ಮನೆಗೆ ಬಿದ್ದ ಬೆಂಕಿ ನಂದಿಸಲು ಹೋಗಿದ್ದಾತ ಚಿನ್ನಾಭರಣ ಎಗರಿಸಿದ್ದ
Team Udayavani, Jun 8, 2022, 11:15 PM IST
ಉಪ್ಪಿನಂಗಡಿ : ಕಳೆದ ಮೇ 16ರಂದು ಮನೆಗೆ ಬೆಂಕಿ ಬಿದ್ದ ಪ್ರಕರಣದಲ್ಲಿ ಮನೆಯ ಕಪಾಟಿನಲ್ಲಿದ್ದ 2.50 ಲಕ್ಷರೂ ಮೊತ್ತದ ಚಿನ್ನಾಭರಣ ಕಳವಿಗೀಡಾದ ಕೃತ್ಯಕ್ಕೆ ಸಂಬಂಧಿಸಿ ಕಳವು ನಡೆಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾ| ಕಣಿಯೂರು ಗ್ರಾಮದ ಮಲೆಂಗಲ್‌ನ ಆನಂದ ಮೂಲ್ಯ ಅವರ ಮನೆಗೆ ಬೆಂಕಿ ತಗಲಿದ್ದು, ಸ್ಥಳೀಯರು ಸಕಾಲಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು. ಆದರೆ ಆ ವೇಳೆಗಾಗಲೇ ಮನೆಯಲ್ಲಿದ್ದ ಬಟ್ಟೆ ಬರೆ, ಕೆಮರಾದ ಪರಿಕರಗಳು ಸುಟ್ಟು ಹೋಗಿದ್ದು, ಕಪಾಟಿನಲ್ಲಿದ್ದ ಚಿನ್ನ ಇಡುವ ಬಾಕ್ಸ್ ಮತ್ತು ದಾಖಲೆ ಪತ್ರಗಳು ಯಥಾ ಸ್ಥಿತಿಯಲ್ಲಿದ್ದವು. ಅನಂತರ ವಸ್ತುಗಳನ್ನು ಒಪ್ಪವಾಗಿ ಜೋಡಿಸಿ ಇಡುವಾಗ ಚಿನ್ನ ಇಡುವ ಬಾಕ್ಸ್‌ನೊಳಗಿದ್ದ ವಿವಿಧ ಆಭರಣಗಳು ಸೇರಿದಂತೆ ಒಟ್ಟು 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವು ಕಳವಾಗಿರುವುದು ಕಂಡುಬಂದಿತ್ತು.
ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯ ಬಾರ್ ಉದ್ಯೋಗಿ ಶಿವಪ್ರಸಾದ್ (38) ನನ್ನು ವಿಚಾರಣೆ ನಡೆಸಿದಾಗ, ತಾನು ಚಿನ್ನಾಭರಣವನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದ. ಪೊಲೀಸರು ಆಭರಣಗಳನ್ನು ವಶಪಡಿಸಿ ಕೊಂಡಿದ್ದಾರೆ.
ಬೆಂಕಿ ನಂದಿಸಲು ಬಂದಾಗ ಮನೆಯೊಳಗೆ ಚಿನ್ನಾಭರಣದ ಪೆಟ್ಟಿಗೆ ನೋಡಿ ಅದನ್ನು ಎಗರಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.