ಮೂಲಸೌಕರ್ಯಗಳಿಂದ ದೂರವುಳಿದ ಬೆಳ್ಳಾರೆ ವಿಎ ಕಚೇರಿ

Team Udayavani, Jun 21, 2019, 5:00 AM IST

37

ಬೆಳ್ಳಾರೆ: ಗ್ರಾಮಾಭಿವೃದ್ಧಿಯ ಪರಿಕಲ್ಪನೆಯಲ್ಲಿ ಪ್ರತಿ ಮನೆಗೂ ಶೌಚಾಲಯ, ನೀರು, ವಿದ್ಯುತ್‌ ಸಿಗಲೇಬೇಕು. ಆದರೆ ಬೆಳ್ಳಾರೆ ಪೇಟೆಯಿಂದ ದೂರದಲ್ಲಿರುವ ಬಂಗ್ಲೆಗುಡ್ಡೆ ಯಲ್ಲಿರುವ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಶೌಚಾಲಯ, ನೀರು, ವಿದ್ಯುತ್‌ ಇಲ್ಲ. ಬ್ರಿಟಿಷರ ಕಾಲದ ಕಟ್ಟಡ ಇಂದೋ ನಾಳೆಯೋ ಬೀಳುವ ಸ್ಥಿತಿಯಲ್ಲಿದೆ.

ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸುವ ಬೆಳ್ಳಾರೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ ಮಾತ್ರ ಮೂಲ ಸೌಲಭ್ಯಗಳಿಂದ ವಂಚಿತ ವಾಗಿದೆ. ಈ ಕಚೇರಿಯನ್ನು ಬೆಳ್ಳಾರೆ – ಸುಳ್ಯ ರಸ್ತೆಯ ಪಶು ಚಿಕಿತ್ಸಾಲಯದ ಬಳಿ ಇರುವ ಪಂಚಾಯತ್‌ ಉದ್ಯೋಗಿಗಳ ವಾಸಸ್ಥಳದ ಕಟ್ಟಡಕ್ಕೆ ಸ್ಥಳಾಂತರಿಸಲು ಲೋಕಸಭಾ ಚುನಾವಣೆಗೂ ಮೊದಲು ಕಟ್ಟಡಕ್ಕೆ ಸುಣ್ಣ-ಬಣ್ಣ ಬಳಿಯಲಾಗಿದೆ. ಆದರೆ ಇದುವರೆಗೆ ಸ್ಥಳಾಂತರ ಪ್ರಕ್ರಿಯೆ ನಡೆದಿಲ್ಲ. ಮಳೆಗಾಲದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ ಸೋರುತ್ತಿದ್ದು, ನೀರು ಬಿದ್ದರೆ ದಾಖಲೆಗಳಿಗೆ ಹಾನಿಯಾಗುವ ಸಾಧ್ಯತೆಗಳಿವೆ.

ನೀರು, ವಿದ್ಯುತ್‌, ಶೌಚಾಲಯವಿಲ್ಲ
ಸ್ವಚ್ಛ ಗ್ರಾಮದ ಅನ್ವಯ ಪ್ರತಿ ಮನೆಗೂ ಶೌಚಾಲಯ ಕಡ್ಡಾಯ. ಆದರೆ ಬಂಗ್ಲೆಗುಡ್ಡೆಯಲ್ಲಿರುವ ಗ್ರಾಮ ಲೆಕ್ಕಾಧಿಕಾರಿ ಕಚೇರಿಯಲ್ಲಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದರೂ ಇಲ್ಲಿ ಶೌಚಾಲಯದ ವ್ಯವಸ್ಥೆಯಿಲ್ಲ. ಕಟ್ಟಡಕ್ಕೆ ವಿದ್ಯುತ್‌ ಸಂಪರ್ಕವೂ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಕತ್ತಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಬೇಸಗೆಯಲ್ಲೂ ಫ್ಯಾನ್‌ ಇಲ್ಲದೆ ಕರ್ತವ್ಯ ನಿರ್ವಹಿಸುವುದು ಅನಿವಾರ್ಯವಾಗಿದೆ. ಕುಡಿಯುವ ನೀರು ಬೇಕಿದ್ದರೂ ಪೇಟೆಯಿಂದ ತಂದಿಡಬೇಕಿದೆ.

ಪೇಟೆಯಿಂದ ಬಲು ದೂರ
ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ತರೆಳಬೇಕಾದರೆ ಬೆಳ್ಳಾರೆ ಪ್ರಾಥಮಿಕ ಶಾಲೆಯ ಹಿಭಾಗದಿಂದ ಸುತ್ತು ಬಳಸಿ ಬರಬೇಕು. ಇದು ಬೆಳ್ಳಾರೆ ಬಸ್‌ ನಿಲ್ದಾಣದಿಂದ 1 ಕಿ.ಮೀ. ದೂರದಲ್ಲಿದೆ. ಹಿಂದೆ ಬೆಳ್ಳಾರೆ ಪದವಿಪೂರ್ವ ಕಾಲೇಜಿನ ಆಟದ ಮೈದಾನದಿಂದ ನೇರವಾಗಿ ಸಂಪರ್ಕಕ್ಕೆ ದಾರಿ ಇತ್ತು. ಆದರೆ ಈಗ ಅದನ್ನು ಮುಚ್ಚಲಾಗಿದೆ.

ಅಂಗವಿಕಲರಿಗೆ ತೊಂದರೆ
ಸರಕಾರದ ಸವಲತ್ತುಗಳನ್ನು ಪಡೆಯಲು ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗೆ ಬರಲೇಬೇಕು. ಆದರೆ ಇಲ್ಲಿನ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬರುವ ಮಣ್ಣಿನ ರಸ್ತೆ ಮಳೆಗಾಲದಲ್ಲಿ ಸಂಚಾರಕ್ಕೆ ಯೋಗ್ಯವಾಗಿಲ್ಲ. ಇದರಿಂದ ವೃದ್ಧರು ಹಾಗೂ ಅಂಗವಿಕಲರು ಕಚೇರಿಗೆ ಅನುಭವಿಸುವಂತಾಗಿದೆ.

ಸೋರುತ್ತಿದೆ ಕಟ್ಟಡ
ಗ್ರಾಮ ಲೆಕ್ಕಾಧಿಕಾರಿಗಳ ಕಟ್ಟಡ ಶಿಥಿಲವಾಗಿ ಸೋರುತ್ತಿದೆ. ಕಚೇರಿಯ ಹಿಂಭಾಗದಲ್ಲಿ ಛಾವಣಿ ಭಾಗಶಃ ಕುಸಿದಿದ್ದು, ಗಾಳಿ, ಮಳೆಯಿಂದ ಕಟ್ಟಡಕ್ಕೆ ಹಾನಿಯಾಗುವ ಅಪಾಯವಿದೆ. ಬಾವಲಿಗಳು ರಾತ್ರಿ ಕಚೇರಿಯೊಳಗೆ ಬಂದು ವಾಸವಾಗುವುದರಿಂದ ಸ್ವಚ್ಛತೆಯೇ ದೊಡ್ಡ ಸವಾಲು.

ಸ್ಥಳಾಂತರಕ್ಕೆ ಆಗ್ರಹ
ಸ್ಥಳೀಯರು ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸ್ಥಳಾಂತರಕ್ಕೆ ಮನವಿ ಮಾಡುತ್ತಲೇ ಇದ್ದಾರೆ. ಉದ್ಯೋಗಿಗಳ ವಾಸಸ್ಥಳದ ಕಟ್ಟಡವನ್ನು ದುರಸ್ತಿಗೊಳಿಸುವ ಕಾರ್ಯಕ್ಕೆ ಬೆಳ್ಳಾರೆ ಗ್ರಾ.ಪಂ. ಮುಂದಾಗಿದೆ. ಶೀಘ್ರದಲ್ಲಿ ಸ್ಥಳಾಂತರ ಪ್ರಕ್ರಿಯೆ ನಡೆಸಿದಲ್ಲಿ ಗ್ರಾಮಸ್ಥರಿಗೆ ಹಾಗೂ ಸಿಬಂದಿಗೆ ಅನುಕೂಲ.

ತಿಂಗಳಾಂತ್ಯಕ್ಕೆ ಸ್ಥಳಾಂತರ
ಪಂಚಾಯತ್‌ ಉದ್ಯೋಗಿಗಳ ವಾಸಸ್ಥಳ ಕಟ್ಟಡ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಸ್ಥಳಾಂತರಕ್ಕೆ ಪ್ರಸ್ತಾವ ಬಂದಿದೆ. ಪಂಚಾಯತ್‌ ನಿರ್ಣಯ ಮಾಡಿ, ಈ ತಿಂಗಳ ಅಂತ್ಯಕ್ಕೆ ಸ್ಥಳಾಂತರ ಪ್ರಕ್ರಿಯೆ ನಡೆಸಲಾಗುವುದು.
– ಶಕುಂತಳಾ ನಾಗರಾಜ್‌, ಗ್ರಾ.ಪಂ. ಅಧ್ಯಕ್ಷರು, ಬೆಳ್ಳಾರೆ

ಶೀಘ್ರ ಸ್ಥಳಾಂತರಿಸಿ
ಕಟ್ಟಡ ಹಾಗೂ ಕಚೇರಿಗೆ ಹೋಗುವ ರಸ್ತೆಯೂ ಶಿಥಿಲವಾಗಿದೆ. ನಮ್ಮ ಕೆಲಸಗಳಿಗೆ ಕಚೇರಿಗೆ ಹೋಗುವುದೇ ಕಷ್ಟವಾಗಿದೆ. ರಸ್ತೆ ಬದಿ ಇರುವ ಸರಕಾರಿ ಕಟ್ಟಡಕ್ಕೆ ಇದನ್ನು ಆದಷ್ಟೂ ಶೀಘ್ರದಲ್ಲಿ ಸ್ಥಳಾಂತರಿಸಿದಲ್ಲಿ ಗ್ರಾಮಸ್ಥರಿಗೆ ಅನುಕೂಲವಾಗಬಹುದು.
– ಪ್ರೇಮಚಂದ್ರ ಬೆಳ್ಳಾರೆ ಗ್ರಾಮಸ್ಥರು

ಸೂಚನೆ ನೀಡಿದ್ದೇನೆ
ಸ್ಥಳಾಂತರಗೊಳ್ಳಲಿರುವ ಪಂಚಾ ಯತ್‌ ಉದ್ಯೋಗಿಗಳ ವಾಸಸ್ಥಳದ ಕಟ್ಟಡ ವನ್ನು ಆದಷ್ಟು ಶೀಘ್ರದಲ್ಲಿ ಸರಿಪಡಿಸಿ ಗ್ರಾಮ ಲೆಕ್ಕಾಧಿಕಾರಿ ಕಚೇರಿಯನ್ನು ಅಲ್ಲಿಗೆ ಸ್ಥಳಾಂತರಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದೇನೆ.
– ಕುಂಞಿ ಅಹಮ್ಮದ್‌ ತಹಶೀಲ್ದಾರರು, ಸುಳ್ಯ

ಉಮೇಶ್‌ ಮಣಿಕ್ಕಾರ

ಟಾಪ್ ನ್ಯೂಸ್

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.