ಮಣಿನಾಲ್ಕೂರು ಬಾರೆತ್ಯಾರಿನಲ್ಲಿ ದೇಗುಲದ ಕುರುಹುಗಳು ಪತ್ತೆ

Team Udayavani, Jul 17, 2023, 5:53 AM IST

ಮಣಿನಾಲ್ಕೂರು ಬಾರೆತ್ಯಾರಿನಲ್ಲಿ ದೇಗುಲದ ಕುರುಹುಗಳು ಪತ್ತೆ

ಉಪ್ಪಿನಂಗಡಿ: ಬಂಟ್ವಾಳ ತಾಲೂಕು ಮಣಿನಾಲ್ಕೂರು ಗ್ರಾಮದ ಬಾರೆತ್ಯಾರಿನಲ್ಲಿ ಗಿಡಗಂಟಿಗಳಿಂದ ತುಂಬಿದ ಪೊದೆಗಳ ಮಧ್ಯೆ ಪುರಾತನ ಕಾಲದ ಶಿಲಾಮಯ ದೇಗುಲವೊಂದರ ಕುರುಹುಗಳು ಪತ್ತೆಯಾಗಿವೆ. ಅದು ಶಿವ ದೇವಾಲಯ ಎನ್ನಲಾಗುತ್ತಿದ್ದು, ಆದರೆ ದೇವಾಲಯದ ಇತಿಹಾಸವೇನು ಎಂಬುದು ಅಧ್ಯಯನದ ಬಳಕವೇ ತಿಳಿಯಬೇಕಿದೆ.

ಬಾರೆತ್ಯಾರು ನಿವಾಸಿ ಸುಜಾನಂದ ರೈ ಅವರ ಭೂಮಿಯಲ್ಲಿ ಈ ಕುರುಹು ಗಳಿದ್ದು, ಸುತ್ತಲೂ ಪೊದೆಗಳಿರು ವುದರಿಂದ ಮೇಲ್ನೋಟಕ್ಕೆ ಯಾವುದೂ ಕಾಣದಿದ್ದರೂ ಪೊದೆಗಳನ್ನು ಸರಿಸಿ ನೋಡಿದಾಗ ಆಶ್ಚರ್ಯಕರ ರೀತಿಯ ನಿರ್ಮಾಣಗಳು ಗೋಚ ರಿಸುತ್ತವೆ. ಕಳೆದ ಹಲವು ಸಮಯಗಳ ಹಿಂದೆ ಇಂತಹ ಕುರುಹು ಪತ್ತೆಯಾಗಿದ್ದು, ಸ್ಥಳೀಯವಾಗಿ ಯಾವುದೇ ಕ್ಷೇತ್ರದಲ್ಲಿ ಪ್ರಶ್ನೆ ಇಟ್ಟರೂ ಶಿಥಿಲಾವಸ್ಥೆಯಲ್ಲಿರುವ ಈ ದೇಗುಲ ಕುರಿತು ಪ್ರಸ್ತಾವ ಆಗಿಯೇ ಆಗುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಜತೆಗೆ ಅವುಗಳನ್ನು ಜೀರ್ಣೋ ದ್ಧಾರ ಮಾಡುವ ಸಂದರ್ಭದಲ್ಲಿ ಈ ಕುರುಹುಗಳ ಬಳಿ ಬಂದು ಪ್ರಾರ್ಥನೆ ಮಾಡಿರುವ ಉದಾಹರಣೆಗಳು ಕೂಡ ಇವೆ. ಆದರೆ ಇನ್ನೂ ಕೂಡ ಬಾರೆತ್ಯಾರಿನ ಪರಿಸರದ ಈ ದೇಗುಲದ ಕುರಿತು ಜೀರ್ಣೋದ್ಧಾರದ ಕುರಿತು ಪ್ರಯತ್ನಗಳೇ ನಡೆದಿಲ್ಲ ಎನ್ನಲಾಗುತ್ತಿದೆ.

ಶತಮಾನಗಳ ಹಿನ್ನೆಲೆ
ಕುರುಹುಗಳು ಪತ್ತೆಯಾದ ಸ್ಥಳ ದಲ್ಲಿ ಶತಮಾನಗಳ ಹಿನ್ನೆಲೆಯನ್ನು ಸಾದರಪಡಿಸುವ ಅಗಲವಾದ ಮುರಕಲ್ಲಿನಿಂದ ಕಟ್ಟಲಾದ ಪಂಚಾಂಗ ಗಳ ಕಲ್ಲುಗಳು ಪೊದೆಯ ಮಧ್ಯ ಭಾಗದಲ್ಲಿ ಅಲ್ಲಿಲ್ಲಿ ಕಾಣಿಸುತ್ತಿವೆ. ಜತೆಗೆ ಅಲ್ಲೇ ಪಕ್ಕದಲ್ಲಿ ಬಾವಿಯೊಂದಿದ್ದು, ಗಿಡಗಂಟಿಗಳ ಮಧ್ಯೆ ಇರುವ ಬಾವಿ ಈಗಲೂ ಸುಸ್ಥಿತಿಯಲ್ಲಿದೆ. ಸುಜಾನಂದ ರೈ ಅವರ ಮನೆ ಸಮೀಪ ಹಲವು ಚಪ್ಪಡಿ ಕಲ್ಲುಗಳಿದ್ದು, ಅವೆಲ್ಲವೂ ದೇಗುಲದ ಕಿಟಕಿ ದಾರಂದಗಳಾಗಿರುವ ಸಾಧ್ಯತೆಯ ಕುರಿತು ಅಭಿಪ್ರಾಯಿಸಲಾಗುತ್ತಿದೆ.

ಮಣಿನಾಲ್ಕೂರು, ಸರಪಾಡಿ ಗ್ರಾಮ ಗಳ ಸುತ್ತ ಮುತ್ತಲ ದೇವಸ್ಥಾನ, ದೈವಸ್ಥಾನಗಳಲ್ಲಿ ಅಷ್ಟಮಂಗಲ ಪ್ರಶ್ನೆ ಇಡುವ ಸಂದರ್ಭದಲ್ಲಿ ಗ್ರಾಮದಲ್ಲಿ ಶಿವದೇವಾಲಯವೊಂದಿದ್ದು, ಅದು ಈಗ ಶಿಥಿಲಾವಸ್ಥೆಯಲ್ಲಿದೆ ಎಂದು ಕಂಡುಬರುತ್ತಿತ್ತು. ಹೀಗಾಗಿ ಹಲ ವಾರು ಮಂದಿ ಈ ಕುರುಹು ಗಳಿದ್ದ ಸ್ಥಳಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಹೋಗು ತ್ತಿದ್ದಾರೆ. ಮುಂದಿನ ದಿನ ಗಳಲ್ಲಿ ಭಕ್ತರಿಂದ ಪ್ರಶ್ನಾ ಚಿಂತನೆಯ ಪ್ರಯತ್ನ ಗಳು ನಡೆದರೆ ದೇವಾ ಲಯದ ಸ್ಪಷ್ಟಚಿತ್ರಣ ತಿಳಿದು ಬರಬಹುದು. ಜತೆಗೆ ಇತಿಹಾಸಕಾರರು ಕೂಡ ಶಿಲೆಯಕುರಿತು ಅಧ್ಯಯನ ನಡೆಸಿದರೆ ಯಾವ ಕಾಲದಲ್ಲಿ, ಯಾರು ದೇವಾಲಯ ನಿರ್ಮಿಸಿದ್ದರು ಎಂಬುದರ ಕುರಿತು ಪುರಾವೆಗಳು ಸಿಗಬಹುದಾಗಿದೆ ಎಂದು ಸ್ಥಳೀಯ ನಿವಾಸಿ ವಿಶ್ವನಾಥ ಶೆಟ್ಟಿ ಹೇಳುತ್ತಾರೆ.

ಕುರುಹುಗಳ ಕುರಿತು ಪ್ರಶ್ನಾಚಿಂತನೆ ಇಡಲು ನಾವು ಶಕ್ತರಾಗಿಲ್ಲ, ಆ ಜಾಗದಲ್ಲಿ ದೇವಾಲಯ ನಿರ್ಮಾಣವಾಗಬೇಕು ಎಂದು ದೇವರು ಬಯಸಿದರೆ ಆ ಜಾಗ ದೇವರಿಗೆ ಸೇರಲಿ. ಪ್ರಸ್ತುತ ಸಾಕಷ್ಟು ಮಂದಿ ಇಲ್ಲಿಗೆ ಆಗಮಿಸಿ ಕುರುಹುಗಳನ್ನು ವೀಕ್ಷಿಸಿ ಪ್ರಾರ್ಥನೆ ಸಲ್ಲಿಸಿ ತೆರಳುತ್ತಿದ್ದಾರೆ.
– ಸುಜಾನಂದ ರೈ, ಕುರುಹು ಪತ್ತೆಯಾಗಿರುವ ಜಾಗದ ಮಾಲಕ

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.