ವಿಟ್ಲ ಪಟ್ಟಣ ಪಂಚಾಯತ್: ನೂತನ ಅಧ್ಯಕ್ಷರಾಗಿ ಚಂದ್ರಕಾಂತಿ ಶೆಟ್ಟಿ
Team Udayavani, Apr 21, 2021, 3:08 PM IST
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ, ಬಿಜೆಪಿ ಸದಸ್ಯೆ ಚಂದ್ರಕಾಂತಿ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಬುಧವಾರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಬಿಜೆಪಿಯಿಂದ ಅವಿರೋಧವಾಗಿ ಚಂದ್ರಕಾಂತಿ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿತ್ತು. ಆದುದರಿಂದ
ಅವರು ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದ ಸದಸ್ಯರು ಸ್ಪರ್ಧಿಸುವ ಆಸಕ್ತಿಯನ್ನು ತೋರಲಿಲ್ಲ. ಆದುದರಿಂದ ಚಂದ್ರಕಾಂತಿ ಶೆಟ್ಟಿ ಅವರು ಅಧ್ಯಕ್ಷರಾಗಿ ಆಯ್ಕೆಯಾದರು.
ಇದನ್ನೂ ಓದಿ :ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಕರೆ ಮಾಡಿ ಸುಳ್ಯದ ವ್ಯಕ್ತಿಯೊಬ್ಬರಿಗೆ 40,998 ರೂ. ಪಂಗನಾಮ
ಪ್ರಥಮ ಅವಧಿಯಲ್ಲಿ ಬಹುಮತ ಗಳಿಸಿದ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಪಡೆದಿದ್ದರೂ, ಎರಡನೇ ಅವಧಿಗೆ ಮೀಸಲಾತಿಯಂತೆ ಕಾಂಗ್ರೆಸ್ ಸದಸ್ಯೆ ಅಧ್ಯಕ್ಷರಾಗಿದ್ದರು. ಅವರ ಅವಧಿ ಮುಗಿಯುವ ಮುನ್ನವೇ ಅವಿಶ್ವಾಸ ಗೊತ್ತುವಳಿ ಮಂಡಿಸಿ, ಅಧ್ಯಕ್ಷರಾಗಿದ್ದ ಕಾಂಗ್ರೆಸ್ ಪಕ್ಷದ ದಮಯಂತಿ ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಿದ್ದರು.
ಇದೀಗ ಮತ್ತೆ ಬಿಜೆಪಿಯ ಸದಸ್ಯೆ ಅಧ್ಯಕ್ಷ ಪದವಿಗೇರಿದ್ದು ಕೇವಲ ಮೂರು ತಿಂಗಳ ಅವಧಿಗೇ ತೃಪ್ತಿಪಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.