ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ

Team Udayavani, Oct 18, 2022, 10:21 AM IST

ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ

ಬೆಳ್ತಂಗಡಿ : ಶಿರಾಡಿ ರಸ್ತೆಯಾಗಿ ಪೆರಿಯ ಶಾಂತಿಯಿಂದ ಕೊಕ್ಕಡ ಮೂಲಕ ಧರ್ಮಸ್ಥಳವನ್ನು ಸೇರುವ ಹಾಗೂ ಚಾರ್ಮಾಡಿ ಮಾರ್ಗವಾಗಿ ಬಂದು ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆಯು ಶೀಘ್ರ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕಳೆದ ಬಾರಿ ಧರ್ಮಸ್ಥಳ ನೇತ್ರಾವತಿ ವರೆಗಿನ ಚತುಷ್ಪಥ ರಸ್ತೆ ಉದ್ಘಾಟನೆ ವೇಳೆ ಉಜಿರೆ-ಪೆರಿಯಶಾಂತಿ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಅಗತ್ಯದ ಬಗ್ಗೆ ಪ್ರಸ್ತಾವವನ್ನು ಸರಕಾರದ ಮುಂದಿಟ್ಟಿದ್ದರು. ಇದೀಗ ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯನ್ನು ಸಂಪರ್ಕಿಸುವ ಉಜಿರೆಯಿಂದ ಪೆರಿಯಶಾಂತಿ ವರೆಗಿನ 30 ಕಿ.ಮೀ. ವ್ಯಾಪ್ತಿಯನ್ನು ರಾ.ಹೆ.-73ರ ಸ್ಪರ್‌ ರಸ್ತೆಯಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ. ರಸ್ತೆಯನ್ನು ರಾಜ್ಯ ಹೆದ್ದಾರಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.

ಸ್ಪರ್‌ ಯೋಜನೆಯಡಿ ಮೇಲ್ದರ್ಜೆಗೆ
ಐತಿಹಾಸಿಕ ಕ್ಷೇತ್ರಗಳನ್ನು ಸಂಪರ್ಕಿಸುವ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ, ಒಂದು ರಾಷ್ಟ್ರೀಯ ಹೆದ್ದಾರಿಯಿಂದ ಇನ್ನೊಂದು ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಅಥವಾ ಒಂದು ಪ್ರಮುಖ ರಸ್ತೆಯಿಂದ ಇನ್ನೊಂದು ಪ್ರಮುಖ ರಸ್ತೆಗೆ ಸಂಪರ್ಕಿಸುವ, ಒಳದಾರಿಗಳು ಅಥವಾ ಸಮೀಪದ ದಾರಿಗಳನ್ನು ಮೇಲ್ದರ್ಜೆ ಗೇರಿಸಿಕೊಂಡು ಅವುಗಳಿಗೆ ಸಮರ್ಪಕವಾದ ಅನು ದಾನ ಒದಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಮಾದರಿಯ ರಸ್ತೆಯಂತೆ ಸುಸಜ್ಜಿತ ವಾಗಿ ನಿರ್ಮಾಣ ಮಾಡು ವುದು ಈ ಸ್ಪರ್‌ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇತಿಹಾಸ ಪ್ರಸಿದ್ಧ ದೇವಾಲಯಗಳು, ತೀರ್ಥ ಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆಗಳಿಗೆ ಈಗಾಗಲೇ ರಾಜ್ಯದ ಹಲವೆಡೆ ಈ ರೀತಿಯ ಯೋಜನೆಯನ್ನು ಅನ್ವಯಿಸಲಾಗಿದೆ.
ಉಜಿರೆಯಿಂದ ಧರ್ಮಸ್ಥಳ ವರೆಗೆ ಚತುಷ್ಪಥದ ಬೇಡಿಕೆಯಿದ್ದು, ಧರ್ಮಸ್ಥಳ – ನಿಡ್ಲೆ – ಕೊಕ್ಕಡ ಮಾರ್ಗವಾಗಿ ಪೆರಿಯಶಾಂತಿ ವರೆಗೆ 10 ಮೀಟರ್‌ ಅಗಲದ ರಸ್ತೆ ನಿರ್ಮಾಣ ಸಾಧ್ಯತೆಯಿದೆ. ಪ್ರಸ್ತುತ ಲೋಕೋಪ‌ಯೋಗಿ ಇಲಾಖೆಯ ಅಧೀನದಲ್ಲಿರುವ ಈ ರಸ್ತೆಯು ಧರ್ಮಸ್ಥಳದಿಂದ ಪೆರಿಯ ಶಾಂತಿ ವರೆಗಿನ ದುರಸ್ತಿ ಕಾರ್ಯಕ್ಕೆ ಪ್ರಸಕ್ತ ವರ್ಷದಲ್ಲಿ ಅನುದಾನ ದೊರೆತಿದ್ದು ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಧರ್ಮಸ್ಥಳ – ಸುಬ್ರಹ್ಮಣ್ಯ – ಮಂಗಳೂರು – ಬೆಂಗಳೂರು – ಉಡುಪಿ – ಸೋಲಾಪುರ ಪ್ರದೇಶಕ್ಕೆ ತೆರಳುವ ಪ್ರಯಾಣಿಕರಿಗೆ ಈ ರಸ್ತೆ ವಿಸ್ತರಣೆಯಿಂದ ಅನುಕೂಲವಾಗಲಿದೆ.

ಉಜಿರೆ – ಧರ್ಮಸ್ಥಳ ಚತುಷ್ಪಥ
ಧರ್ಮಸ್ಥಳ ಕ್ಷೇತ್ರದ ಭಕ್ತರ ಅನುಕೂಲ ಹಾಗೂ ಸ್ಥಳೀಯ ಜನರ ಅಗತ್ಯ ಮನಗಂಡು ಈಗಿರುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆ ಗೇರಿಸಲಾಗಿದೆ. ಉಜಿರೆಯಿಂದ ಧರ್ಮಸ್ಥಳ ವರೆಗೆ ಚತುಷ್ಪಥ ನಿರ್ಮಾಣವಾಗಲಿದ್ದು ಉಳಿದಂತೆ ದ್ವಿಪಥವಾಗಿ ಅಭಿವೃದ್ಧಿಯಾಗಲಿದೆ ಎಂದು ಶಾಸಕ ಹರೀಶ್‌ ಪೂಂಜ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 73ನ್ನು ಸಂಪಕಿಸುವ ಉಜಿರೆ- ಪೆರಿಯಶಾಂತಿ ರಸ್ತೆ ಐತಿಹಾಸಿಕ ಸ್ಥಳಗಳನ್ನು ಸಂಪರ್ಕಿಸುವ ಸ್ಪರ್‌ ಯೋಜನೆಯಲ್ಲಿ ಮೇಲ್ದರ್ಜೆಗೆ ಏರಿಸುವ ಕುರಿತು ಅಧಿಕೃತ ಆದೇಶ ಬಿಡುಗಡೆಯಾಗಿ ನೋಟಿಫಿಕೇಶನ್‌ ಹಂತದಲ್ಲಿದೆ.
– ಮಹಾಬಲ ನಾಯ್ಕ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ದ.ಕ.

ಇದನ್ನೂ ಓದಿ : ಸುರತ್ಕಲ್ ಟೋಲ್ ತೆರವಿಗೆ ಹೋರಾಟಗಾರರು ಸಜ್ಜು: ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.