ಉಪ್ಪಿನಂಗಡಿ: ಸಹಾಯಹಸ್ತದ ನೆಪದಲ್ಲಿ ವಂಚನೆಗೆ ಯತ್ನ 


Team Udayavani, May 6, 2022, 6:59 AM IST

Untitled-1

ಉಪ್ಪಿನಂಗಡಿ: ಅಪಘಾತಕ್ಕೀಡಾಗಿ ಸುದೀರ್ಘ‌ ಕಾಲದ ಚಿಕಿತ್ಸೆಗೆ ತುತ್ತಾಗಿರುವ ಮಗನಿಗೆ ಸಹಾಯ ಹಸ್ತ ನೀಡಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿದ ಕುಟುಂಬವನ್ನು ದೋಚಲು ಯತ್ನಿಸಿದ ಘಟನೆ ನಡೆದಿದೆ.

ಇಲ್ಲಿನ ಪೆರಿಯಡ್ಕ ನಿವಾಸಿ ಶೇಖರ್‌ ಪೂಜಾರಿ ಅವರ ಪುತ್ರ ಕಾಲೇಜು ವಿದ್ಯಾರ್ಥಿ ವಂದಿತ್‌ ಎಸ್‌. ಕಳೆದ ಜನವರಿಯಲ್ಲಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆಗೆ ಒಳಗಾಗಿದ್ದಾರೆ. ಚಿಕಿತ್ಸೆಗೆ ಹೆಚ್ಚಿನ ಹಣದ ಅಗತ್ಯವಿದ್ದ ಕಾರಣ ದಾನಿಗಳ ಸಹಕಾರ ಬಯಸಿ ಸಾಮಾಜಿಕ ಜಾಲತಾಣಗಳಲ್ಲಿ ಮನವಿಯನ್ನು ಹರಿಯಬಿಡಲಾಗಿತ್ತು.

ಇದನ್ನು ಗಮನಿಸಿದ ವ್ಯಕ್ತಿಯೋರ್ವ ತಾನು ಗುಲ್ಬರ್ಗದ ಪ್ರಖ್ಯಾತ  ದರ್ಗಾವೊಂದರ ಪದಾಧಿಕಾರಿ ಎಂದು ಪರಿಚಯಿಸಿ, ನಿಮ್ಮ ಸಮಸ್ಯೆಯನ್ನು ಪರಿಶೀಲಿಸಿ ಸಮಾಜದ ಮುಂದೆ ಪ್ರಸ್ತಾವಿಸಲಾಗಿತ್ತು. 1.98 ಲಕ್ಷ ರೂ. ಸಂಗ್ರಹಣೆಗೊಂಡಿದೆ. ಈ ಮೊತ್ತವನ್ನು ಪಡೆಯಲು ತಾವು ಖುದ್ದಾಗಿ  ಬರುತ್ತೀರಾ ಅಥವಾ ನಾವು ಬಂದು ಕೊಡಬೇಕಾ  ಎಂದು  ಕೇಳಿದ್ದರು. 1.98 ಲಕ್ಷ ರೂ. ಮೊತ್ತ ಸಿಗುವುದಾದರೆ ಗುಲ್ಬರ್ಗಕ್ಕೆ ಹೋಗುವುದಕ್ಕೆ ಮನಸ್ಸು ಮಾಡಿ  ವಿಚಾರವನ್ನು  ಉಪ್ಪಿನಂಗಡಿಯ ಪಂ. ಸದಸ್ಯ ಯು. ಟಿ. ತೌಶಿಫ್ ಗಮನಕ್ಕೆ ತರಲಾಯಿತು. ಗುಲ್ಬರ್ಗದ ಸಂಘ ಸಂಸ್ಥೆಗಳ ಬಗ್ಗೆ ಪೂರ್ಣ ಮಾಹಿತಿ ಹೊಂದಿರದ ಅವರು ನಲಪ್ಪಾಡ್‌ ಹಾಗೂ ಯು. ಟಿ. ಖಾದರ್‌ ಮೂಲಕ ಗುಲ್ಬರ್ಗದ ಕಾಂಗ್ರೆಸ್‌ ಮುಂದಾಳುಗಳ ಸಂಪರ್ಕ ಸಾಧಿಸಿ ಸಂಸ್ಥೆಯ ಬಗ್ಗೆ ಮಾಹಿತಿ ಪಡೆದಾಗ ಫೋನಾಯಿಸಿದ ವ್ಯಕ್ತಿಗೂ ದರ್ಗಾದ ಸಮಿತಿಗೂ ಯಾವುದೇ ಸಂಬಂಧವಿಲ್ಲವೆಂದು ತಿಳಿಯಲ್ಪಟ್ಟಿದೆ. ಇದು ಮೋಸವಾಗಿರಬಹುದೆಂದು ತಿಳಿದು ಹಣವನ್ನು ಬ್ಯಾಂಕ್‌ ಖಾತೆಗೆ ಹಾಕಲು ತಿಳಿಸಿದಾಗ ತಾವೇ ತರುವುದಾಗಿ ಹೇಳಿ ವಾಹನ ಬಾಡಿಗೆ 4,000 ರೂ. ಫೋನ್‌ ಪೇ ಮಾಡುವಂತೆ ತಿಳಿಸಿದ. ಒಟ್ಟುಮೊತ್ತದಿಂದ ಅದನ್ನು ಕಡಿತಗೊಳಿಸುವಂತೆ ತಿಳಿಸಿದ ಬಳಿಕ ಆತ ಯಾವುದೇ ಕರೆ ಮಾಡಿಲ್ಲ. ಆದುದರಿಂದ ಇದೊಂದು ವಂಚನಾ ಜಾಲ ಆಗಿರಬಹುದೆಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.