ಯೋಗಿ ರೋಡ್‌ ಶೋ: ಬಂಟ್ವಾಳದ ಕೇಸರಿ ಪಡೆಯಲ್ಲಿ ಹೊಸ ಸಂಚಲನ

ರಾಜೇಶ್‌ ನಾೖಕ್‌ ಗೆಲ್ಲಿಸುವಂತೆ ಕರೆ

Team Udayavani, May 7, 2023, 6:15 PM IST

1-w-wqe

ಬಂಟ್ವಾಳ: ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಪರ ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ನಡೆಸಿದ ಬೃಹತ್‌ ರೋಡ್‌ ಶೋ ಬಂಟ್ವಾಳದ ಕೇಸರಿ ಪಡೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು-ಅಭಿಮಾನಿಗಳು ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದರು.

ರೋಡ್‌ ಶೋ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಕ್ಷೇತ್ರದ ಮೂಲೆ ಮೂಲೆಯಿಂದ ಕಾರ್ಯಕರ್ತರು ತಂಡೋಪತಂಡವಾಗಿ ಬಿ.ಸಿ.ರೋಡಿನತ್ತ ಆಗಮಿಸಿದರು. ರೋಡ್‌ ಶೋ ಆರಂಭಗೊಂಡ ಕೈಕಂಬದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೂ ಜನತೆ ರೋಡ್‌ ಶೋನಲ್ಲಿ ಪಾಲ್ಗೊಳ್ಳುವ ಜತೆಗೆ ಹೆದ್ದಾರಿ ಇಕ್ಕೆಲಗಳು, ಬಹುಮಹಡಿಯ ಕಟ್ಟಡಗಳ ಮುಂದೆ ನಿಂತು ಯೋಗಿಯತ್ತ ಕೈ ಬೀಸಿದರು. ಕಾರ್ಯಕರ್ತರು ತಮ್ಮ ಮೊಬೈಲ್‌ಗ‌ಳಲ್ಲಿ ವಿಡಿಯೋ, ಪೋಟೊಗಳನ್ನು ಕ್ಲಿಕ್ಕಿಸಿ ಯೋಗಿಯನ್ನು ಸಂಭ್ರಮೋತ್ಸಾಹದಿಂದ ಸ್ವಾಗತಿಸಿದರು.

ರೋಡ್‌ ಶೋ ಮುಕ್ತಾಯಗೊಂಡು ಯೋಗಿಯವರ ಮಾತಿಗೆ ಮೊದಲು ಅಭ್ಯರ್ಥಿ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಆಂಜನೇಯನ ಮೂರ್ತಿಯನ್ನು ನೀಡಿ ಗೌರವಿಸಿದರು. ಜತೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಮೂರ್ತಿಯನ್ನು ಕೂಡ ಯೋಗಿ ಅವರಿಗೆ ನೀಡಲಾಯಿತು. ಅಭಿಮಾನಿಯೊಬ್ಬರು ಬಿಡಿಸಿದ ಯೋಗಿ ಆದಿತ್ಯನಾಥ್‌ ಅವರ ಲೀಫ್‌ ಆರ್ಟ್‌ ಪ್ರೇಮ್‌ ಅನ್ನು ಯೋಗಿ ಅವರಿಗೆ ಹಸ್ತಾಂತರಿಸಲಾಯಿತು.

ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್‌ ಮೂಡಬಿದಿರೆ ಅವರು ರೋಡ್‌ ಶೋ ವಾಹನದಲ್ಲಿ ಯೋಗಿ ಹಾಗೂ ಬಿಜೆಪಿ ಅಭ್ಯರ್ಥಿಗೆ ಸಾಥ್‌ ನೀಡಿದ್ದು, ಉಳಿದಂತೆ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಚುನಾವಣಾ ಉಸ್ತುವಾರಿ ರವಿಶಂಕರ್‌ ಮಿಜಾರು, ಬೂಡಾ ಅಧ್ಯಕ್ಷ ಬಿ.ದೇವದಾಸ್‌ ಶೆಟ್ಟಿ ಮೊದಲಾದ ಪ್ರಮುಖರು ರೋಡ್‌ ಶೋದಲ್ಲಿ ಪಾಲ್ಗೊಂಡಿದ್ದರು.
ಸಂಜೆ 6.15ರ ಸುಮಾರಿಗೆ ಯೋಗಿ ಅವರಿದ್ದ ಹೆಲಿಕಾಪ್ಟರ್‌ ಮುಗಿಲೆತ್ತರದಲ್ಲಿ ಕಾಣುತ್ತಿದ್ದಂತೆ ಕಾರ್ಯಕರ್ತರು ಯೋಗಿಯ ಕುರಿತು ಜಯಘೋಷವನ್ನು ಹಾಕಿದ್ದು, ಉಳಿದಂತೆ ರೋಡ್‌ ಶೋ ಉದ್ದಕ್ಕೂ ಬಿಜೆಪಿ ಪಕ್ಷದ ಜತೆಗೆ ಪ್ರಧಾನಿ ಮೋದಿಯವರಿಗೆ ಜಯಘೋಷವನ್ನು ಹಾಕಿದರು.

ಯೋಗಿಯವರು ತಮ್ಮ ಮಾತಿನ ಸಂದರ್ಭ ಶಾಸಕ ರಾಜೇಶ್‌ ನಾೖಕ್‌ ಅವರ ಹೆಸರನ್ನು ಪ್ರಸ್ತಾಪಿಸುತ್ತಿದ್ದಂತೆ ಸೇರಿದ್ದ ಕಾರ್ಯಕರ್ತರು ಜೋರಾಗಿ ಜೈಕಾರ ಕೂಗಿದರು. ಜತೆಗೆ ಮಾತಿನುದ್ದಕ್ಕೂ ಭಜರಂಗ ದಳ ನಿಷೇಧಿಸುವ ಕುರಿತ ಕಾಂಗ್ರೆಸ್‌ ಹೇಳಿಕೆಯನ್ನು ಖಂಡಿಸುತ್ತಾ, ಕಾಂಗ್ರೆಸ್‌ ಪಿಎಫ್‌ಐ ಸಂಘಟನೆಗೆ ಪ್ರೋತ್ಸಾಹ ನೀಡಿದೆ ಎಂದು ಆರೋಪಿಸಿ ಅದಕ್ಕೆ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡಬೇಕು.

ಸ್ಥಳೀಯ ಕ್ಷೇತ್ರಗಳಿಗೆ ಪ್ರಣಾಮ
ಸ್ಥಳೀಯ ಕ್ಷೇತ್ರಗಳಾದ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ದೇವರು, ಶ್ರೀ ಮಹಾಲಿಂಗೇಶ್ವರ ದೇವರು, ಧರ್ಮಸ್ಥಳ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವರು, ನಂದಾವರ ಶ್ರೀ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ ಮೊದಲಾದ ದೇವರುಗಳಿಗೆ ಪ್ರಣಾಮಗಳನ್ನು ಸಲ್ಲಿಸಿ ಯೋಗಿ ತಮ್ಮ ಮಾತನ್ನು ಪ್ರಾರಂಭಿಸಿದರು.

ಮತ್ತೆ ರಾಜೇಶ್‌ ನಾೖಕ್‌ರನ್ನು ಗೆಲ್ಲಿಸಿ
2018ರಲ್ಲಿಯೂ ನಾನು ರಾಜೇಶ್‌ ನಾೖಕ್‌ ಅವರ ಪರವಾಗಿ ಮತಯಾಚನೆ ನಡೆಸಿದ್ದೆ, ಅವರನ್ನು ಅತ್ಯಧಿಕ ಬಹುಮತದಿಂದ ಆರಿಸುವಂತೆ ವಿನಂತಿಸಿದ್ದೆ, ಅದಕ್ಕೆ ನೀವೆಲ್ಲರೂ ಅಭೂತಪೂರ್ವವಾಗಿ ಸ್ಪಂದಿಸಿ, ಅವರನ್ನು ಗೆಲ್ಲಿಸಿದೀªರಿ, ಅದರ ಬಳಿಕ ಬಂಟ್ವಾಳ ಕ್ಷೇತ್ರ ಅಮೋಘ ಪ್ರಗತಿಗೆ ಸಾಕ್ಷಿಯಾಗಿದೆ, ಇನ್ನೊಮ್ಮೆ ಅವರನ್ನು ಗೆಲ್ಲಿಸಿ, ಕ್ಷೇತ್ರದ ಮತ್ತಷ್ಟು ಪ್ರಗತಿಗೆ ಕಾರಣಕರ್ತರಾಗಿ ಎಂದು ಕರೆಯಿತ್ತರು.

ಅಯೋಧ್ಯೆಗೆ ಸ್ವಾಗತಿಸಿದ ಯೋಗಿ
2024ರಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ಭವ್ಯ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಅಲ್ಲಿಗೆ ನಿಮ್ಮನ್ನು ರಾಮನ ಭಕ್ತನಾಗಿ ಸ್ವಾಗತಿಸುತ್ತೇನೆ ಎಂದು ಯೋಗಿ ಸರ್ವರನ್ನೂ ಆಮಂತ್ರಿಸಿದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.