Bantwala: ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಠಾಣೆಗಳಲ್ಲಿ ಆರೋಪಿಯಾಗಿದ್ದಾತ ಬಂಧನ
Team Udayavani, Aug 26, 2023, 2:50 PM IST
ಬಂಟ್ವಾಳ: ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಆ.26ರ ಶನಿವಾರ ನಡೆದಿದೆ.
ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಇಬ್ರಾಹಿಂ ಅವರ ಮಗ ಉಮ್ಮರ್ ಫಾರೂಕ್ ಬಂಧಿತ ಆರೋಪಿ.
ಸುಮಾರು 17 ಪ್ರಕರಣಗಳಲ್ಲಿ ಉಮ್ಮರ್ ಫಾರೂಕ್ ಅವರು ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಈತ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಬಜಪೆ, ಕೋಣಾಜೆ, ಬರ್ಕೆ, ವಿಟ್ಲ, ಕಡಬ ಹೀಗೆ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಈತನ ವಿರುದ್ದ ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಇಂದು ಬೆಳಿಗ್ಗೆ ಈತ ಮಾಣಿ ಪರಿಸರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಠಾಣಾ ಪೋಲೀಸರು ಈತನ ಬಂಧನಕ್ಕೆ ಬಲೆ ಬೀಸಿದ್ದರು.
ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದಲ್ಲಿ ಪೋಲೀಸ್ ಸಿಬ್ಬಂದಿಗಳಾದ ಗಣೇಶ್, ಮೋಹನ್ ಕಾರ್ಯಚರಣೆ ನಡೆಸಿ ಮಾಣಿಯಲ್ಲಿ ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
Guttigaru: ಕಮರಿಗೆ ಉರುಳಿದ ಕಾರು; ಗಾಯ
Kadaba ಕೋಡಿಂಬಾಳ ಮರಬಿದ್ದು ವ್ಯಕ್ತಿ ಸಾವು ಪ್ರಕರಣ: 2 ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ!
Farangipete Devaki Krishna Ravalnath Temple: ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು
Puttur:ನಾಪತ್ತೆಯಾಗಿದ್ದ ಅಸ್ಥಿಪಂಜರ ಪತ್ತೆ; ಸಾವಿನ ಬಗ್ಗೆ ಅನುಮಾನ ಆತ್ಮಹ*ತ್ಯೆಯೋ,ಕೊ*ಲೆಯೋ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.