Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ
Team Udayavani, Nov 26, 2024, 12:11 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೇಮಕಗೊಂಡು 50 ವರ್ಷಗಳಿಂದ ಕ್ಷೇತ್ರವನ್ನು ಸರ್ವಧರ್ಮ ಸಮನ್ವಯತೆಯಾಗಿಸಿದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ.25ರಂದು 77ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು, ಈ ಹಿನ್ನೆಲೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಭಕ್ತಿಪೂರ್ವಕ ಶುಭಾಶಯ ಸಲ್ಲಿಸಿ ಆಶೀರ್ವಾದ ಪಡೆದರು.
ಡಾ| ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ.ಹೆಗ್ಗಡೆಯವರು ಜತೆಗಿದ್ದು ಎಲ್ಲರನ್ನು ಹರಿಸಿದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಎಸ್.ಸತೀಶ್ಚಂದ್ರ, ಎಸ್.ಕೆ.ಡಿ.ಆರ್.ಡಿ.ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಪೆರಿಂಜೆ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದ ಆನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಯೋಡಿಗುತ್ತು, ಪೆರಿಂಜೆ ಶ್ರೀ ಪದ್ಮ ಕ್ಯಾಶ್ಯೂ ಇಂಡಸ್ಟ್ರೀಸ್‌ನ ವಿಕಾಸ್ ಜೈನ್, ಪೆರಿಂಜೆ ಅರಿಹಂತ್ ಇಂಡಸ್ಟ್ರೀಸ್‌ನ ವಿಶ್ವಾಸ್ ಜೈನ್ ಮೊದಲಾದವರು ಶುಭ ಕೋರಿದರು.
ಕಾಂಚಿ ಮಠ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಪ್ರಸಾದವನ್ನು ಕ್ಷೇತ್ರಕ್ಕೆ ತಲುಪಿಸಲಾಯಿತು. ಧರ್ಮಸ್ಥಳ ಕ್ಷೇತ್ರದ ಧಾರವಾಡ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಎಸ್‌ಡಿಎಂ ಆಸ್ಪತ್ರೆ, ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿ ವರ್ಗ, ದೇವಸ್ಥಾನ ಸಿಬಂದಿ, ಕ್ಷೇತ್ರದ ವಿವಿಧ ಸಂಸ್ಥೆಗಳ ನೌಕರರು, ಡಾ| ಹೆಗ್ಗಡೆಯವರ ಕುಟುಂಬಸ್ಥರು, ಹಿರಿಯ ಸಿಬಂದಿ ವರ್ಗ, ತಾಲೂಕಿನ ವಿವಿಧ ಇಲಾಖೆ ಅಧಿಕಾರಿ ವರ್ಗ, ವಿವಿಧ ವಿಭಾಗಗಳ ಮುಖ್ಯಸ್ಥರು ಹೆಗ್ಗಡೆಯವರನ್ನು ಅಭಿನಂದಿಸಿದರು.
ಪ್ರಧಾನಿ, ಉಪರಾಷ್ಟ್ರಪತಿಗಳಿಂದ ಶುಭಾಶಯ
ಡಾ| ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸಹಿತ ರಾಷ್ಟ್ರದ ಅನೇಕ ನಾಯಕರು ಶುಭ ಕೋರಿದ್ದಾರೆ. ರಾಜ್ಯಸಭಾ ಸದಸ್ಯರೂ ಆಗಿರುವ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಅರ್ಧ ಶತಮಾನಗಳಿಂದ ಧರ್ಮಸ್ಥಳದ ಧರ್ಮಾಧಿಕಾರಿಯಾಗಿದ್ದುಕೊಂಡು ಗ್ರಾಮಾಭಿವೃದ್ಧಿ ಸಹಿತ ಸಮಾಜದ ಏಳಿಗೆಗಾಗಿ ನಾನಾ ಸ್ಥರಗಳಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ ಪದ್ಮವಿಭೂಷಣ ಸಹಿತ ವಿವಿಧ ಪುರಸ್ಕಾರ ಪಡೆದಿದ್ದು, ಅವರ ಅನುಪಮ ಸೇವೆಯನ್ನು ಉಲ್ಲೇಖೀಸಿ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ರಾಜ್ಯಸಭೆಯಲ್ಲಿ ನ.25ರಂದು ಜನ್ಮದಿನದ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.