Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ
Team Udayavani, May 16, 2024, 7:45 PM IST
ಬಂಟ್ವಾಳ: ಗಾಂಜಾ ಸೇವಿಸಿ ಅಡ್ಡಾದಿಡ್ಡಿ ದ್ವಿಚಕ್ರ ವಾಹನ ಓಡಿಸುವ ಜತೆಗೆ ಮಾರಾಟಕ್ಕೆ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಲೊರೆಟ್ಟೋಪದವು ನಿವಾಸಿ ದಾವುದುಲ್ ಹಕೀಮ್ ಪ್ರಕರಣದ ಆರೋಪಿಯಾಗಿದ್ದು, ಆತ ದ್ವಿಚಕ್ರ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದಾಗ ಬಂಟ್ವಾಳ ನಗರ ಠಾಣಾ ಪಿಎಸ್‌ಐ ಆಂಜನೇಯ ರೆಡ್ಡಿ ಹಾಗೂ ಸಿಬಂದಿ ತಡೆದು ವಿಚಾರಿಸಿದಾಗ ಗಾಂಜಾವನ್ನು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದ. ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ 1.07 ಗ್ರಾಂ ನಿದ್ರಾಜನಕ ಎಂಡಿಎಂಎ ಹಾಗೂ 15.31 ಗ್ರಾಂ ಗಾಂಜಾ ಪತ್ತೆಯಾಗಿದೆ. ತಾನು ಅಪರಿಚಿತನೋರ್ವನಿಂದ ಖರೀದಿಸಿ ಅದರಲ್ಲಿ ಸ್ವಲ್ಪ ಗಾಂಜಾ ಸೇವಿಸಿ ಉಳಿದದ್ದನ್ನು ಮಾರಾಟಕ್ಕಾಗಿ ಸಾಗಾಟ ಮಾಡುತ್ತಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನಿಂದ 2,500 ರೂ. ಮೌಲ್ಯದ ಮಾದಕ ವಸ್ತುಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.