ಉಪ್ಪಿನಂಗಡಿ: ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ ಮಗು ಸ್ಥಳದಲ್ಲೇ ಸಾವು
Team Udayavani, Oct 12, 2021, 12:29 PM IST
ಉಪ್ಪಿನಂಗಡಿ: ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ಧಾಣದಲ್ಲಿ ಮಂಗಳವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿ ಶಿರ್ಲಾಲು ನಿವಾಸಿ ಸಾಹಿದಾ (25) ಮತ್ತು ಅವರ ಪುತ್ರ ಅಂದಾಜು 1 ವರ್ಷದ ಮಗು ಸಾಹಿಲ್ ಮೃತ ದುರ್ಧೈವಿಗಳು ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ತಾಯಿ ಮಗು ರಸ್ತೆ ದಾಟುತ್ತಿದ್ದಾಗ ದಿಢೀರನೇ ನುಗ್ಗಿದ್ದ ಕೆಎಸ್ ಆರ್ ಟಿಸಿ ಬಸ್ ಇಬ್ಬರ ಮೇಲೆ ರಭಸವಾಗಿ ಚಲಿಸಿದೆ. ಪರಿಣಾಮ ತಾಯಿ ಮಗ ಇಬ್ಬರು ಬಸ್ಸಿನಡಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಬಸ್ಸಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.