಸ್ಥೆಗೆ ಕಾರಣವಾಗಿದೆ. ಈ ಕುರಿತು ಜಲಾನಯನ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಗಮನಕ್ಕೆ ತರಲಾಗಿದೆ.
– ಗಿರಿಶಂಕರ ಸುಲಾಯ ಸವಣೂರು ಗ್ರಾ.ಪಂ. ಸದಸ್ಯರು

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.