ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ
ಹಾರ ಹಾಕುವಾಗ ಕೈ ತಾಗಿಸಿದನೆಂದು ಹಾರವನ್ನೇ ಎಸೆದ ವಧು!
Team Udayavani, May 28, 2022, 12:50 AM IST
ಸಾಂದರ್ಭಿಕ ಚಿತ್ರ.
ವೇಣೂರು: ಮದುವೆ ಶಾಸ್ತ್ರದ ವೇಳೆ ಹಾರ ಬದಲಿಸುವಾಗ ವರನ ಕೈ ತಾಗಿತೆಂದು ವಧು ಹಾರವನ್ನೇ ಎಸೆದು ಮದುವೆ ನಿರಾಕರಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಮೇ 25ರಂದು ನಡೆದಿದೆ.
ಮೂಡುಕೊಣಾಜೆಯ ಯುವತಿಗೆ ನಾರಾವಿಯ ಯುವಕನೊಂದಿಗೆ ಮದುವೆ ನಿಶ್ಚಯ ಆಗಿ ನಾರಾವಿ ಸಭಾ ಭವನವೊಂದರಲ್ಲಿ ಮೇ 25ಕ್ಕೆ ಮದುವೆ ನಿಗದಿಯಾಗಿತ್ತು. ಸುಮಾರು 500ಕ್ಕೂ ಹೆಚ್ಚು ಮಂದಿಗೆ ಸಿಹಿಯೂಟದ ವ್ಯವಸ್ಥೆ ಮಾಡಲಾಗಿತ್ತು.
ಮದುವೆ ಶಾಸ್ತ್ರ ನಡೆಯುತ್ತಿದ್ದಂತೆ ಅರ್ಚಕರು ಹಾರ ಬದಲಿಸುವಂತೆ ಸೂಚಿಸಿದ್ದಾರೆ. ಅದರಂತೆ ವರ ಹಾರವನ್ನು ವಧುವಿನ ಕುತ್ತಿಗೆಗೆ ಹಾಕುತ್ತಿದ್ದಂತೆ ವಧು ರೊಚ್ಚಿಗೆದ್ದಿದ್ದಾಳೆ. ವರ ಹಾರ ಹಾಕುವಾಗ ವಧುವಿನ ಕೊರಳಿಗೆ ಕೈ ತಾಗಿದೆಯೆಂದು ಸಿಟ್ಟಿಗೆದ್ದ ವಧು ಮಂಟಪದಿಂದ ಹೊರನಡೆಯಲು ಮುಂದಾಗುತ್ತಿದ್ದಂತೆ ಸಂಬಂಧಿ ಕರು ಸಮಾಧಾನಪಡಿಸಿದ್ದಾರೆ. ಆದರೆ ಘಟನೆಯಿಂದ ಅವಮಾನಕ್ಕೊಳಗಾದ ವರನ ಕಡೆ ಯವರು ಮದುವೆಯನ್ನು ನಿರಾಕರಿಸಿದ್ದಾರೆ.
ಹೆಣ್ಣು ಗಂಡಿನ ಕಡೆಯವರು ಮಾತಿಗೆ ಮಾತು ಬೆಳೆಸಿಕೊಂಡಿದ್ದು, ಸಣ್ಣ ಮಟ್ಟಿನ ಜಗಳ ಪ್ರಾರಂಭ ಆದಾಗ ವೇಣೂರು ಪೊಲೀಸರು ಆಗಮಿಸಿದ್ದಾರೆ. ಎರಡೂ ಕಡೆಯವರಿಗೆ ಮಾತುಕತೆಗೆ ಪೊಲೀಸರು ಅವಕಾಶ ಮಾಡಿಕೊಟ್ಟರೂ ಸಂಬಂಧ ಬೆಸೆಯದೆ ಮದುವೆ ಮುರಿದುಬಿದ್ದಿದೆ. ತಯಾರಾಗಿದ್ದ ಊಟವನ್ನು ಸ್ಥಳೀಯ ಶಾಲೆಗಳಿಗೆ ನೀಡಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Sulya: ನಿಲ್ಲಿಸಿದ್ದ ಕಾರಿಗೆ ಬಸ್ ಢಿಕ್ಕಿ; ಜಖಂ
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.