ಉಪ್ಪಿನಂಗಡಿ: ವ್ಯಕ್ತಿಯ ಕೈಯಲ್ಲಿದ್ದ 10 ಲಕ್ಷ ರೂ. ದರೋಡೆಗೈದ ಅಪರಿಚಿತ ವ್ಯಕ್ತಿ
Team Udayavani, Mar 22, 2023, 7:46 AM IST
ಉಪ್ಪಿನಂಗಡಿ: ವ್ಯಕ್ತಿಯೋರ್ವರ ಕೈಯಲ್ಲಿದ್ದ 10 ಲಕ್ಷ ರೂ. ಕಟ್ಟನ್ನು ಅಪರಿಚಿತನೋರ್ವ ದರೋಡೆ ನಡೆಸಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಮಾ. 20ರಂದು ಮಧ್ಯಾಹ್ನ ನಡೆದಿದೆ.
ಇಳಂತಿಲ ಗ್ರಾಮದ ಕಾಯರ್ಪಾಡಿ ನಿವಾಸಿ ಮುಹಮ್ಮದ್ ಕೆ. ಎಂಬವರು ದರೋಡೆಗೊಳಗಾದವರು. ಮುಹಮ್ಮದ್ ಅವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು ಸಂಗ್ರಹಿಸಿಟ್ಟ 10 ಲಕ್ಷ ರೂ.ವನ್ನು ಕಳವು ಮಾಡಲಾಗಿದೆ. ಅವರು ದ್ವಿಚಕ್ರ ವಾಹನದ ಸೀಟಿನ್ನೆತ್ತಿ ಹಣದ ಕಟ್ಟನ್ನು ಅದರಲ್ಲಿ ಇಡುತ್ತಿದ್ದಂತೆಯೇ ಮುಹಮ್ಮದ್ ಅವರ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿಯೋರ್ವ ಹಣದ ಕಟ್ಟನ್ನು ಬಲವಂತವಾಗಿ ಎಳೆದುಕೊಂಡು ಓಡಿ ಹೋಗಿದ್ದಾನೆ. ಮುಹಮ್ಮದ್ ಅವರು ಈತನನ್ನು ಸ್ವಲ್ಪ ದೂರದವರೆಗೆ ಬೆನ್ನಟ್ಟಿಕೊಂಡು ಹೋಗಿದ್ದು, ಆದರೆ ಆತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಈ ದರೋಡೆಕೋರ ಪ್ಯಾಂಟ್ ಹಾಗೂ ಟೀ ಶರ್ಟ್ ಧರಿಸಿದ್ದ ಎಂದು ಮುಹಮ್ಮದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ಮುಹಮ್ಮದ್ ಅವರು ದರೋಡೆಗೊಳಗಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿ, ಚರ್ಚಿಸಿ ಪೊಲೀಸ್ ಠಾಣೆಗೆ ತಡವಾಗಿ ಬಂದು ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇಬ್ಬರು ವಶಕ್ಕೆ
ಈ ಪ್ರಕರಣಕ್ಕೆ ಸಂಬಂಧಿಸಿ ರಿಫಾಯಿನಗರ ಪರಿಸರದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.