“ಭಾಷಾಂತರ ಬಹುದೊಡ್ಡ ಔದ್ಯೋಗಿಕ ಕ್ಷೇತ್ರ’


Team Udayavani, Dec 25, 2019, 1:05 AM IST

sz-31

ನೆಹರೂನಗರ: ಪತ್ರಿಕೋದ್ಯಮ ಮಹತ್ತರ ಜವಾಬ್ದಾರಿ. ಪತ್ರಕರ್ತ ಸಮಾಜದ ಕನ್ನಡಿಯಂತೆ ಕಾರ್ಯ ನಿರ್ವಹಿಸುವ ಮೂಲಕ ವಾಸ್ತವ ವರದಿಯನ್ನು ಸಮಾಜಕ್ಕೆ ನೀಡಬೇಕು. ಪತ್ರಕರ್ತ ತನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಸುದ್ದಿಗೆ ಸೇರಿಸಬಾರದು. ಜನರಿಗೆ ವಾಸ್ತವ ವರದಿಯನ್ನು ತಿಳಿಸಿ, ವಿಶ್ಲೇಷಿಸುವ ಮನೋಭಾವವನ್ನು ಮೂಡಿಸುವ ಪತ್ರಿಕೋದ್ಯಮ ಕ್ಷೇತ್ರವನ್ನು ಸಂವಿಧಾನದ ನಾಲ್ಕನೇ ಅಂಗವೆನ್ನುತ್ತಾರೆ ಎಂದು ಹಿರಿಯ ಪತ್ರಕರ್ತ, ಅನುವಾದಕ ಎ.ವಿ. ಚಿತ್ತರಂಜನ್‌ ದಾಸ್‌ ಅಭಿಪ್ರಾಯಪಟ್ಟರು.

ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹಯೋಗದೊಂದಿಗೆ ರೇಡಿಯೋ ಪತ್ರಿಕೋದ್ಯಮ ಹಾಗೂ ಭಾಷಾಂತರ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಅನುವಾದ ಅಥವಾ ಭಾಷಾಂತರ ಎನ್ನುವಂಥದ್ದು ಬಹುದೊಡ್ಡ ಔದ್ಯೋಗಿಕ ಕ್ಷೇತ್ರ. ಯಾವುದೇ ಭಾಷೆಯಲ್ಲಿ ಪ್ರಾವೀಣ್ಯವನ್ನು ಪಡೆದುಕೊಂಡರೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವನ್ನು ಪಡೆಯಬಹುದು. ಕನಸನ್ನು ಕಾಣಬೇಕು. ಬಳಿಕ ಆ ಕನಸು ನನಸು ಮಾಡುವತ್ತ ಪ್ರಯತ್ನಿಸಿದರೆ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು.

ಸಮಯ ಪಾಲನೆ ರೂಢಿಸಿ
ವಿದ್ಯಾರ್ಥಿಗಳು ಜೀವನದ ಪ್ರತಿಯೊಂದು ಕಾಲಘಟ್ಟದಲ್ಲಿ ಸಮಯಪಾಲನೆಯನ್ನು ರೂಢಿಸಿಕೊಳ್ಳಬೇಕು. ಹಾಗಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ನಮ್ಮಲ್ಲಿರುವ ಪ್ರತಿಭೆಯನ್ನು ವ್ಯಕ್ತಪಡಿಸುವ ಕೆಲಸವನ್ನು ಮಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣವೆಂಬ ವೇದಿಯಲ್ಲಿ ನಮ್ಮ ಪ್ರತಿಭೆಯನ್ನು ವ್ಯಕ್ತಪಡಿಸುವ ಮೂಲಕ ಅವಕಾಶ ಪಡೆದುಕೊಳ್ಳಬೇಕು ಎಂದರು.

ಕ್ರಿಯಾಶೀಲತೆ ಎನ್ನುವಂಥದ್ದು ಪ್ರತಿಯೊಬ್ಬನ ಬಹುದೊಡ್ಡ ಪ್ರತಿಭೆ. ಕ್ರಿಯಾಶೀಲತೆಯಿಂದ ಜಾಹೀರಾತು ಏಜೆನ್ಸಿಗಳಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಳ್ಳಬಹುದು. ಜಾಹೀರಾತು ಕ್ಷೇತ್ರ ಅತ್ಯಂತ ಕ್ರಿಯಾಶೀಲ ವ್ಯಕ್ತಿಗಳನ್ನು ಹೊಂದಿದೆ. ಇಲ್ಲಿ ಪ್ರತಿಯೊಂದು ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಒದಗಿಸುವುದು ಕ್ರಿಯಾಶೀಲ ಜಾಹೀರಾತು ಎಂದು ಹೇಳಿದರು.

ಸುದ್ದಿ ವೇಗವಾಗಿದೆ
ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗಗಳ ಸಂಯೋಜಕಿ ಡಾ| ವಿಜಯಾ ಸರಸ್ವತಿ ಮಾತನಾಡಿ, ಜನಸಾಮಾನ್ಯರಿಗೆ ತಲುಪುವ ಪ್ರತಿಯೊಂದು ಸುದ್ದಿಗಳು ಅತ್ಯಂತ ವೇಗವಾಗಿ ತಲುಪುತ್ತವೆ. ಇದರ ಹಿಂದಿನ ಶ್ರಮ ಮುಖ್ಯ. ದೇಶದ ನಾನಾ ಕಡೆಗಳಲ್ಲಾಗುವ ಸುದ್ದಿಗಳನ್ನು ಭಾಷಾಂತರ ಮಾಡುವ ಪ್ರಕ್ರಿಯೆ ಮುಖ್ಯ ಪಾತ್ರವಹಿಸುತ್ತದೆ ಎಂದರು.

ಬದುಕಲು ನೂರು ದಾರಿಗಳಿವೆ
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಡಾ| ಎಚ್‌.ಜಿ. ಶ್ರೀಧರ್‌ ಮಾತನಾಡಿ, ತಂತ್ರಜ್ಞಾನದಲ್ಲಿ ಇಂದು ಬಹಳಷ್ಟು ಮುಂದುವರಿದಿದ್ದೇವೆ. ಈ ತಂತ್ರಜ್ಞಾನದಿಂದ ಅವಕಾಶಗಳನ್ನು ಬಳಸಿ ಕೊಂಡು ಸಾಧನೆಯನ್ನು ಮಾಡಬಹುದು. ದುಡಿಯುವ ಹಂಬಲವಿದ್ದರೆ, ಸೃಜನಶೀಲತೆ ಇದ್ದರೆ ಬದುಕಲು ನೂರು ದಾರಿಗಳಿವೆ. ಈ ದಾರಿಯನ್ನು ಕಾಣುವ ಮನಸ್ಸನ್ನು ಎಲ್ಲರೂ ಮಾಡಬೇಕು. ಆ ಮೂಲಕ ಅವರವರ ಬದುಕನ್ನು ಕಟ್ಟಿಕೊಳ್ಳುವ ಅವಕಾಶ ನಮ್ಮ ಮುಂದೆಯೇ ಇದೆ ಎಂದರು.

ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ಸಂಯೋಜಕ ರಾಕೇಶ್‌ ಕುಮಾರ್‌ ಕಮ್ಮಜೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರಜ್ಞಾ ಬಾರ್ಯ ವಂದಿಸಿದರು. ವಿದ್ಯಾರ್ಥಿನಿ ಸೀಮಾ ಪೋನಡ್ಕ ನಿರೂಪಿಸಿದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.