Belthangady ನೇತ್ರಾವತಿಯಲ್ಲಿ ಅಪರಿಚಿತ ಶವ ಪತ್ತೆ
Team Udayavani, Dec 10, 2023, 10:05 PM IST
ಬೆಳ್ತಂಗಡಿ: ನೇತ್ರಾವತಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ರವಿವಾರ ಬೆಳಗ್ಗೆ ಪತ್ತೆಯಾಗಿದೆ.
ನೇತ್ರಾವತಿ ನದಿಯಲ್ಲಿ ಜನರು ಸ್ನಾನ ಮಾಡುವ ವೇಳೆ ಶವ ನೀರಿನಲ್ಲಿ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಮೃತ ವ್ಯಕ್ತಿ 40ರಿಂದ 45 ವರ್ಷ ವಯಸ್ಸಿನದ್ದಾಗಿರಬಹುದೆಂದು ಅಂದಾಜಿಸಲಾಗಿದ್ದು ಎರಡರಿಂದ ಮೂರು ದಿನದ ಹಿಂದೆ ನೀರಿಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶವವನ್ನು ನದಿ ನೀರಿನಿಂದ ಮೇಲೆತ್ತಲು ಶೌರ್ಯ ವಿಪತ್ತು ನಿರ್ವಹಣ ತಂಡದ ಸ್ವಯಂಸೇವಕರಾದ ಅವಿನಾಶ ಭಿಡೆ, ರವೀಂದ್ರ ಉಜಿರೆ, ರಾಘವೇಂದ್ರ, ಶಶಿಕುಮಾರ್, ಧನ್ವಿ ಆ್ಯಂಬುಲೆನ್ಸ್ ನ ಧನೇಶ್ ಮತ್ತಿತರರು ಪೊಲೀಸರೊಂದಿಗೆ ಸಹಕರಿಸಿದರು.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.