ಯಕ್ಷಗಾನ ಕಲಾವಿದ ಪಕೀರರ ಸಂಸ್ಮರಣೆ
Team Udayavani, May 9, 2019, 7:22 AM IST
ಉಪ್ಪಿನಂಗಡಿ: ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಮತ್ತು ನಾಟ್ಯ ಗುರುವಾಗಿ ಪಕೀರ ಅವರ ಕಲಾಸೇವೆ ಸ್ಮರಣೀಯ ಎಂದು ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ಸ್ಮರಿಸಿದರು.
ನಾಳ ಶ್ರೀ ದುರ್ಗಾ ಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ವತಿಯಿಂದ ಗೇರುಕಟ್ಟೆಯಲ್ಲಿ ಆಯೋಜಿ ಸಲಾಗಿದ್ದ ಸುಂಕದಕಟ್ಟೆ ಮೇಳದ ಯಕ್ಷಗಾನ ಪ್ರದರ್ಶನದಲ್ಲಿ ಜರಗಿದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅತ್ಯಂತ ಕೆಳಸ್ತರದ ಕುಟುಂಬದಿಂದ ಬಂದಿದ್ದರೂ ಸಾಧನೆಯಿಂದ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಹಾಗೂ ಮಂಗಳೂರು ವಿ.ವಿ. ಕರಾವಳಿ ಯಕ್ಷಗಾನ ಸಮ್ಮೇಳನದಲ್ಲಿ ಗೌರವಕ್ಕೆ ಪಾತ್ರರಾದ ಪಕೀರ ಅವರು, ಶಿಕ್ಷಣ ಇಲಾಖೆಯಲ್ಲಿ ನಾಲ್ಕು ದಶಕಗಳ ಸೇವೆಯೊಂದಿಗೆ ವೃತ್ತಿ ಮತ್ತು ಪ್ರವೃತ್ತಿಗಳಲ್ಲಿ ಮಾದರಿಯಾಗಿದ್ದರು ಎಂದು ತಿಳಿಸಿದರು.
ವೇದಿಕೆಯಲ್ಲಿ ಕಳಿಯ ಗ್ರಾ.ಪಂ. ಸದಸ್ಯ ಬಿ. ತುಕಾರಾಮ, ರಾಘವೇಂದ್ರ ಭಾಂಗಿನ್ನಾಯ ಕುಂಟಿನಿ, ಮೇಳದ ಸಂಚಾಲಕ ಯೋಗೀಶ ಸುವರ್ಣ ಉಪಸ್ಥಿತರಿದ್ದರು. ಸಂಘಟಕರಾದ ರಾಘವ ಎಚ್. ಗೇರುಕಟ್ಟೆ ಸ್ವಾಗತಿಸಿ, ವಂದಿಸಿದರು. ಕಲಾವಿದ ದಿನೇಶ ರೈ ಕಡಬ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಾಗರ ಪಂಚಮಿ ಯಕ್ಷಗಾನ ಪ್ರದರ್ಶನ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.