ಪ್ರವಾಸಿ ಬಂಗಲೆಗೆ ದೊರೆಯದ ಕಾಯಕಲ್ಪ
ದುರಸ್ತಿಗೆ ಸಲ್ಲಿಸಿದ್ದ 5 ಲಕ್ಷ ರೂ. ಅಂದಾಜು ಪಟ್ಟಿಯೂ ತಿರಸ್ಕೃತ
Team Udayavani, May 15, 2019, 5:50 AM IST
ಕಡಬ: ಸುಮಾರು 8 ದಶಕಗಳ ಇತಿಹಾಸವನ್ನು ಹೊಂದಿರುವ ಕಡಬದ ಪ್ರವಾಸಿ ಬಂಗಲೆ ಸಂಬಂಧಪಟ್ಟವರ ನಿರ್ಲಕ್ಷ್ಯ ಧೋರಣೆಯಿಂದಾಗಿ ಕೆಲ ವರ್ಷಗಳಿಂದ ನಿರ್ವಹಣೆ ಇಲ್ಲದೆ ಸಂಪೂರ್ಣ ಶಿಥಿಲಗೊಂಡಿದ್ದು, ಕಾಯಕಲ್ಪಕ್ಕಾಗಿ ಕಾಯುತ್ತಿದೆ.
ಕಡಬವು ಪೂರ್ಣ ಪ್ರಮಾಣದ ತಾಲೂಕು ಕೇಂದ್ರವಾಗಿ ರೂಪುಗೊಳ್ಳುವುದರೊಂದಿಗೆ ನಿರು ಪಯುಕ್ತವಾಗಿರುವ ಈ ಕಟ್ಟಡ ಮತ್ತೆ ಚಟುವಟಿಕೆಯ ತಾಣವಾಗಿ ಸಾರ್ವಜನಿಕರಿಗೆ ಪ್ರಯೋಜನಕ್ಕೆ ಬರಲಿ ಎನ್ನುವುದು ಜನರ ಆಶಯ.
ಚಟುವಟಿಕೆಯ ತಾಣವಾಗಿತ್ತು
ಒಂದು ಕಾಲದಲ್ಲಿ ಅತ್ಯಂತ ಚಟುವಟಿಕೆಯ ತಾಣವಾಗಿದ್ದ ಈ ಪ್ರವಾಸಿ ಬಂಗಲೆ ಸದ್ಯ ಯಾವುದೇ ಚಟುವಟಿಕೆಗಳಿಲ್ಲದೆ ಅನಾಥವಾಗಿದೆ. ಸಮುದಾಯ ಆಸ್ಪತ್ರೆಯ ಆವರಣದಲ್ಲಿರುವ ಈ ಕಟ್ಟಡ ಆರಂಭದಲ್ಲಿ ವೈದ್ಯಾಧಿಕಾರಿಗಳ ವಸತಿಗೃಹವಾಗಿತ್ತು. ಪುತ್ತೂರು ಬಿಡಿಒ ಕಚೇರಿ ಇದರ ನಿರ್ವಹಣೆಯನ್ನು ನೋಡಿಕೊಳ್ಳುತ್ತಿತ್ತು. ಅನಂತರ 2 ಕೊಠಡಿಗಳನ್ನು ಸೇರಿಸಿ ಪುನಶ್ಚೇತನಗೊಳಿಸಿ ಈ ಕಟ್ಟಡವನ್ನು ಪ್ರವಾಸಿ ಬಂಗಲೆಯಾಗಿ ಪರಿವರ್ತಿಸಲಾಗಿತ್ತು. ಇತ್ತೀಚಿನ ಕೆಲ ವರ್ಷಗಳಲ್ಲಿ ತಾ.ಪಂ. ಹಾಗೂ ಗ್ರಾ.ಪಂ. ಆಡಳಿತ ಇದರ ನಿರ್ವಹಣೆಯ ಹೊಣೆ ಹೊತ್ತುಕೊಂಡಿತ್ತಾದರೂ ಈಗ ಈ ಕಟ್ಟಡವನ್ನು ಯಾರೂ ಕೇಳುವವರಿಲ್ಲದಂತಾಗಿದೆ. ಈ ಮಧ್ಯೆ ಕಡಬದ ಹಳೆಸ್ಟೇಶನ್ ಬಳಿ 60 ಸೆಂಟ್ಸ್ ಜಾಗ ಗುರುತಿಸಲಾಗಿದ್ದು, ಅಲ್ಲಿ ಹೊಸದಾಗಿ ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಿಸಲು ಉದ್ದೇಶಿಸಲಾಗಿದೆ ಎನ್ನುವ ಮಾಹಿತಿ ಇದೆ.
ಭೂತ ಬಂಗಲೆಯಂತಾಗಿದೆ
ಪಾಳು ಬಿದ್ದಿರುವ ಈ ಕಟ್ಟಡ ಈಗ ಭೂತ ಬಂಗಲೆಯಂತೆ ಕಂಡುಬರುತ್ತಿದೆ. ಆವರಣ ಗೋಡೆ ಕುಸಿದು ಬಿದ್ದಿರುವ ಈ ಪ್ರದೇಶವನ್ನು ಸಾರ್ವ ಜನಿಕರು ತಮ್ಮ ದೇಹಬಾಧೆ ತೀರಿಸಿಕೊಳ್ಳಲು ಉಪ ಯೋಗಿಸುತ್ತಿರುವುದರಿಂದಾಗಿ ಈ ಪರಿಸರ ಬಯಲು ಶೌಚಾಲಯವಾಗಿ ಮಾರ್ಪಟ್ಟಿದೆ. ಕಟ್ಟದೊಳಗಿನ ಬೆಲೆಬಾಳುವ ಪೀಠೊಪಕರಣಗಳು ಹಾಳುಬಿದ್ದಿವೆ. ವಿದ್ಯುತ್ ಸಂಪರ್ಕವಿಲ್ಲದೆ ಸ್ತಬ್ಧಗೊಂಡಿರುವ ವಿದ್ಯುತ್ ಉಪಕರಣಗಳು ಇಲ್ಲಿನ ದುಃಸ್ಥಿತಿಗೆ ಸಾಕ್ಷ ್ಯ ನುಡಿಯುತ್ತಿವೆ. ಕಟ್ಟಡದ ಹಿಂಭಾಗದ ಗೋಡೆಗಳು ಅಲ್ಲಲ್ಲಿ ಕುಸಿದುಬಿದ್ದಿದೆ. ಮೂಲತಃ ಸರಕಾರಿ ಸಮುದಾಯ ಆಸ್ಪತ್ರೆಗೆ ಸೇರಿದ ಈ ಕಟ್ಟಡವನ್ನು ಮತ್ತೆ ಆಸ್ಪತ್ರೆಯ ಉಪಯೋಗಕ್ಕೆ ನೀಡಬೇಕೆಂದು ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿ ಮುಖಾಂತರ ಜಿ.ಪಂ.ಗೆ ಮನವಿ ಸಲ್ಲಿಸಲಾಗಿತ್ತು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸ್ಪಂದಿಸಿದ್ದರೂ ಲಿಖೀತ ಆದೇಶ ನೀಡದ ಕಾರಣ ಯಾವುದೇ ಪ್ರಯೋಜನವಾಗಿಲ್ಲ.
ಪೇಟೆಯ ಹೃದಯ ಭಾಗದಲ್ಲಿರುವ ಈ ಕಟ್ಟಡದಲ್ಲಿ ಯಾವುದಾದರೊಂದು ಪ್ರಮುಖ ಇಲಾಖೆಯ ಕಚೇರಿ ತೆರೆಯುವ ಅವಕಾಶವಿದೆ. ಈ ಕಟ್ಟಡವನ್ನು ದುರಸ್ತಿಗೊಳಿಸಿ ತಾಲೂಕು ಮಟ್ಟದ ಯಾವುದಾದರೂ ಸರಕಾರಿ ಕಚೇರಿಗೆ ಬಳಸಿಕೊಳ್ಳುವ ಉದ್ದೇಶದಿಂದ ಸ್ಥಳೀಯ ಜಿ.ಪಂ. ಸದಸ್ಯರ ಪ್ರಯತ್ನದಿಂದ 5 ಲಕ್ಷ ರೂ.ಗಳ ಅಂದಾಜು ಪಟ್ಟಿ ತಯಾರಿಸಲಾಗಿತ್ತು. ಆದರೆ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡು ಗೋಡೆಗಳು ಅಲ್ಲಲ್ಲಿ ಕುಸಿದಿರುವುದರಿಂದ ದುರಸ್ತಿಗೊಳಿಸಿ ಉಪಯೋಗಿಸಲು ಅಸಾಧ್ಯ ಎನ್ನುವ ನೆಲೆಯಲ್ಲಿ ಪ್ರಸ್ತಾವನೆಯೂ ತಿರಸ್ಕೃತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.