‘ಹರಿದ ನೀರು, ಸರಿದ ಸಮಯ ಮರಳದು’
Team Udayavani, May 14, 2018, 3:58 PM IST
ಪುತ್ತೂರು: ಸಮಯ ನದಿಯಿದ್ದಂತೆ. ಒಮ್ಮೆ ಹರಿದು ಹೋದ ನೀರು ಮತ್ತೆ ನಮ್ಮ ಬಳಿಗೆ ಬಾರದು. ಆದ್ದರಿಂದ ವಿದ್ಯಾರ್ಥಿಗಳು ಸಮಯದ ಮಹತ್ವ ಅರಿತು ಉಪಯೊಗ ಮಾಡಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳ ವಿದಾಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಯವನ್ನು ಹಿಡಿಯಲು ಸಾಧ್ಯವಿಲ್ಲ. ಆದರೆ ಸಮಯದ ಜೊತೆಗೆ ಸಾಗಬಹುದು. ಅದುವೇ ನಿಜವಾದ ಸಾಧನೆಯ ಹಾದಿ ಯನ್ನು ತೋರಿಸಿಕೊಡುತ್ತದೆ ಎಂದರು. ಎಂ.ಕಾಂ. ವಿಭಾಗ ಸಂಯೋಜಕಿ ಡಾ| ವಿಜಯ ಸರಸ್ವತಿ ಮಾತನಾಡಿ, ವಿದ್ಯಾರ್ಥಿ ಗಳಲ್ಲಿ ಆತ್ಮಸ್ಥೈರ್ಯ ಅತಿ ಮುಖ್ಯ. ಅದು ಜೀವನದ ಅತಿ ಕಠಿನ ಹಾದಿಯನ್ನೂ ಕ್ರಮಿಸಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ಸಾಧಕನ ಹಿಂದೆ ಇರುವ ಗುರುವನ್ನು ಗೌರವಿಸಬೇಕು. ಆಗ ಜೀವನ ಸಾರ್ಥಕವಾಗುತ್ತದೆ ಎಂದರು.
ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಸಂಯೋಜಕಿ ಸವಿತಾ ಕೆ. ಮಾತನಾಡಿ, ಉದಾಸೀನ ಹಾಗೂ ಆನಾಸಕ್ತಿ ನಮ್ಮ ಸಾಧನೆಗೆ ಅಡ್ಡಿಯಾಗುತ್ತದೆ. ಇದನ್ನು ಸರಿಯಾಗಿ ತಿಳಿದುಕೊಂಡಲ್ಲಿ ವಿದ್ಯಾರ್ಥಿಗಳ ಜೀವನ ಸುಗಮವಾಗುತ್ತದೆ ಎಂದರು. ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕ ಡಾ| ವಿಜಯ ಗಣಪತಿ ಸ್ವಾಗತಿಸಿ, ಉಪನ್ಯಾಸಕಿ ಲಕ್ಷ್ಮೀ ಭಟ್ ವಂದಿಸಿದರು. ಉಪನ್ಯಾಸಕಿ ಅನನ್ಯಾ ವಿ. ಕಾರ್ಯಕ್ರಮ ನಿರ್ವಹಿಸಿದರು.
ನಿಜವಾದ ಶಿಕ್ಷಣ
ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿ ಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ. ಬದುಕಿನಲ್ಲಿ ಪ್ರತಿಯೊಬ್ಬರೂ ತುಂಬಾ ಕಲಿಯುವುದಿದೆ. ಕಲಿಕೆಗೆ ಅಂತ್ಯವಿಲ್ಲ ಎಂಬುದನ್ನು ಅರ್ಥ ಮಾಡಿ ಕೊಳ್ಳಬೇಕು. ನಾವು ಕಲಿತ ವಿಚಾರವನ್ನು ಇತರರಿಗೆ ಹಂಚಬೇಕು. ಅದುವೆ ನಿಜವಾದ ಶಿಕ್ಷಣ ಎಂದು ಡಾ| ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.