ಡೆಂಗ್ಯೂ ಜ್ವರಕ್ಕೆ ಪುತ್ತೂರಿನಲ್ಲಿ ಎರಡನೇ ಬಲಿ: ಮಹಿಳೆ ಸಾವು
Team Udayavani, Jun 19, 2020, 11:59 AM IST
ಪುತ್ತೂರು: ಡೆಂಗ್ಯೂ ಜ್ವರದಿಂದ ವಿವಾಹಿತ ಮಹಿಳೆ ಜೂ. 18 ರಂದು ತಡರಾತ್ರಿ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ನಜೀರ್ ಮಾಸ್ಟರ್ ಅವರ ಪತ್ನಿ ನಸೀಮಾ (32) ಮೃತಪಟ್ಟ ಮಹಿಳೆ.
ನಸೀಮಾ ಅವರು ಕಳೆದ ಒಂದು ವಾರದಿಂದ ಜ್ವರ ದಿಂದ ಬಳಲುತ್ತಿದ್ದು ಪುತ್ತೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ಮೃತರು ಪತಿ, ಮೂವರು ಪುತ್ರರನ್ನು ಅಗಲಿದ್ದಾರೆ.
ಪುತ್ತೂರು ತಾಲೂಕಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಲಿಯಾದ ಎರಡನೆ ಪ್ರಕರಣ ಇದಾಗಿದ್ದು, ವಾರದ ಹಿಂದೆ ಬೆಟ್ಟಂಪಾಡಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.