ಪುತ್ತೂರು: ಮಹಿಳಾ ಸಾಂತ್ವನ ಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲ

ಹದಿನಾಲ್ಕು ವರ್ಷಗಳ ಹಿಂದೆ ಕೇಂದ್ರ ಪ್ರಾರಂಭ; ಮಹಿಳೆಯರ ಸಶಕ್ತೀಕರಣದ ಉದ್ದೇಶ

Team Udayavani, Aug 8, 2022, 11:48 AM IST

3

ಪುತ್ತೂರು: ಮಹಿಳಾ ದೂರು ದುಮ್ಮಾನಗಳಿಗೆ ನ್ಯಾಯ ಕಲ್ಪಿಸಲೆಂದು ಇರುವ ಪುತ್ತೂರಿನ ಸಾಂತ್ವನ ಕೇಂದ್ರಕ್ಕೆ ಸ್ವಂತ ಸೂರಿಲ್ಲದ ಸ್ಥಿತಿ.

ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ, ನ್ಯಾಯ ಕಂಡುಕೊಳ್ಳುವ ದೃಷ್ಟಿಯಿಂದ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸಾಂತ್ವನ ಕೇಂದ್ರವೀಗ ಸೂರಿನ ನಿರೀಕ್ಷೆಯಲ್ಲಿ ಕಾಯುತ್ತಿದೆ.

ಬಂಟ್ವಾಳದಲ್ಲೂ ಆರಂಭ

ಪುತ್ತೂರಿನಲ್ಲಿ 2008ರಲ್ಲಿ ಜನಶಿಕ್ಷಣ ಟ್ರಸ್ಟ್‌ನಡಿ ಮಹಿಳಾ ಸಾಂತ್ವನ ಕೇಂದ್ರ ಆರಂಭಗೊಂಡಿತ್ತು. ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ಅವರ ಸಮಸ್ಯೆ, ಸಂಕಷ್ಟ, ದೌರ್ಜನ್ಯಗಳಿಗೆ ಧ್ವನಿಯಾಗಿ ಆಪ್ತ ಸಮಾಲೋಚನೆ, ಸಶಕ್ತೀಕರಣ, ಸಮಾನತೆ, ನ್ಯಾಯ, ಕಾನೂನು ನೆರವುಗಳನ್ನು ನೀಡುವ ಕಾರ್ಯ ನಡೆಯುತ್ತಿದೆ. ಇದರ ಪ್ರೇರಣೆಯಾಗಿ ಬಂಟ್ವಾಳದಲ್ಲೂ ಜನಶಿಕ್ಷಣ ಟ್ರಸ್ಟ್‌ ಮೂಲಕ ಕೇಂದ್ರ ಆರಂಭಗೊಂಡು ಕಾರ್ಯ ನಿರ್ವಹಿಸುತ್ತಿದೆ.

ನಗರ ಸಭೆಯಿಂದ ಸ್ಥಳಾಂತರ

ಪುತ್ತೂರು ಮಿನಿ ವಿಧಾನಸೌಧದ ಬಳಿಯ ನಗರಸಭೆಯ ಹಳೆಯ ಕಟ್ಟಡದ ಸನಿಹದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಾಂತ್ವನ ಕೇಂದ್ರ ಕಚೇರಿಯನ್ನು ಸ್ಥಳಾಂತರಿಸುವಂತೆ ನಗರಸಭೆ ಸೂಚಿಸಿತ್ತು. ನಗರ ಸಭೆಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸ ಗಳಿಗೆ ಆ ಜಾಗ ಬೇಕಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ತಿಳಿಸಿದೆ. ಆದರೆ ಆ ಕಟ್ಟಡ ನೆಲಸಮ ಮಾಡದೆ ಹಾಗೆಯೇ ಇದ್ದು, ಸುತ್ತಲೂ ಪೊದೆಗಳು ಬೆಳೆದು ಕಟ್ಟಡ ಶಿಥಿಲಗೊಳ್ಳುತ್ತಿದೆ. ಸದ್ಯಕ್ಕೆ ಮಹಿಳಾ ಸಾಂತ್ವನ ಕೇಂದ್ರವು ತಾ.ಪಂ. ಸಾಮರ್ಥ್ಯ ಸೌಧಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸುತ್ತಿದೆ.

ಮಹಿಳಾ ಸಾಂತ್ವನಕ್ಕೆ ಸಂಬಂಧಿಸಿದ ಚಟುವಟಿಕೆಗಳು ಗೌಪ್ಯ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ಈಗ ಇರುವ ಸ್ಥಳ ಪ್ರಕ್ರಿಯೆಗಳಿಗೆ ಅಷ್ಟು ಸೂಕ್ತವಾದದ್ದು ಅಲ್ಲ. ಮಹಿಳೆಗೆ ತೊಂದರೆಯಾದ ಸಂದರ್ಭದಲ್ಲಿ ಕೌನ್ಸೆಲಿಂಗ್‌, ವಿಚಾರಣೆ ಸೇರಿದಂತೆ ನಾಲ್ಕು ಗೋಡೆಗಳ ಮಧ್ಯೆ ಪ್ರಕ್ರಿಯೆಗಳನ್ನು ನಡೆಸಬೇಕಾಗಿರುವುದರಿಂದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಪ್ರತ್ಯೇಕ ಕಚೇರಿಯ ಅನಿವಾರ್ಯ ಇದೆ.

ಜನ ದಟ್ಟಣೆಯಿಂದ ದೂರ ಇರುವ ಸ್ಥಳವಾಗಿದ್ದರೆ ಕಾರ್ಯ ನಿರ್ವಹಣೆಗೆ ಹೆಚ್ಚು ಅನುಕೂಲ. ಜನಶಿಕ್ಷಣ ಟ್ರಸ್ಟ್‌ ಮೂಲಕ ನಡೆಯುತ್ತಿರುವುದರಿಂದ ಸರಕಾರದ ದೊಡ್ಡ ಮೊತ್ತದ ಅನುದಾನ ಸಿಗುತ್ತಿಲ್ಲ. ಅಲ್ಪ ಅನುದಾನದಲ್ಲಿ ಪ್ರತ್ಯೇಕ ಜಾಗ, ಕಟ್ಟಡ ನಿರ್ಮಾಣ ಸಾಧ್ಯವಿಲ್ಲ. ಸದ್ಯ ಸರಕಾರದ ಅನುದಾನ ನಿರ್ವಹಣೆ, ಸಿಬಂದಿ ವೇತನಕ್ಕೆ ಮಾತ್ರ ಸಾಧ್ಯವಾಗುತ್ತಿದೆ. ಈ ಕಾರಣದಿಂದ ಶಾಸಕ, ಸಂಸದರ ಮೂಲಕ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಲಭಿಸಬೇಕಿದೆ.

ಸಹಕಾರ ಅಗತ್ಯ: ಸಾಂತ್ವನ ಕೇಂದ್ರ ಸಮುದಾಯಕ್ಕೆ ಮತ್ತಷ್ಟು ಹತ್ತಿರವಾಗಿಸುವ ನಿಟ್ಟಿನಲ್ಲಿ ಹೆಚ್ಚಿನ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ, ಸ್ವಂತ ಕಟ್ಟಡಕ್ಕಾಗಿ ಜನ ಪ್ರತಿನಿಧಿಗಳು, ಸಮಾಜದ ದಾನಿಗಳು ಸಹಕಾರ ನೀಡುವ ಅಗತ್ಯವಿದೆ. –ಕೃಷ್ಣ ಮೂಲ್ಯ, ನಿರ್ದೇಶಕರು, ಜನಶಿಕ್ಷಣ ಟ್ರಸ್ಟ್‌.

ಪ್ರತ್ಯೇಕ ಕಟ್ಟಡ ಅಗತ್ಯ: ಮಹಿಳಾ ಸಾಂತ್ವನ ಕೇಂದ್ರದ ಮೂಲಕ ಸುಮಾರು 1,800 ಪ್ರಕ ರಣ ಗಳು ಇತ್ಯರ್ಥಗೊಂಡಿವೆ. 18 ವರ್ಷ ಮೇಲ್ಪಟ್ಟ ಮಹಿಳೆಯರು ಎದುರಿಸುತ್ತಿರುವ ತೊಂದರೆಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿ ಸರಿ ಪಡಿಸುವ ಕೆಲಸ ಆಗಿದೆ. ಪ್ರತ್ಯೇಕ ಕಟ್ಟಡವಿದ್ದರೆ ಕೇಂದ್ರದ ಚಟುವಟಿಕೆಗಳಿಗೆ ಅನುಕೂಲ. –ನಿಶಾ ಪ್ರಿಯ, ಸಾಂತ್ವನ ಕೇಂದ್ರದ ಮೇಲ್ವಿಚಾರಕರು.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.