‘ಸಾಹಿತ್ಯ ವ್ಯಕ್ತಿತ್ವದ ಸೌಂದರ್ಯಕ್ಕೆ  ಕಾರಣ’


Team Udayavani, Feb 16, 2019, 9:15 AM IST

16-february-12.jpg

ಉಪ್ಪಿನಂಗಡಿ: ಸಂಸ್ಕೃತಿ ವ್ಯಕ್ತಿಯ ವ್ಯಕ್ತಿತ್ವದ ಉದ್ಧಾರಕ್ಕೆ ಕಾರಣವಾದರೆ, ಸಾಹಿತ್ಯ ವ್ಯಕ್ತಿತ್ವದ ಸೌಂದರ್ಯಕ್ಕೆ ಕಾರಣವಾಗುತ್ತದೆ. ಸಾಹಿತ್ಯದ ಮೂಲಕ ಸತ್ಯಶಾಂತ ಪ್ರತಿಷ್ಠಾನ ಉತ್ತಮ ಸಮಾಜದ ನಿರ್ಮಾಣಕ್ಕೆ ಪೂರಕವಾಗಿರಲಿ ಎಂದು ಸುಬ್ರಹ್ಮಣ್ಯ ಮಠಾಧೀಶ ವಿದ್ಯಾಪ್ರಸನ್ನತೀರ್ಥ ಶ್ರೀಗಳು ತಿಳಿಸಿದರು.

ಅವರು ಗುರುವಾರ 34ನೇ ನೆಕ್ಕಿಲಾಡಿಯ ಶಾಂತಾ ಸಭಾಭವನದಲ್ಲಿ ನಡೆದ ಉಪ್ಪಿನಂಗಡಿ ಸತ್ಯಶಾಂತ ಪ್ರತಿಷ್ಠಾನ, ಕವಿಗೋಷ್ಠಿ ಇದರ ಉದ್ಘಾಟನೆಯನ್ನು ನೆರವೇರಿಸಿ ಆಶೀರ್ವಚನ ನೀಡಿದರು.

ಸತ್ಯಶಾಂತ ವಚನ ಸಂಕಲನವನ್ನು ಬಿಡುಗಡೆಗೊಳಿಸಿದ ಪುತ್ತೂರು ತಾ| ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ. ಐತಪ್ಪ ನಾಯ್ಕ ಮಾತನಾಡಿದರು. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅಲಿಮಾರ ರಘುನಾಥ ರೈ, ಶ್ರೀರಾಮ ಶಾಲಾ ಅಧ್ಯಕ್ಷ ಕರುಣಾಕರ ಸುವರ್ಣ, ಪುದುಕೋಳಿ ಕೃಷ್ಣಮೂರ್ತಿ, ಶ್ಯಾಮ್‌ ಸುದರ್ಶನ್‌ ಹೊಸಮೂಲೆ, ಶ್ಯಾಮ್‌ ಪ್ರಕಾಶ್‌ ತಲೆಂಗಳ, ರವಿ ಕುಂಟಿನಿ ಭಾಗವಹಿಸಿದರು.

ಉದ್ಘಾಟನ ಕಾರ್ಯಕ್ರಮದ ಬಳಿಕ ಸಾಹಿತಿ ವಿ.ಬಿ. ಕುಳಮರ್ವ ಹಾಗೂ ಭಾಸ್ಕರ್‌ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಿತು. ರಾಜ್ಯಾದ್ಯಂತ ಆಗಮಿಸಿದ ನೂರಾರು ಕವಿಗಳು ಭಾಗವಹಿಸಿದರು. ಯಕ್ಷಗಾನ ಕಲಾವಿದ ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು. ಸೌರಭಾ ಕುಂಟಿನಿ ಪ್ರಾರ್ಥಿಸಿ,
ಸತ್ಯಾತ್ಮ ಕುಂಟಿನಿ ವಂದಿಸಿದರು.

ಸಾಹಿತ್ಯ ಅಭಿರುಚಿ ಇರಲಿ
ಸಭಾಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಮಾತನಾಡಿ, ಇಂದಿನ ಯುವ ಜನತೆಗೆ ಜೀವನ ಮೌಲ್ಯವನ್ನು ವೃದ್ಧಿಸಿ, ಜೀವನೋಲ್ಲಾಸವನ್ನು ಹೆಚ್ಚಿಸುವ ಕಾರ್ಯ ಕಾವ್ಯ ಸಾಹಿತ್ಯದಿಂದ ನಡೆಯಬೇಕಾಗಿದೆ ಎಂದು ಆಶಿಸಿದರು.

ಟಾಪ್ ನ್ಯೂಸ್

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.