ಕಂಚಿನಡ್ಕಪದವು ತ್ಯಾಜ್ಯ ವಿಲೇವಾರಿ ಘಟಕ; ಮುಗಿಯದ ಗೊಂದಲ


Team Udayavani, Aug 10, 2021, 3:00 AM IST

ಕಂಚಿನಡ್ಕಪದವು ತ್ಯಾಜ್ಯ ವಿಲೇವಾರಿ ಘಟಕ; ಮುಗಿಯದ ಗೊಂದಲ

ಕಂಚಿನಡ್ಕಪದವು ಕಸ ವಿಲೇವಾರಿ ಘಟಕ ನಿರ್ಮಾಣದಲ್ಲಿನ ಗೊಂದಲ ಬಂಟ್ವಾಳ ಪುರಸಭೆ ಹಾಗೂ ಸಜೀಪನಡು ಗ್ರಾಮಸ್ಥರ ನಡುವೆ ಗುದ್ದಾಟಕ್ಕೆ ಕಾರಣವಾಗುತ್ತಲೇ ಇದೆ. ಜತೆಗೆ ಕೋಣೆಮಾರು ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಇದ್ದು ಹಲವು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಹೀಗೆ ಸಜೀಪನಡು ಗ್ರಾಮ ಎದುರಿಸುವ ಸಮಸ್ಯೆಗಳ ಚಿತ್ರಣ ಇಂದಿನ “ಒಂದು ಊರು; ಹಲವು ದೂರು’ ಸರಣಿಯಲ್ಲಿ.

ಬಂಟ್ವಾಳ:  ಹಲವು ವರ್ಷಗಳಿಂದ ಗೊಂದಲದ ಗೂಡಾಗಿರುವ ಕಂಚಿನಡ್ಕಪದವು ತ್ಯಾಜ್ಯ ವಿಲೇವಾರಿ ಘಟಕವು ಸಜೀಪನಡು ಗ್ರಾಮದಲ್ಲಿ ಬಲುದೊಡ್ಡ ಸಮಸ್ಯೆಯಾಗಿದ್ದು, ಬಂಟ್ವಾಳ ಪುರಸಭೆ ಹಾಗೂ ಸಜೀಪನಡು ಗ್ರಾಮಸ್ಥರ ನಡುವೆ ಗುದ್ದಾಟಕ್ಕೆ ಕಾರಣವಾಗುತ್ತಲೇ ಇದೆ. ತಮ್ಮ ಹಲವು ಬೇಡಿಕೆಗೆ ಸ್ಪಂದನೆ ಸಿಗದೆ ಇಲ್ಲಿ ಹಸಿ ಕಸವನ್ನು ವಿಲೇವಾರಿ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿತ್ತಲೇ ಬಂದಿದ್ದಾರೆ.

ಬಂಟ್ವಾಳ ಪುರಸಭೆ ವ್ಯಾಪ್ತಿಯ ಕಸ ವಿಲೇವಾರಿ ಮಾಡುವುದಕ್ಕೆ ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿ ಘಟಕ ನಿರ್ಮಿಸಲಾಗಿದ್ದು, ಕಳೆದ ವರ್ಷದಿಂದ ಪುರಸಭೆಯು ಅಲ್ಲಿ ಕಸ ವಿಲೇವಾರಿಯನ್ನು ಪ್ರಾರಂಭಿಸಿತ್ತು. ಆದರೆ ಘಟಕದಲ್ಲಿ ಹಸಿ ಕಸ ವಿಲೇವಾರಿ ಮಾಡುವುದಕ್ಕೆ ಸ್ಥಳೀಯ ಗ್ರಾ.ಪಂ. ಸೇರಿದಂತೆ ಗ್ರಾಮಸ್ಥರಿಂದ ವಿರೋಧಗಳು ವ್ಯಕ್ತವಾಗಿ 2020ರ ಮಾರ್ಚ್‌ 18ರಂದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿ ಕಸ ವಿಲೇವಾರಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು.

ವಿಲೇವಾರಿ ಘಟಕದಲ್ಲಿ ಸರಿಯಾದ ವ್ಯವಸ್ಥೆಯಿಲ್ಲದೆ ದುರ್ನಾತದಿಂದ ಕುಳಿತುಕೊಳ್ಳಲಾಗುವುದಿಲ್ಲ. ಸ್ಥಳೀಯ ಮನೆಗಳು ಹಾಗೂ ಶಾಲೆಗೆ ಪರ್ಯಾಯ ವ್ಯವಸ್ಥೆಯಾಗಿಲ್ಲ ಎಂಬುದು ಸ್ಥಳೀಯರ ವಾದವಾಗಿದ್ದು, ಇರಾ ಗ್ರಾಮದಲ್ಲಿ ಸ್ಥಳೀಯರಿಗೆ ಪರ್ಯಾಯ ಜಾಗ ಗುರುತಿಸಲಾಗಿದೆ. ಆದರೆ ಅವರು ಅಲ್ಲಿಗೆ ಹೋಗುತ್ತಿಲ್ಲ ಎಂದು  ಪುರಸಭೆ ಹೇಳುತ್ತಿದೆ.

ಪ್ರಸ್ತುತ ಪುರಸಭೆಗೆ ಹಸಿ ಕಸವನ್ನು ಸಾಗಾಟ ಮಾಡುವುದಕ್ಕೆ ಸ್ಥಳವೇ ಇಲ್ಲದಾಗಿದ್ದು, ಘಟಕದಲ್ಲಿ ಸಮರ್ಪಕ ವ್ಯವಸ್ಥೆ ಮಾಡುವಲ್ಲಿಯೂ ಪುರಸಭೆ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಹೀಗಾಗಿ ಕಂಚಿನಡ್ಕಪದವು ತ್ಯಾಜ್ಯ ಘಟಕದ ವಿಚಾರದಲ್ಲಿ ಗ್ರಾಮದಲ್ಲಿ ಪದೇ ಪದೆ ಸಂಘರ್ಷದ ವಾತಾವರಣ ಸೃಷ್ಟಿಯಾಗುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸಲು ಯಾರೂ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತಿಲ್ಲ.

ಕೋಣೆಮಾರು ಗುಡ್ಡ ಕುಸಿಯುವ ಭೀತಿ:

ಸಜೀಪನಡು ಗ್ರಾಮದ ಕೋಣೆಮಾರು ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಇದ್ದು, ಹಲವು ಮನೆಗಳು ಅಪಾಯದಲ್ಲಿವೆ. ಈ ಭಾಗದಲ್ಲಿನ ಮನೆಯ ಸದಸ್ಯರಿಗೆ ಬೇರೆ ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ನೋಟಿಸ್‌ ನೀಡಲಾಗಿದೆಯೇ ಹೊರತು ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕೆಲಸ ಆಗಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಅಪಾಯದಲ್ಲಿರುವ ಗುಡ್ಡದ ಮೇಲ್ಭಾಗದಲ್ಲಿ 7 ಮನೆಗಳು, ಕೆಳ ಭಾಗದಲ್ಲಿ 2 ಮನೆಗಳಿವೆ. ಪ್ರಸ್ತುತ ಸ್ವಲ್ಪ ಸ್ವಲ್ಪ ಕುಸಿಯುತ್ತಿದ್ದು, ಒಮ್ಮೆಲೆ ಕುಸಿದರೆ ಹೆಚ್ಚಿನ ಅಪಾಯವಾಗುವ ಸಾಧ್ಯತೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯ ಮನೆಗಳಿಗೆ ನೋಟಿಸ್‌ ನೀಡಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದು, ಪರ್ಯಾಯ ವ್ಯವಸ್ಥೆಯಿಲ್ಲದೆ ಈ ರೀತಿ ನೋಟಿಸ್‌ ನೀಡುವುದು ಸರಿಯಾದ ಕ್ರಮವಲ್ಲ ಎಂಬ ಆರೋಪಗಳೂ ಕೇಳಿಬಂದಿದೆ.

ಬೈಲಗುತ್ತು ಕೃತಕ ನೆರೆಯ ಭೀತಿ:

ಗ್ರಾಮದ ಬೈಲಗುತ್ತು ಪ್ರದೇಶದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಕೃತಕ ನೆರೆಯ ಭೀತಿ ಇದ್ದು, ಎರಡು ವರ್ಷಗಳ ಹಿಂದೆ ಸ್ಥಳೀಯ ಮನೆಗಳಿಗೆ ನೆರೆ ನೀರು ನುಗ್ಗಿತ್ತು. ಈಗಲೂ ಜೋರು ಮಳೆ ಬಂದಾಗ ನೀರು ನಿಲ್ಲುವ ಸ್ಥಿತಿ ಇದ್ದು, ಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕರೆ ಮಾತ್ರ ಕೃತಕ ನೆರೆಯ ಭೀತಿ ದೂರವಾಗಬಹುದು.

ವಿಧಾನಸಭೆಯಲ್ಲೂ ಚರ್ಚೆ :

ಕಂಚಿನಡ್ಕಪದವು ತ್ಯಾಜ್ಯ ಘಟಕದ ವಿಚಾರ ವಿಧಾನಸಭೆಯಲ್ಲೂ ಚರ್ಚೆಯಾಗಿದ್ದು, ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಕ್ಷೇತ್ರ ಶಾಸಕ ಯು.ಟಿ.ಖಾದರ್‌ ವಿಚಾರ ಪ್ರಸ್ತಾಪಿಸಿದ್ದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದು ಕೇವಲ ಒಣ ಕಸವನ್ನು ಮಾತ್ರ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು. ಈ ನಡುವೆ 2021, ಮಾರ್ಚ್‌ 13ರಂದು ಹಸಿ ಕಸವನ್ನು ತರುತ್ತಾರೆ, ರಸ್ತೆಯಲ್ಲಿ ಚೆಲ್ಲಿಕೊಂಡು ಹೋಗುತ್ತಾರೆ ಎಂದು ಆರೋಪಿಸಿ ಮತ್ತೆ ಗ್ರಾಮಸ್ಥರು ಕಸದ ವಾಹನ ತಡೆದಿದ್ದರು. ಹೀಗಾಗಿ ಸದ್ಯಕ್ಕೆ ಪುರಸಭೆಯು ಹಸಿ ಕಸವನ್ನು ಅಲ್ಲಿಗೆ ಸಾಗಿಸದೇ ಇರುವುದರಿಂದ ವಿಚಾರ ಸಣ್ಣಗಾಗಿದ್ದು, ಹಸಿ ಕಸವನ್ನು ಘಟಕಕ್ಕೆ ಸಾಗಿಸಿದರೆ ಮತ್ತೆ ಗೊಂದಲ ಸೃಷ್ಟಿಯಾಗುವ ಆತಂಕವಿದೆ.

ಇತರ ಸಮಸ್ಯೆಗಳೇನು? :

  • ಅಸಮರ್ಪಕ ಗ್ರಾಮದ ಒಳರಸ್ತೆ
  • ಕುಡಿಯುವ ನೀರಿನ ಸಮಸ್ಯೆ
  • ನಿವೇಶನ/ವಸತಿ ರಹಿತರ ಸಮಸ್ಯೆ
  • ಉಳ್ಳಾಲ ತಾಲೂಕು ಸೇರುವುದಕ್ಕೆ ವಿರೋಧ

 

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

1

Puttur: ನಳಿನ್‌ಗೆ ನಿಂದನೆ; ದೂರು ದಾಖಲು

1-asdaaasdasd

Kadaba; ಪ್ರೀತಿಸುವ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ:ಯುವಕ ಸೆರೆ

1aaaane

Sullia: ತೋಟದಲ್ಲಿ ಮೂರು ಕಾಡಾನೆ!

1-sedi

Puttur: ಕಂದಕಕ್ಕೆ ಉರುಳಿದ ಕಾರು:ಜೀವ ಉಳಿಸಿಕೊಂಡ ಐವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.