Uppinangady; 7 ಮಕ್ಕಳಿದ್ದೂ ಅನಾಥಾಶ್ರಮ ಸೇರಿದ ವೃದ್ಧೆ ಸಾವು
ಅಂತ್ಯ ಸಂಸ್ಕಾರಕ್ಕೂ ಬಾರದ ಮಕ್ಕಳು ! ಆಶ್ರಮದವರಿಂದಲೇ ಅಂತಿಮ ವಿಧಿ
Team Udayavani, Jan 8, 2024, 7:10 AM IST
ಉಪ್ಪಿನಂಗಡಿ: ವೃದ್ಧಾಪ್ಯದ ಕಿರಿಕಿರಿ ಯಿಂದ ಮಕ್ಕಳಿಗೆ ಬೇಡವಾಗಿ ಅನಾಥಶ್ರಮ ಸೇರಿದ್ದ 90ರ ವಯಸ್ಸಿನ ವೃದ್ಧೆ ಲಕ್ಷ್ಮೀ ಹೆಗ್ಡೆ ಅವರು ಹೃದಯಾಘಾತಕ್ಕೊಳಗಾಗಿ ರವಿವಾರ ನಿಧನ ಹೊಂದಿದರು.
ಅವರಿಗೆ 7 ಮಕ್ಕಳಿದ್ದರೂ ಅವರಲ್ಲಿ ಯಾರೂ ಪಾರ್ಥಿವ ಶರೀರದ ಅಂತಿಮ ಕಾರ್ಯಕ್ಕೆ ಆಗಮಿಸದ ಕಾರಣ ಅನಾಥಾಶ್ರ ಮದವರೇ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ ಘಟನೆ ವರದಿಯಾಗಿದೆ.
ಉಪ್ಪಿನಂಗಡಿ ಬಳಿಯ ಇಳಂತಿಲದಲ್ಲಿ ಲಕ್ಷ್ಮೀ ಹೆಗ್ಡೆ ಸ್ವಂತ ಮನೆಯನ್ನು ಹೊಂದಿದ್ದರು. ವೃದ್ಧಾಪ್ಯದಲ್ಲಿ ಮಕ್ಕಳಿಗೆ ಬೇಡವಾಗಿ ಅಸಹಾಯಕತೆಗೆ ಸಿಲುಕಿದ ಇವರು ನ್ಯಾಯ ಬಯಸಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಮಕ್ಕಳನ್ನು ಕರೆದು ಹೆತ್ತಮ್ಮನ ರಕ್ಷಣೆಯ ಕರ್ತವ್ಯ ನಿರ್ವಹಿಸಿ ಎಂದು ಮಕ್ಕಳಿಗೆ ಸೂಚಿಸಿದಾಗ ಮಕ್ಕಳಿಂದ ಅಸಹಕಾರ ವ್ಯಕ್ತವಾಗಿತ್ತು.
ಆ ಬಳಿಕ ಆಗಿನ ಠಾಣಾಧಿಕಾರಿ ನಂದ ಕುಮಾರ್ ಲಕ್ಷ್ಮೀ ಹೆಗ್ಡೆ ಅವರನ್ನು ಕನ್ಯಾನದ ಭಾರತ್ ಸೇವಾಶ್ರಮಕ್ಕೆ ಸೇರಿಸಿದ್ದರಲ್ಲದೇ ಮಗನ ಸ್ಥಾನದಲ್ಲಿ ನಿಂತು ಆಶ್ರಮಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸುತ್ತಿದ್ದರು.
ಲಕ್ಷ್ಮೀ ಹೆಗ್ಡೆ ರವಿವಾರ ಹೃದಯಾಘಾತದಿಂದ ನಿಧನ ಹೊಂದಿದ ಬಳಿಕ ಶವದ ಅಂತಿಮ ವಿಧಿ ನೆರವೇರಿಸಲು ಸಂಬಂಧಿಕರ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಯಾವುದೇ ಸ್ಪಂದನೆ ದೊರೆಯಲಿಲ್ಲ. ಆಗ ಅವರ ಬಗ್ಗೆ ಕಾಳಜಿ ವಹಿಸಿದ್ದ ಪೊಲೀಸ್ ಅಧಿಕಾರಿ ನಂದಕುಮಾರ್ ಅವರನ್ನು ಸಂಪರ್ಕಿಸಲಾಯಿತು. ಆದರೆ ಅವರು ಕರ್ತವ್ಯದ ಕಾರಣಕ್ಕೆ ದೂರದಲ್ಲಿ ಇದ್ದ ಕಾರಣ ಸಕಾಲದಲ್ಲಿ ತಲುಪಲು ಅಸಾಧ್ಯವಾಗಿತ್ತು. ಹೀಗಾಗಿ ಆಶ್ರಮದ ಕ್ರಮದಂತೆ ಮೃತರ ಅಂತ್ಯವಿಧಿಯನ್ನು ಅಲ್ಲಿಯೇ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.