Puttur: ಮಹಿಳೆಗೆ ಕಾರು ಢಿಕ್ಕಿ; ಗಾಯ
Team Udayavani, Aug 7, 2024, 7:55 PM IST
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಕಾರೊಂದು ಢಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಒಳಮೊಗ್ರು ಗ್ರಾಮದ ಖತೀಜಮ್ಮ ಎಂಬವರು ಗಾಯಗೊಂಡವರು.
ಕುಂಬ್ರದ ಅಣ್ಣನ ಮನೆಗೆ ಹೋಗಿ ಹಿಂದಿರುಗಿ ಮನೆಗೆ ಬರುವ ಸಲುವಾಗಿ ಕುಂಬ್ರದಲ್ಲಿರುವ ಸರ್ವಿಸ್ ಸ್ಟೇಷನ್ ಬಳಿಯ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಖತೀಜಮ್ಮನನ್ನು ಅವರ ಪುತ್ರ, ಕಾರು ಚಾಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.