Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ
Team Udayavani, Oct 19, 2024, 1:45 AM IST
ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ.
ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್ನಲ್ಲಿ ಇರಿಸಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್, ಶಿವಾನಂದ ಅವರ ತಂಡ ಸುರೇಶ್ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ವಲಯಾಧಿಕಾರಿಯಿಂದ ತನಿಖೆ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿ ರಾಘವೇಂದ್ರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.