ಧರ್ಮಸ್ಥಳದಲ್ಲಿ ಹೆಗ್ಗಡೆಯವರ ಪಟ್ಟಾಭಿಷೇಕದ 53ನೇ ವರ್ಷದ ವರ್ಧಂತ್ಯುತ್ಸವ ಸರಳ ಸಮಾರಂಭ
Team Udayavani, Oct 24, 2020, 11:54 AM IST
ಬೆಳ್ತಂಗಡಿ: ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 53ನೆ ವರ್ಷದ ವರ್ಧಂತಿ ಸಮಾರಂಭ ಅ.24 ರಂದು ನೆರವೇರುತ್ತಿದೆ.
ಧರ್ಮಸ್ಥಳ ಕ್ಷೇತ್ರಕ್ಕೆ ಗಣ್ಯಾತಿಗಣ್ಯರು ಭೇಟಿನೀಡಿ ಡಾ.ಹೆಗ್ಗಡೆ ಅವರಿಗೆ ಶುಭ ಕೋರಿದ್ದಾರೆ. ಸಕಲ ವಾದ್ಯಘೋಷಗಳೊಂದಿಗೆ ಡಾ.ಹೆಗ್ಗಡೆ ಅವರನ್ನು ಸಮಾರಂಭಕ್ಕೆ ಮೆರವಣಿಗೆಯಲ್ಲಿ ಕರೆತರಲಾಯಿತು. ಕೋವಿಡ್ ನಿಯಮಾನುಸಾರ ಸರಳವಾಗಿ ಆಚರಿಸಲಾಯಿತು.
ಮಹೋತ್ಸವ ಸಭಾಭವನದಲ್ಲಿ ವರ್ಧಂತ್ಯುತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ಕರ್ನಾಟಕ ಜಾನಪದ ವಿವಿ ನಿವೃತ್ತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ, ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಸುರೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ವರ್ಮಾ ಸೇರಿದಂತೆ ಮತ್ತಿತರರು ಭಾಗವಹಿಸಿದರು.
ಕೀರ್ತಿಶೇಷ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಮಗನಾಗಿ 1948ರ ನವಂಬರ್ 25 ರಂದು ಜನಿಸಿದ ಅಂದಿನ ವೀರೇಂದ್ರ ಕುಮಾರ್ ತನ್ನ ಇಪ್ಪತ್ತನೆ ವರ್ಷ ಪ್ರಾಯದಲ್ಲಿ ಧರ್ಮಸ್ಥಳದ ಇಪ್ಪತ್ತೊಂದನೇ “ಧರ್ಮಾಧಿಕಾರಿ”ಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು.
2017 ಅಕ್ಟೋಬರ್ 24ಕ್ಕೆ ಡಿ.ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸೇವೆಯನ್ನು ಪೂರೈಸಿದ್ದು 2018ರ ಅ.24ರ ವರೆಗೆ ಒಂದು ವರ್ಷ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ “ಸುವರ್ಣ ಮಹೋತ್ಸವ”ಆಚರಿಸಲಾಯಿತು. ಅನೇಕ ಮೌಲಿಕ ಕೃತಿಗಳ ಜೊತೆಗೆ “ಧರ್ಮಯಾನ”ಎಂಬ ಅಭಿನಂದನಾ ಗ್ರಂಥ ಪ್ರಕಟಿಸಲಾಗಿದೆ.
ಡಾ.ಹೆಗ್ಗಡೆ ವಿಶೇಷ ಸೇವೆ, ಸಾಧನೆಗಳು: ಧರ್ಮಸ್ಥಳದಲ್ಲಿ 1982ರಲ್ಲಿ ಭಗವಾನ್ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಪ್ರತಿ 12 ವರ್ಷಗಳಿಗೊಮ್ಮೆ ಮೂರು ಮಹಾಮಸ್ತಕಾಭಿಷೇಕ, ಮಹಾನಡಾವಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ, ಉಜಿರೆ, ಮಂಗಳೂರು, ಬೆಂಗಳೂರು, ಮೈಸೂರು ಹಾಗೂ ಧಾರವಾಡದಲ್ಲಿ ಕೆ.ಜಿ.ಯಿಂದ ಪಿ.ಜಿಯವರೆಗೆ ಹಲವು ಶಿಕ್ಷಣ ಸಂಸ್ಥೆಗಳು, ಕಲ್ಯಾಣ ಮಂಟಪಗಳು, ಸ್ವ-ಉದ್ಯೋಗ ತರಬೇತಿ ಕೇಂದ್ರಗಳು ಇತ್ಯಾದಿಗಳನ್ನು ಹೆಗ್ಗಡೆಯವರು ಅನುಷ್ಠಾನಗೊಳಿಸಿದದ್ದಾರೆ. ಹೆಗ್ಗಡೆಯವರು ಪ್ರಾರಂಭಿಸಿದ ಮಾದರಿ ಯೋಜನೆಗಳನ್ನು ಸರ್ಕಾರ ಹಾಗೂ ಅನೇಕ ಮಠ-ಮಂದಿರಗಳು ಅನುಷ್ಠಾನಗೊಳಿಸುತ್ತಿವೆ.
ಪ್ರಧಾನಿ ಅಭಿನಂದನೆ: ನುಡಿದಂತೆ ನಡೆಯುವ ಹೆಗ್ಗಡೆಯವರು ಸಮಾಜಕ್ಕಾಗಿ ತ್ಯಾಗ ಮತ್ತು ತಪಸ್ಸಿನ ಜೀವನ ನಡೆಸುತ್ತಿದ್ದಾರೆ. ಧರ್ಮಸ್ಥಳವು ಆದರ್ಶ ಧರ್ಮಕ್ಷೇತ್ರ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿ ಹೆಗ್ಗಡೆಯವರನ್ನು ಅಭಿನಂದಿಸಿದ್ದಾರೆ.
ಇಂದು ಅವರು ಸರಳವಾಗಿ ಪಟ್ಟಾಭಿಷೇಕ ವರ್ಧಂತಿ ಆಚರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.