ರಾ.ಹೆ. ಪಕ್ಕದ 35 ಅನಧಿಕೃತ ಅಂಗಡಿ ತೆರವು
Team Udayavani, Nov 25, 2022, 6:03 AM IST
ಬೆಳ್ತಂಗಡಿ: ಇತ್ತೀಚೆಗಷ್ಟೇ ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿ 73 ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೇರಿದ್ದ ಉಜಿರೆಯಿಂದ ಧರ್ಮಸ್ಥಳ ಮೂಲಕ ಸಾಗುವ ಪೆರಿಯಶಾಂತಿ ರಸ್ತೆ ಅಂಚಿನಲ್ಲಿದ್ದ 35ಕ್ಕೂ ಅಧಿಕ ಅನಧಿಕೃತ ಅಂಗಡಿಗಳನ್ನು ದ.ಕ. ಜಿಲ್ಲಾಧಿಕಾರಿ ಡಾ| ರವಿಕುಮಾರ್ ಸೂಚನೆಯಂತೆ ಗುರುವಾರ ಜೆಸಿಬಿ ಮೂಲಕ ಸಂಪೂರ್ಣ ತೆರವುಗೊಳಿಸಲಾಯಿತು.
ಲೋಕೋಪಯೋಗಿ ಇಲಾಖೆ, ಕಂದಾಯ, ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದವು. ಹೆದ್ದಾರಿ ಅಂಚಿನಲ್ಲೇ ಗ್ರಾ.ಪಂ.ಗಳ ಅನುಮತಿಯಿಲ್ಲದೆ ಅನಧಿಕೃತ ಅಂಗಡಿ ಸ್ಥಾಪಿಸಿ ವ್ಯವಹಾರ ನಡೆಸುತ್ತಿದ್ದರು. ನಿಯಮಾನುಸಾರ ರಸ್ತೆ ಫುಟ್‌ಪಾತ್ ಸ್ಥಳದಲ್ಲಿ ಯಾವುದೇ ಅಂಗಡಿ ನಿರ್ಮಿಸುವಂತಿಲ್ಲ. ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕ ಅಂಗಡಿ ನಿರ್ಮಿಸಿದರೆ ಕಠಿನ ಕಾನೂನು ಕ್ರಮಕ್ಕೆ ಅವಕಾಶವಿದೆ. ಆದರೂ ನಿಯಮ ಮೀರಿ ಅಂಗಡಿ ಹಾಕಲಾಗಿತ್ತು. ಈ ವಿಚಾರ ತಾ.ಪಂ. ಸಭೆಗಳಲ್ಲೂ ಹಲವು ಬಾರಿ ಪ್ರಸ್ತಾವ ಆಗಿತ್ತು.
ಪ್ರವಾಸಿಗರು ರಸ್ತೆಯಲ್ಲಿ ವಾಹನ ನಿಲ್ಲಿಸಿ ಅಂಗಡಿಗೆ ಹೋಗುವುದರಿಂದ ಇತರ ವಾಹನಗಳ ಸವಾರರಿಗೆ ತೊಂದರೆ ಆಗುತ್ತಿದ್ದ ಬಗ್ಗೆ ಹಲವು ದೂರುಗಳು ಬಂದಿದ್ದವು. ಅನೇಕ ಬಾರಿ ಪ್ರವಾಸಿಗರ ವಾಹನದಿಂದ ಕಳವು ನಡೆದ ದೂರುಗಳು ಕೇಳಿ ಬರುತ್ತಿದ್ದವು. ನ. 23ರಂದು ಸಂಜೆ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದ ಬೊಲೆರೋ ವಾಹನ ರಸ್ತೆಯ ಅಂಚಿನಲ್ಲಿ ನಿಲ್ಲಿಸಿ ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಬಸ್ ಢಿಕ್ಕಿಯಾಗಿ ಮಂಡ್ಯ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಕುರಿತು ಉದಯವಾಣಿಗೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಅನಧಿಕೃತ ಅಂಗಡಿ ತೆರವುಗೊಳಿಸುವುದಾಗಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.