Vitla: ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

ವಿಟ್ಲ-ಉಕ್ಕುಡ -ಪಡಿಬಾಗಿಲು ಅಂತಾರಾಜ್ಯ ಹೆದ್ದಾರಿಯ ಅವ್ಯವಸ್ಥೆ

Team Udayavani, Nov 27, 2024, 12:45 PM IST

2

ವಿಟ್ಲ: ಆಟೋ ರಿಕ್ಷಾ, ಟೂರಿಸ್ಟ್‌ ಕಾರು, ಖಾಸಗಿ ಬಸ್‌, ಲಾರಿ ಮಾಲಕರ ಸಂಘದ ವತಿಯಿಂದ ವಿಟ್ಲ-ಉಕ್ಕುಡ -ಪಡಿಬಾಗಿಲು ಅಂತಾರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಹಾಕಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿ, ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ವರೆಗೆ ಪ್ರತಿಭಟನೆ ಹಿಂಪಡೆ ಯುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಸ್ಥಳಕ್ಕಾಗಮಿಸಿದ ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿಭಟ ನಾಕಾರರು ತಮ್ಮ ಅಳಲನ್ನು ತೋಡಿಕೊಂಡು ಕೂಡಲೇ ರಸ್ತೆ ಹೊಂಡವನ್ನು ಮುಚ್ಚುವಂತೆ ವಿನಂತಿಸಿದರು.

ಈ ವೇಳೆ ಅಧಿಕಾರಿಗಳು ಮಾತನಾಡಿ ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿದೆ. ಕೆಲವೇ ದಿನಗಳಲ್ಲಿ ಈ ಭಾಗದ ಡಾಮರೀಕರಣ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು. ಪರಿಣಾಮವಾಗಿ ಮತ್ತಷ್ಟು ಕೆರಳಿದ ಪ್ರತಿಭಟನಾಕಾರರು ಮೂರು ದಿನಗಳೊಳಗೆ ರಸ್ತೆ ಹೊಂಡವನ್ನು ಮುಚ್ಚದಿದ್ದಲ್ಲಿ ವಿಟ್ಲದ ನಾಲ್ಕು ಮಾರ್ಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದರು. ಅಧಿಕಾರಿಗಳು ಕೂಡಲೇ ಹೊಂಡಮುಚ್ಚುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ರಸ್ತೆ ತಡೆದು ಪ್ರತಿಭಟನೆ ಮಾಡಿದ ಪರಿಣಾಮ ಸುಮಾರು ಅರ್ಧ ತಾಸು ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಟ್ಲ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.

ವಿಟ್ಲ ಪಟ್ಟಣ ಪಂಚಾಯತ್‌ ಅಧ್ಯಕ್ಷ ಕರುಣಾಕರ ನಾಯ್ತೋಟು, ಬಸ್‌ ಮಾಲಕ ಅರುಣ್‌ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷ ರವಿಪ್ರಕಾಶ್‌ ವಿಟ್ಲ, ಲಾರಿ ಮಾಲಕ ಚಾಲಕ ಸಂಘದ ಅಧ್ಯಕ್ಷ ರಮೇಶ್‌ ವರಪ್ಪಾದೆ, ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ವಸಂತ ಎನ್‌., ಮಹಾಶಕ್ತಿಕೇಂದ್ರದ ಅಧ್ಯಕ್ಷ ಉದಯ ಕುಮಾರ್‌ ಆಲಂಗಾರು, ಪ್ರಮುಖರಾದ ಕೃಷ್ಣಯ್ಯ ಕೆ.ವಿಟ್ಲ, ಬಿಜೆಪಿ ಪಕ್ಷದ ಪ್ರಮುಖರಾದ ಮೋಹನದಾಸ್‌ ಉಕ್ಕುಡ, ನರಸಪ್ಪ ಪೂಜಾರಿ, ಸದಾನಂದ ಗೌಡ ಸೇರಾಜೆ, ವಿಟ್ಲ ಪಟ್ಟಣ ಪಂಚಾಯತ್‌ ಸದಸ್ಯರಾದ ಹರೀಶ್‌, ಜಯಂತ್‌, ವಸಂತ, ರಿಕ್ಷ ಮಾಲಕರಾದ ವೆಂಕಪ್ಪ ನಾಯ್ಕ್, ಭಾಸ್ಕರ, ಲಾರಿ ಮಾಲಕರಾದ ಜಯಪ್ರಕಾಶ್‌, ಹರೀಶ್‌ ಉಮಾಮಹೇಶ್ವರ, ನಾಗೇಶ್‌ ಬಸವನಗುಡಿ ಸೇರಿದಂತೆ ನೂರಾರು ನಾಗರಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.